ಉಡುಪಿ:ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳ ಸಾರಿಗೆ ಮುಷ್ಕರ ಹಿನ್ನೆಲೆ, ವಿಶೇಷ ಬಸ್ಸುಗಳ ವ್ಯವಸ್ಥೆ

ಉಡುಪಿ: ಜಿಲ್ಲೆಯಲ್ಲಿ ಇಂದಿನಿಂದ (ಆ.5) ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯವರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆ, ಸಾರ್ವಜನಿಕರಿಗೆ ಉಂಟಾಗುವ ಸಂಚಾರ ವ್ಯತ್ಯಯ ತಪ್ಪಿಸಲು ಮಾಡಲಾದ ವಿಶೇಷ ಬಸ್ಸುಗಳ ವ್ಯವಸ್ಥೆಗೆಸಂಬಂಧಿಸಿದಂತೆ ಮಾಹಿತಿ ನೀಡಲು ಹಾಗೂ ದೂರುಗಳನ್ನು ಸ್ವೀಕರಿಸಲು ಮಣಿಪಾಲದ ಪ್ರಾದೇಶಿಕ ಸಾರಿಗೆ ಅಧಿಕಾರಿಯವರಕಛೇರಿಯಲ್ಲಿ ಮುಷ್ಕರ ಮುಗಿಯುವವರೆಗೆ ದಿನದ 24 ಗಂಟೆ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 0820-2575137, 9449864020 ಹಾಗೂ 7019244639 ಅನ್ನು ತೆರೆಯಲಾಗಿರುತ್ತದೆ. ಉಡುಪಿ ಸರ್ಕಾರಿ ಬಸ್ ನಿಲ್ದಾಣ, ಕುಂದಾಪುರ ಸರ್ಕಾರಿ ಬಸ್ ನಿಲ್ದಾಣ ಹಾಗೂ ಕಾರ್ಕಳ ಸರ್ಕಾರಿ […]
ಉಡುಪಿ:ಮಾಸ್ಟರ್ ಆಫ್ ವಿಜ್ಯುಯಲ್ ಆಟ್ಸ್ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಮಾಸ್ಟರ್ ಆಫ್ ವಿಜ್ಯುಯಲ್ ಆಟ್ಸ್ (ಎಂ.ವಿ.ಎ) ಪ್ರಥಮ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಪ್ರಥಮ ಬಿ.ವಿ.ಎ ಸ್ನಾತಕ ಪದವಿಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಯು.ಯು.ಸಿ.ಎಂ.ಎಸ್ ಪೋರ್ಟಲ್ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಎಂ.ವಿ.ಎ ಪ್ರವೇಶಾತಿಗಾಗಿ ಚಿತ್ರಕಲೆ ಮತ್ತು ಶಿಲ್ಪಕಲೆ ವಿಭಾಗಕ್ಕೆ ಅರ್ಜಿ ಸಲ್ಲಿಸಲು ಆಗಸ್ಟ್ 7 ಕೊನೆಯ ದಿನ. ಆ.11 ರಂದು ಬೆಳಗ್ಗೆ 11 ಗಂಟೆಗೆ […]
ಉಡುಪಿ:ಪಿ.ಎಂ.ಇ.ಜಿ.ಪಿ ಯೋಜನೆಯ ಕುರಿತು ಸುಳ್ಳು ಮಾಹಿತಿಯ ಬಗ್ಗೆ ಎಚ್ಚರವಹಿಸಿ

ಉಡುಪಿ: ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ ಯೋಜನೆ (ಪಿ.ಎಂ.ಇ.ಜಿ.ಪಿ) ಯನ್ನು ಜಿಲ್ಲಾ ಕೈಗಾರಿಕಾ ಕೇಂದ್ರ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ಮುಖಾಂತರಅನುಷ್ಟಾನಗೊಳಿಸಲಾಗುತ್ತಿದೆ. ಆದರೆ ಸ್ವಂತ ಉದ್ಯೋಗ ನಡೆಸುವವರಿಗೆ ಕೇಂದ್ರ ಸರಕಾರದಿಂದ ಶೇ. 35 ಸಬ್ಸಿಡಿಯೊಂದಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ದೊರಕಿಸಿಕೊಡುವುದಾಗಿ ಮೊಬೈಲ್ ಸಂಖ್ಯೆ: 7338492769 / 7411795969 ಅನ್ನು ಕರಪತ್ರದಲ್ಲಿ ಮುದ್ರಿಸಿ ಜಿಲ್ಲೆಯಲ್ಲಿ ಪ್ರಚಾರ ಪಡಿಸುತ್ತಿರುವುದು ಕಂಡು ಬಂದಿರುತ್ತದೆ. ಪಿಎಂಇಜಿಪಿ ಯೋಜನೆಯ ಅನುಷ್ಟಾನದ ಬಗ್ಗೆ ಯಾವುದೇ […]
ಉಡುಪಿ:ಎಣ್ಣೆಕಾಳು ಕೊಯ್ಲೋತ್ತರ ಘಟಕಕ್ಕೆ ಮೂಲಸೌಕರ್ಯ ಕಲ್ಪಿಸಲು ಅರ್ಜಿ ಆಹ್ವಾನ

ಉಡುಪಿ: ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ಎಣ್ಣೆಕಾಳು ಕೊಯ್ಲೋತ್ತರ ಘಟಕಕ್ಕೆ ಮೂಲ ಸೌಕರ್ಯ ಕಲ್ಪಿಸಲು ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು, ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲ ಆಗುವಂತೆ ಹಾಗೂ ಎಣ್ಣೆಕಾಳು ಬೆಳೆ ಉತ್ತೇಜಿಸಲು ಈ ಯೋಜನೆ ಅನುಷ್ಟಾನಗೊಳಿಸಲಾಗುತ್ತಿದೆ. ಎಣ್ಣೆಕಾಳು ಕೊಯ್ಲೋತ್ತರ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳಾದ ಎಣ್ಣೆ ತೆಗೆಯುವ ಯಂತ್ರ, ಆಯಿಲ್ ಫಿಲ್ಟರ್, ಡಿಕಾರ್ಟಿಕೇಟರ್, ಆಯಿಲ್ ಪಿಲ್ಲಿಂಗ್ ಮೆಷಿನ್, ಆಯಿಲ್ ಕೇಕ್ ಕಟ್ಟಿಂಗ್ ಮಿಷನ್ ಇತ್ಯಾದಿಗಳನ್ನು ಖರೀದಿಸಲು ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳು, […]
ಉಡುಪಿ:ಶಿಷ್ಯವೇತನ : ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡಲು ಅರ್ಹ ಆಸಕ್ತ ಕಾನೂನುಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಕಚೇರಿಗಳ ಸಂಕೀರ್ಣ, ಬಿ ಬ್ಲಾಕ್, ರಜತಾದ್ರಿ, ಕೊಠಡಿ ಸಂಖ್ಯೆ: 304, ಎರಡನೇ ಮಹಡಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820- 2574881 ಅಥವಾ 2573881 […]