ಉಡುಪಿ:ಆ.25 ವೈಜ್ಞಾನಿಕ ತಾರಸಿ ಕೃಷಿ ತರಬೇತಿ

ಉಡುಪಿ: ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಗಸ್ಟ್ 25 ರಂದು ಒಂದು ದಿನದ ವೈಜ್ಞಾನಿಕ ತಾರಸಿ ಕೃಷಿತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದ್ದು, ವಿವಿಧ ಬಗೆಯ ಬಳ್ಳಿ ತರಕಾರಿಗಳು, ಗಿಡ ತರಕಾರಿಗಳು ಮತ್ತು ಸೊಪ್ಪುತರಕಾರಿಗಳನ್ನು ಬೆಳೆಸುವ ವೈಜ್ಞಾನಿಕ ಮಾಹಿತಿಯನ್ನು ಕೃಷಿ ವಿಜ್ಞಾನ ಕೇಂದ್ರ ಮತ್ತು ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ವಿಜ್ಞಾನಿಗಳಿಂದ ನೀಡಲಾಗುವುದು. ಆಸಕ್ತ ಯುವಕ, ಯುವತಿಯರು ಮತ್ತು ನಗರವಾಸಿಗಳು ಆಗಸ್ಟ್ 23 ರ ಒಳಗಾಗಿ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 8722247552 ಅನ್ನು ಸಂಪರ್ಕಿಸಬಹುದಾಗಿದೆ ಎಂದು […]

ಉಡುಪಿ:ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳ ಪ್ರತಿಷ್ಠಾನಕ್ಕೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ

ಉಡುಪಿ: ಜಿಲ್ಲೆಯಲ್ಲಿ ಮುಂಬರುವ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ, ಸೌಹಾರ್ದಯುತವಾಗಿಶ್ರದ್ಧಾ ಭಕ್ತಿಯಿಂದ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣೇಶ ಹಬ್ಬದ ಆಚರಣೆಯ ಸಲುವಾಗಿ ಕಾನೂನು ಸುವ್ಯವಸ್ಥೆಗೆ ಸಂಬಂಧಪಟ್ಟಂತೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪರಿಸರ ಸ್ನೇಹಿ ಮಣ್ಣಿನ ಗಣಪತಿಗಳನ್ನು ಪ್ರತಿಷ್ಠಾನ ಮಾಡುವುದರಿಂದ ಪರಿಸರಕ್ಕೆ ಮಾರಕವಾಗುವುದನ್ನು ತಪ್ಪಿಸಬಹುದು. ಪಿ.ಓ.ಪಿ ಯಿಂದ ನಿರ್ಮಿಸಿರುವ ಹಾಗೂ ಬಣ್ಣಲೇಪಿತ ಗಣೇಶ ಮೂರ್ತಿಗಳನ್ನು ನೀರಿನಲ್ಲಿ […]

ಉಡುಪಿ:ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಬೆಳೆಗಳ ನಿಖರ ವರದಿ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ..ಕೆ

ಉಡುಪಿ: ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಹಾನಿಯ ವಿವರಗಳನ್ನು ನಿಖರವಾಗಿನಿಗಧಿತ ಕಾಲಾವಧಿಯ ಒಳಗೆ ಪೂರ್ಣಗೊಳಿಸಿ, ವರದಿ ನೀಡಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ವಾಡಿಕೆ ಮಳೆಗಿಂತ ಹೆಚ್ಚು ಮಳೆಯಿಂದಾಗಿ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಹಾನಿ ಉಂಟಾಗಿದೆ. ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು […]

ಉಡುಪಿ:ಐ.ಟಿ.ಐ ನಲ್ಲಿ ಬಾಕಿ ಉಳಿದ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಉಡುಪಿ: ನಗರದ ಮಣಿಪಾಲದ ಪ್ರಗತಿನಗರದಲ್ಲಿರುವ ಸರಕಾರಿ ಐ.ಟಿ.ಐ ಯಲ್ಲಿ ಉದ್ಯೋಗ ಖಾತರಿಯುಳ್ಳಆರ್.ಎ.ಸಿ ಕಂಪ್ಯೂಟರ್, ಫಿಟ್ಟರ್ ಹಾಗೂ ಆಟೋ ಮೊಬೈಲ್ ಕೋರ್ಸುಗಳಲ್ಲಿ ಕೆಲವೇ ಕೆಲವು ಸೀಟುಗಳು ಬಾಕಿ ಉಳಿದಿದ್ದು, ಆಸಕ್ತ ಎಸ್.ಎಸ್.ಎಲ್.ಸಿ /ಪಿ.ಯು.ಸಿ ಉತ್ತೀರ್ಣರಾದ ಅಭ್ಯರ್ಥಿಗಳು ಖುದ್ದಾಗಿ ಸಂಸ್ಥೆಗೆ ಹಾಜರಾಗಿ ಮೂಲ ದಾಖಲೆ ಹಾಗೂ ಪ್ರವೇಶ ಶುಲ್ಕದೊಂದಿಗೆ ಸ್ಥಳದಲ್ಲೇ ಪ್ರವೇಶ ಪಡೆದುಕೊಳ್ಳಬಹುದಾಗಿದೆ. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪ್ರಗತಿನಗರ, ಮಣಿಪಾಲ ಉಡುಪಿ ಇಲ್ಲಿಗೆ ಖುದ್ದಾಗಿ ಅಥವಾ […]