ಉಡುಪಿ:ಅಲ್ಪಸಂಖ್ಯಾತರ ಕಾನೂನು ಪದವೀಧರರಿಗೆ ಶಿಷ್ಯವೇತನ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು ಮತ್ತು ಸಿಖ್ಖರು) ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ, ಶಿಷ್ಯವೇತನ ಮಂಜೂರು ಮಾಡಲು ಅರ್ಹ ಆಸಕ್ತ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ […]
ಉಡುಪಿ:ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ವತಿಯಿಂದ ಪ್ರಸಕ್ತ ಸಾಲಿನ ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಆಗಸ್ಟ್ 17 ರಂದು ಕಾಪು ತಾಲೂಕು ಹೆಜಮಾಡಿ ರಾಜೀವ್ ಗಾಂಧಿ ಕ್ರೀಡಾಂಗಣದ ಮೈದಾನದಲ್ಲಿ ನಡೆಯಲಿದ್ದು, ಭಾಗವಹಿಸುವ ಸ್ಪರ್ಧಿಗಳು ಅಂದು ಬೆಳಗ್ಗೆ 9 ಗಂಟೆಯ ಒಳಗಾಗಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ. ಸ್ಪರ್ಧೆಗಳ ವಿವರ: ಪುರುಷರಿಗೆ : ಅಥ್ಲೆಟಿಕ್ಸ್ (100 ಮೀ, 200 ಮೀ, 400 ಮೀ, 800 ಮೀ, 1500 […]
ಉಡುಪಿ:ವಿಕಲಚೇತನರಿಗೆ ವಿವಿಧ ತರಬೇತಿ
ಉಡುಪಿ: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕಗಳ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಅಜ್ಜರಕಾಡು ರೆಡ್‌ಕ್ರಾಸ್ ಭವನದ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ವಾರಕ್ಕೆ 2 ದಿನದಂತೆ (ಸೋಮವಾರ ಹಾಗೂ ಗುರುವಾರ) ಉಚಿತ ಫಿಸಿಯೋಥೆರಪಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್, ಆಡಿಯೋಲಜಿಸ್ಟ್/ಸ್ಪೀಚ್ ಥೆರಪಿಸ್ಟ್ ತಜ್ಞರು ಲಭ್ಯವಿದ್ದು, ದೈಹಿಕ ನ್ಯೂನ್ಯತೆಗೆ, ಬುದ್ಧಿಮಾಂದ್ಯತೆ, […]