ಕಡಿಯಾಳಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದಲ್ಲಿ ವಿಶೇಷ ವರಮಹಾಲಕ್ಷ್ಮೀ ಪೂಜೆ

ಉಡುಪಿ: ಕಡಿಯಾಳಿ ಮಾತೃ ಮಂಡಳಿಯ ವತಿಯಿಂದ 41ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಕಡಿಯಾಳಿಯ ಶ್ರೀ ಮಹಿಷಾಮರ್ದಿನಿ ದೇವಸ್ಥಾನದಲ್ಲಿ ನಡೆಯಿತು. ವೇದಮೂರ್ತಿ ಪಾಡಿಗಾರು ಶ್ರೀನಿವಾಸ್ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ಪೂಜಾ ಕಾರ್ಯಗಳು ನಡೆದವು. ಶ್ರೀದೇವರಿಗೆ ವಿಶೇಷ ಅಲಂಕಾರ, ವಿಶೇಷವಾಗಿ ರಚಿಸಿದ ಮಂಡಲದಲ್ಲಿ ಕಳಶ ಪ್ರತಿಷ್ಠೆ, ಸಾಮೂಹಿಕ ಕುಂಕುಮ ಅರ್ಚನೆ, ಲಲಿತಾ ಸಹಸ್ರನಾಮ ಪಠಣೆ, ಮಹಾಪೂಜೆ ನೆರವೇರಿತು. ಧಾರ್ಮಿಕ ಸಭಾಕಾರ್ಯದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ದೇವಳದ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷರಾದ ವಿಜಯ ರಾಘವೇಂದ್ರ, ಲೇಖಕಿ ಪೂರ್ಣಿಮಾ […]
2030 ಹೊತ್ತಿಗೆ ಸುಮಾರು 220 ಕಿ.ಮೀ ಉದ್ದದ ಮೆಟ್ರೋ ಮಾರ್ಗ: ಮೆಟ್ರೋ ಗುರಿ ಬಿಚ್ಚಿಟ್ಟ ಸಿಎಂ ಸಿದ್ಧರಾಮಯ್ಯ.

ಬೆಂಗಳೂರು: ‘2030ರ ವೇಳೆಗೆ ಬೆಂಗಳೂರು ನಗರದಲ್ಲಿ 220 ಕಿ.ಮೀ ಉದ್ದದ ಮೆಟ್ರೊ ಮಾರ್ಗ ಪೂರ್ಣಗೊಳಿಸಿ, 30 ಲಕ್ಷ ಜನರು ಪ್ರಯಾಣಿಸಲು ಮೂಲಸೌಕರ್ಯ ಕಲ್ಪಿಸುವುದು ನಮ್ಮ ಬದ್ಧತೆಯಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಹಳದಿ ಮೆಟ್ರೊ ರೈಲು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಿದ್ದರಾಮಯ್ಯ ಮಾತನಾಡಿದರು. ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಮಾಹಿತಿ ನೀಡಿದ್ದಾರೆ. ‘ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸಿ ಬೆಂಗಳೂರು ನಗರವನ್ನು ಜಾಗತಿಕ ಆಕರ್ಷಣೆಯ ನಗರವಾಗಿಸುವ ನಿಟ್ಟಿನಲ್ಲಿ ಮೆಟ್ರೊ ಯೋಜನೆ ಪ್ರಮುಖ ಹೆಜ್ಜೆಯಾಗಿದ್ದು, ನಮಗೆಲ್ಲರಿಗೂ ಇದು […]
ಎಂ.ಸಿ.ಸಿ.ಬ್ಯಾಂಕಿನ ಬೆಳ್ಮಣ್ ಶಾಖೆಯಲ್ಲಿ 9ನೇ ಎಟಿಎಮ್ ಉದ್ಘಾಟನೆ

ಕಾರ್ಕಳ: ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ ಗ್ರಾಹಕ ಸೇವೆ ಮತ್ತು ಬ್ಯಾಂಕಿಂಗ್ ಶ್ರೇಷ್ಟತೆಯ ಪ್ರಯಾಣದಲ್ಲಿ ಮತ್ತೊಂದು ಮೈಲಿಗಲ್ಲಾಗಿ ಆಗಸ್ಟ್ 9, 2025 ರಂದು ಬೆಳ್ಮಣ್ ಶಾಖೆಯಲ್ಲಿ ತನ್ನ 9 ನೇ ಎಟಿಎಂ ಅನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷಸಹಕಾರ ರತ್ನ ಅನಿಲ್ ಲೋಬೊ ವಹಿಸಿದ್ದರು. ಎಟಿಎಂ ಅನ್ನುಬೆಳ್ಮನ್‌ನ ಮಾನ್ಯ ಡೆವಲಪರ್ಸ್ ಮತ್ತು ಹೋಟೆಲ್ ಸೂರಜ್ ಇನ್‌ನ ಮಾಲೀಕ ಶ್ರೀ ಶೋಧನ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು. ಬೆಳ್ಮಣ್ ನ ಸೇಂಟ್ ಜೋಸೆಫ್ ಚರ್ಚ್ನನ ಧರ್ಮಗುರುಗಳಾದ ರೆವೆರೆಂಡ್ […]
ಧರ್ಮಸ್ಥಳ: ಪದ್ಮಲತಾ ಪ್ರಕರಣದ ಬಗ್ಗೆ ಮರುತನಿಖೆ ನಡೆಸಿ; ಎಸ್‌ಐಟಿಗೆ ಸಹೋದರಿ ಇಂದ್ರಾವತಿ ದೂರು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಮೂರು ದಶಕಗಳಿಗೂ ಹಿಂದೆ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಪದ್ಮಲತಾ ಅವರ ಸಹೋದರಿ ಸೋಮವಾರ ಪದ್ಮಲತಾ ಪ್ರಕರಣದ ಬಗ್ಗೆ ಮರುತನಿಖೆ ನಡೆಸುವಂತೆ ದೂರು ನೀಡಲು ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ಸೋಮವಾರ ಆಗಮಿಸಿದ್ದಾರೆ. ಪದ್ಮಲತಾ ಅವರ ಸಹೋದರಿ ಇಂದ್ರಾವತಿ ಅವರು ಸಿಪಿಎಂ ಪಕ್ಷದ ಮುಖಂಡ ಬಿ.ಎಂ.ಭಟ್ ಹಾಗೂ ಇತರರೊಂದಿಗೆ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಎಸ್ಐಟಿ ಠಾಣೆಗೆ ತಂಡದ ಹಿರಿಯ ಅಧಿಕಾರಿಗಳು ಆಗಮಿಸಿದ ಬಳಿಕ ಅವರಿಗೆ ದೂರು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.ಸುಮಾರು 39 ವರ್ಷಗಳ ಹಿಂದೆ ಅಂದರೆ […]
ಕಾರ್ಕಳ: ಕುಸಿದು ಬಿದ್ದು ವ್ಯಕ್ತಿ ಮೃತ್ಯು

ಕಾರ್ಕಳ: ಮಾಳ ಚೆಕ್ ಪೊಸ್ಟ್ ಬಳಿ ಕ್ಯಾಂಟಿನ್ ನಡೆಸಿಕೊಂಡಿದ್ದ ವ್ಯಕ್ತಿಯೊಬ್ಬರು ರಾತ್ರಿ ಕ್ಯಾಂಟಿನ್‌ನಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ಮಾಳ ಗ್ರಾಮದ ಮಲ್ಲಾರು ನಿವಾಸಿ ಗಿರೀಶ್ ಪ್ರಭು(49) ಎಂದು ಗುರುತಿಸಲಾಗಿದೆ. ಇವರು ಆ.9ರಂದು ಕ್ಯಾಂಟಿನ್‌ಗೆ ಹೋಗಿ ಕೆಲಸ ಮಾಡಿ ರಾತ್ರಿ 12ಗಂಟೆಗೆ ಮನೆಗೆ ಬಂದು ಮೊಬೈಲ್ ಚಾರ್ಜರ್ ತೆಗೆದುಕೊಂಡು ಕ್ಯಾಂಟಿನ್‌ಗೆ ಹೋಗಿದ್ದರು. ಆ.10ರಂದು ಬೆಳಗ್ಗೆ ಹೋಗಿ ನೋಡುವಾಗ ಗಿರೀಶ್ ಪ್ರಭು ನೆಲದ ಮೇಲೆ ಬಿದ್ದು ಮೃತಪಟ್ಟಿರುವುದು ಕಂಡುಬಂದಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ […]