ಕ್ರಿಕೇಟಿಗ ಎಂ.ಎಸ್ ಧೋನಿ ಹೂಡಿದ್ದ 100 ಕೋಟಿ ಮಾನನಷ್ಟ ಪ್ರಕರಣದ ವಿಚಾರಣೆಗೆ ಆದೇಶಿಸಿದ ಹೈಕೋರ್ಟ್!

ಭಾರತ ಕ್ರಿಕೆಟ್ ತಂಡದ ಮಾಜ ನಾಯಕ ಎಂ.ಎಸ್.ಧೋನಿ ಹೂಡಿದ್ದ 100 ಕೋಟಿ ರೂ. ಮಾನನಷ್ಟ ಪ್ರಕರಣದ ವಿಚಾರಣೆಗೆ ಮದ್ರಾಸ್ ಹೈಕೋರ್ಟ್ ಆದೇಶ ನೀಡಿದೆ. ಧೋನಿ ಹೇಳಿಕೆ ಪಡೆಯಲು ಅಡ್ವೋಕೇಟ್ ಕಮಿಷನರ್ ನೇಮಕಕ್ಕೂ ಆದೇಶ ನೀಡಿದೆ ಎಂದು ವರದಿಯಾಗಿದೆ. ಧೋನಿ ಸಲ್ಲಿಸಿದ್ದ ಮೊಕದ್ದಮೆ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ನ್ಯಾ. ಸಿ.ವಿ.ಕಾರ್ತಿಕೇಯನ್ ವಿಚಾರಣೆಗೆ ಅನುಮತಿ ನೀಡಿದರು ಎನ್ನಲಾಗಿದೆ. ಇದೇ ವೇಳೆ ತನಿಖೆ ಸಹಕಾರ ನೀಡುವುದಾಗಿ ಧೋನಿ ಹೇಳಿದ್ದಾರೆ ಅವರ ಪರ ವಕೀಲರು ಗಮನಕ್ಕೆ ತಂದರು. ಅಕ್ಟೋಬರ್ […]
ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಮಧ್ಯಂತರ ವರದಿ ಪಡೆದು ಸದನದಲ್ಲಿ ಮಂಡಿಸಿ; ಸರಕಾರಕ್ಕೆ ವಿ.ಸುನಿಲ್ ಕುಮಾರ್ ಆಗ್ರಹ

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಸಹಜ ಸಾವುಗಳ ಕುರಿತಎಸ್‌ಐಟಿ ತನಿಖೆ ವಿಚಾರ ವಿಧಾನಸಭೆಯಲ್ಲಿ ಮಂಗಳವಾರ ಪ್ರತಿಧ್ವನಿಸಿತು.ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ವಿ. ಸುನಿಲ್ ಕುಮಾರ್, ‘ಎಸ್‌ಐಟಿಯಿಂದ ಮಧ್ಯಂತರ ವರದಿ ಪಡೆದು ಸದನಕ್ಕೆ ಮಂಡಿಸಬೇಕು’ ಎಂದು ಆಗ್ರಹಿಸಿದರು. ಅದಕ್ಕೆ, ಗೃಹ ಸಚಿವ ಜಿ. ಪರಮೇಶ್ವರ, ‘ಎಸ್‌ಐಟಿ ವರದಿ ನೀಡಿದ ಬಳಿಕವಷ್ಟೇ ಮಾಹಿತಿ ಹಂಚಿಕೊಳ್ಳಲು ಸಾಧ್ಯ’ ಎಂದು ಸಮಜಾಯಿಷಿ ನೀಡಿದರು. ‘ಧರ್ಮಸ್ಥಳದ ವಿಚಾರದಲ್ಲಿ ಸತ್ಯಾಂಶ ಹೊರಬರಬೇಕು ಎಂಬುದರಲ್ಲಿ ಭಿನ್ನಾಭಿಪ್ರಾಯವಿಲ್ಲ. ಆದರೆ, ತನಿಖೆ ನೆಪದಲ್ಲಿ ಹಿಂದೂ ಧಾರ್ಮಿಕಕ್ಷೇತ್ರಗಳನ್ನು ಅವಹೇಳನ ಮಾಡುವ ಪ್ರಕ್ರಿಯೆ […]
ಉಡುಪಿ: ಆಡಿಯೋ ವೈರಲ್ ವಿಚಾರಕ್ಕೆ ವ್ಯಕ್ತಿಯ ಹತ್ಯೆ: ಮೂವರ ಆರೋಪಿಗಳ ಬಂಧನ

ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯನಗರ 9ನೇ ಅಡ್ಡರಸ್ತೆಯಲ್ಲಿ ಆ.12ರಂದು ರಾತ್ರಿ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕಡಿದು ವ್ಯಕ್ತಿಯೊಬ್ಬರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೊಲೆಗೀಡಾದ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ವಿನಯ್ ದೇವಾಡಿಗ (40) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಗಳಾದ ಬ್ರಹ್ಮಾವರ ಕೊಕ್ಕರ್ಣೆಯ ಗಾಂಧಿನಗರ ನಿವಾಸಿಗಳಾದ ಅಜಿತ್(28), ಅಕ್ಷೇಂದ್ರ (34) ಹಾಗೂ ಕೊಕ್ಕರ್ಣೆ ಬೆನಗಲ್ ನಿವಾಸಿ ಪ್ರದೀಪ್ ಆಚಾರ್ಯ ಎಂಬವರು ಪೊಲೀಸರಿಗೆ ಶರಣಾಗಿದ್ದು, ಅವರನ್ನು ಪೊಲೀಸರು ಬಂಧಿಸಿ ವಿಚಾರಣೆಗೆ […]
ಕಾರ್ಕಳ ಕ್ರೈಸ್ಟ್ ಕಿಂಗ್: ಈಜು ಸ್ಪರ್ಧೆಯಲ್ಲಿ ಶೈನಿ ಡಿ’ಸೋಜ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಉಪನಿರ್ದೇಶಕರ ಕಛೇರಿ ಉಡುಪಿ ಇವರ ಆಶ್ರಯದಲ್ಲಿ ಮಣಿಪಾಲದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳ 14/17ರ ವಯೋಮಿತಿಯ ಉಡುಪಿ ಜಿಲ್ಲಾಮಟ್ಟದ ಈಜುಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್ಕಿಂಗ್ ಆಂಗ್ಲಮಾಧ್ಯಮಪ್ರೌಢಶಾಲೆಯ ಒಂಬತ್ತನೇ ತರಗತಿಯ ಶೈನಿ ಡಿಸೋಜರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. 200 ಮೀ ಫ್ರೀ ಸ್ಟೈಲ್‌ನಲ್ಲಿ ಬೆಳ್ಳಿ ಪದಕ, 100 ಮೀ ಫ್ರೀ ಸ್ಟೈಲ್ ಮತ್ತು 100 ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ಕಂಚಿನ ಪದಕಗಳನ್ನುಪಡೆದುಕೊಳ್ಳುವುದರ ಮೂಲಕ ಶೈನಿ ಡಿಸೋಜ […]
ಕೋಟ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶಿಕ್ಷಕ ಮೃತ್ಯು.

ಉಡುಪಿ: ಬೈಕ್ ಹಾಗೂ ಲಾರಿ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕೋಟ ಮಣೂರು ಪಡುಕರೆ ನಿವಾಸಿ ಶಿಕ್ಷಕ ಸಂತೋಷ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಿಗ್ಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಆ.8 ರಂದು ತೆಕ್ಕಟ್ಟೆಯಿಂದ ಕೋಟ ಕಡೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದ ವೇಳೆ ಕೋಟ ಮಣೂರಿನಲ್ಲಿಬೈಕ್ ಗೆ ಹಿಂದಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಂತೋಷ್ ರಸ್ತೆಗೆ ಬಿದ್ದು ತಲೆ ಮತ್ತು ಮುಖ ಕೈಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿ ಮಣಿಪಾಲ ಆಸ್ಪತ್ರೆಯಲ್ಲಿ […]