ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ: ನಟ ಕಮಲ್ ಹಾಸನ್’ಗೆ ಜೀವ ಬೆದರಿಕೆ; ದೂರು ದಾಖಲು

ಚೆನ್ನೈ: ಸನಾತನ ಧರ್ಮದ ವಿರುದ್ಧ ಮಾತನಾಡಿದಕ್ಕೆ ನಟ ಕಮಲ್ ಹಾಸನ್’ಗೆ ಜೀವ ಬೆದರಿಕೆ ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಘಟನೆಯ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಕ್ಕಳ್ ನೀಧಿ ಮೈಯಂ ಪದಾಧಿಕಾರಿಗಳು ಚೆನ್ನೈ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ನಟ ಸೂರ್ಯ ಅವರ ದತ್ತಿ ಸಂಸ್ಥೆ ಅಗರಂ ಫೌಂಡೇಶನ್‌ನ 15ನೇ ವಾರ್ಷಿಕೋತ್ಸವದ ಆಚರಣೆಯಲ್ಲಿ ಕಮಲ್ ನೀಡಿದ ಕೆಲವು ಹೇಳಿಕೆಗಳು ವಿವಾದಾತ್ಮಕವಾಗಿವೆ. ನೀಟ್ ಪರೀಕ್ಷೆಯನ್ನು ಟೀಕಿಸಿದ ಕಮಲ್ ಹಾಸನ್, ಈ ಯುದ್ಧದಲ್ಲಿ, ಶಿಕ್ಷಣಕ್ಕೆ […]
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಗಸ್ಟ್ 15 ರಿಂದ ಪ್ಲಾಸ್ಟಿಕ್ ನಿಷೇಧ.

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಆ. 15ರಿಂದ ಸಂಪೂರ್ಣ ವಾಗಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗುತ್ತಿದೆ. ರಾಜ್ಯ ಸರಕಾರದ ಅಧಿಸೂಚನೆಯಂತೆ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳ ಉತ್ಪಾದನೆ ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಕಡ್ಡಾಡಯವಾಗಿ ನಿಷೇಧಿಸಲಾಗುತ್ತಿದೆ. ದೇವಸ್ಥಾನಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲ ರೀತಿಯ ಪ್ಲಾಸ್ಟಿಕ್ ಸಾಮಗ್ರಿಗಳು ಹಾಗೂ ದೇಗುಲದ ಪರಿಸರದ ಅಂಗಡಿಗಳಲ್ಲಿ, ವಾಣಿಜ್ಯ ಸಂಕೀರ್ಣಗಳಲ್ಲೂ ಏಕಬಳಕೆಯ ಪ್ಲಾಸ್ಟಿಕ್‌ಗಳ ಬಳಸುವಂತಿಲ್ಲ. ಬಳಕೆ ಕಂಡುಬಂದಲ್ಲಿ ರಾಜ್ಯ ಪರಿಸರ ಮಾಲಿನ್ಯ […]
ಉಡುಪಿ:ವಿವಿಧ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಸಮುದಾಯದವರಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಇಲಾಖಾ ವೆಬ್‌ಸೈಟ್‌ನ https://sevasindhuservices.karnataka.gov.in/ ಸೇವಾಸಿಂಧು ಫೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 10 ಕೊನೆಯ ದಿನ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಸಂಬAಧಿಸಿದ ಸೂಕ್ತ ದಾಖಲೆಗಳನ್ನು ಒಂದು ವಾರದ ಒಳಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ (ದೂ.ಸಂಖ್ಯೆ: 0820-2574892) […]
ಉಡುಪಿ: ಸ್ನೇಹಿತರಿಂದಲೇ ವ್ಯಕ್ತಿಯ ಬರ್ಬರ ಹತ್ಯೆ

ಉಡುಪಿ: ವ್ಯಕ್ತಿಯೋರ್ವನನ್ನು ಸ್ನೇಹಿತರೇ ಬರ್ಬರವಾಗಿ ಹತ್ಯೆಗೈದ ಘಟನೆ ಪುತ್ತೂರಿನ ಸುಬ್ರಹ್ಮಣ್ಯ ನಗರದ ಲಿಂಗೋಟ್ಟುಗುಡ್ಡೆಯಲ್ಲಿ ನಡೆದಿದೆ. ವಿನಯ್ ದೇವಾಡಿಗ (40) ಕೊಲೆಯಾದ ವ್ಯಕ್ತಿ. ವಿನಯ್ ಎಂದಿನಂತೆ ಮನೆಯಲ್ಲಿ ಊಟ ಮಾಡಿ ಮಲಗಿದ್ದರು. ನಿನ್ನೆ ರಾತ್ರಿ ಸುಮಾರು 11.45 ಕ್ಕೆ ಬಂದ ದುಷ್ಕರ್ಮಿಗಳು ಜೋರಾಗಿ ಮನೆಯ ಬಾಗಿಲು ಬಡಿದ್ದಾರೆ. ಭಯಗೊಂಡ ಪತ್ನಿ ಮನೆಯ ಬಾಗಿಲು ತೆರೆದಿದ್ದು, ವಿನಯ್ ಇದ್ದಾನ ಎಂದು ಕೇಳಿದ ಮೂವರು ದುಷ್ಕರ್ಮಿಗಳು ತಕ್ಷಣವೇ ಮಾರಕಾಸ್ತ್ರದೊಂದಿಗೆ ಬೆಡ್ ರೂಮ್ ಗೆ ನುಗ್ಗಿ ವಿನಯ್ ಗೆ ಹಲ್ಲೆ ಮಾಡಿದ್ದಾರೆ. ಇದನ್ನು […]
ಉಡುಪಿ:ಆ.16 ರಂದು ಶ್ರೀ ಕೃಷ್ಣ ಜಯಂತಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವು ಆಗಸ್ಟ್ 16 ರಂದು ಬೆಳಗ್ಗೆ 10 ಗಂಟೆಗೆ ನಗರದ ಎಂ.ಜಿ.ಎಂ ಕಾಲೇಜಿನ ಟಿ.ಮೋಹನ್ ದಾಸ್ ಪೈ ಪ್ಲಾಟಿನಂ ಜುಬಿಲಿ ಬ್ಲಾಕ್‌ನ ಮೂರನೇ ಮಹಡಿಯ ಸೆಮಿನಾರ್ ಹಾಲ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. […]