ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹರ್ ಘರ್ ತಿರಂಗಾ’ ಕಾರ್ಯಕ್ರಮ ಕಡ್ಡಾಯ; ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್.15, 2025ರಂದು ಶಾಲಾ ಕಾಲೇಜುಗಳಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಅನುಷ್ಠಾನ ಮಾಡುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಪಡೆದುಕೊಂಡ ಸ್ವಾತಂತ್ಯಕ್ಕೆ ಕಾರಣರಾದ ಎಲ್ಲರನ್ನೂ ಸದಾ ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಇಂದಿನ ನಮ್ಮ ಸಂಭ್ರಮಕ್ಕೆ ತಳಪಾಯವಾಗಿ, ಮೆಟ್ಟಿಲುಗಳಾಗಿ ತಮ್ಮ ಜೀವನವನ್ನು ತ್ಯಾಗ ಮಾಡಿದ ಎಲ್ಲರನ್ನು ಮರೆಯದೆ ಸದಾ ಸ್ಮರಿಸುತ್ತಾ ಭವ್ಯ ಭಾರತವನ್ನು ಕಟ್ಟುವಲ್ಲಿ ನಮ್ಮ ಜವಾಬ್ದಾರಿಯುತ ಪಾತ್ರವನ್ನು ನಿರ್ವಹಿಸಬೇಕಿದೆ ಎಂದಿದ್ದಾರೆ.
ರಾಜ್ಯದ ಆರ್ಥಿಕತೆಗೆ ಮೀನುಗಾರಿಕೆ ಕೊಡುಗೆ ಅಪಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ:ರಾಜ್ಯದ ಆರ್ಥಿಕತೆಗೆ ಮೀನುಗಾರಿಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ರಾಜ್ಯ ಸರ್ಕಾರವೂ ಕೂಡಾ ಮೀನುಗಾರರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು ಮೀನುಗಾರರ ಹಿತಾಸಕ್ತಿ ಕಾಪಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಉಡುಪಿ ಜಿಲ್ಲಾಡಳಿತ ಮತ್ತು ಮೀನುಗಾರಿಕೆ ಇಲಾಖೆ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಮೀನುಗಾರಿಕೆಯಲ್ಲಿ ಜೀವರಕ್ಷಕ ಸಾಧನಗಳ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸುವ ಕಾರ್ಯಗಾರಕ್ಕೆ ಚಾಲನೆ […]
ಉಡುಪಿ ಜಿಲ್ಲಾ ಪೊಲೀಸರ ಕಾರ್ಯ ಶ್ಲಾಘನೀಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಸಾರ್ವಜನಿಕರ ಹಿತದೃಷ್ಟಿಯಿಂದ ಉಡುಪಿ ನಗರ, ಗ್ರಾಮೀಣ ಪ್ರದೇಶ ಹಾಗೂ ಗಡಿ ಭಾಗಗಳಲ್ಲಿ ಸಿಸಿಟಿವಿ ಅವಳಡಿಕೆಗೆ ಮುಂದಾಗಿರುವ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಉಡುಪಿ ಚೆಂಬರ್ ಆಫ್ ಕಾಮರ್ಸ್ ಸಹಕಾರದೊಂದಿಗೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಅಳವಡಿಸಲು ಉದ್ದೇಶಿಸಲಾಗಿರುವ ಶ್ಯೇನ ದೃಷ್ಟಿ (ಸಿಸಿಟಿವಿ ಅಳವಡಿಕೆ) ಕೇಂದ್ರಕ್ಕೆ ಉಡುಪಿ ಸರ್ವೀಸ್ ಬಸ್ […]
ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ರಂಗೋಲಿ ಸ್ಪರ್ಧೆ ಆಯೋಜನೆ; ರಂಗೋಲಿ ಬಿಡಿಸಿ ಸಂಭ್ರಮಿಸಿದ ಮಹಿಳಾ ಪೊಲೀಸ್ ಸಿಬ್ಬಂದಿ.!

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಉಡುಪಿಯ ಶಾಮಿಲಿ ಸಭಾಂಗಣದಲ್ಲಿ ನಡೆದ ರಂಗೋಲಿ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಠಾಣೆಗಳಿಂದ9 ಮಹಿಳಾ ತಂಡಗಳು ಭಾಗವಹಿಸಿದ್ದವು. ಕೆಲಸದ ಒತ್ತಡದಿಂದ ಕೊಂಚ ರಿಲೀಫ್ ಪಡೆದುಕೊಂಡ ಮಹಿಳಾ ಪೊಲೀಸ್ ಸಿಬ್ಬಂದಿಗಳು, ತಮ್ಮ ತಂಡದ ಜೊತೆಗೆ ರಂಗೋಲಿ ಬಿಡಿಸಿ ಸಂಭ್ರಮಿಸಿದರು. ಮಹಿಳಾ ಸಿಬ್ಬಂದಿ ಬಿಡಿಸಿದ ರಂಗೋಲಿ ಎಲ್ಲರ ಗಮನಸೆಳೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ರಂಗೋಲಿಗಳನ್ನು ವೀಕ್ಷಿಸಿ, […]
ಉಡುಪಿ:ನೋವೆಲ್ಟಿ ಜುವೆಲ್ಲರಿಯಲ್ಲಿ ಆ.1 ರಿಂದ ಅ.5 ರವರೆಗೆ ಗೋಲ್ಡ್ ಫೆಸ್ಟಿವಲ್

ಉಡುಪಿ: ನೋವೆಲ್ಟಿ ಜುವೆಲ್ಲರಿ ಉಡುಪಿ ಇಲ್ಲಿ ಆಗಸ್ಟ್ 1ರಿಂದ ಅಕ್ಟೋಬರ್ 5 ರವರೆಗೆ ಗೋಲ್ಡ್ ಫೆಸ್ಟಿವಲ್ ನಡೆಯಲಿದೆ. ಇದರ ಅನ್ವಯ ಪ್ರತಿ 2,000 ರೂ. ಖರೀದಿಗೆ 1 ಕೂಪನ್ ನೀಡಲಾಗುವುದು. ಬಂಪರ್ ಬಹುಮಾನವಾಗಿ 1 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 100 ವಜ್ರದ ಉಂಗುರಗಳು, 1 ವಜ್ರದ ನೆಕ್ಲೆಸ್ ನೀಡಲಾಗುವುದು. ಹಾಗೆಯೇ 1 ಕೆಜಿ ಚಿನ್ನದಲ್ಲಿ 250 ಗ್ರಾಂ 2 ವಿಜೇತರಿಗೆ, 50 ಗ್ರಾಂ ಚಿನ್ನ 10 ವಿಜೇತರಿಗೆ ನೀಡಲಾಗುವುದು. 5 ಕೆ.ಜಿ ಬೆಳ್ಳಿಯಲ್ಲಿ 1000 […]