ರೇಣುಕಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ಗೆ ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ. ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ‘ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ […]
MSDC ಓರೇನ್ ಇಂಟರ್ನ್ಯಾಷನಲ್’ನಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕೂದಲು, ಚರ್ಮ, ಉಗುರು ಮತ್ತು ಮೇಕಪ್ ಕೋರ್ಸ್‌ಗಳ ಮೇಲೆ ಶೇ.40 ವರೆಗೆ ರಿಯಾಯಿತಿ!

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ. ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ) ಓರೇನ್ ಇಂಟರ್ನ್ಯಾಷನಲ್’ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿಶೇಷ ಕೊಡುಗೆಯನ್ನು ನೀಡಿದೆ. ಕೂದಲು, ಚರ್ಮ, ಉಗುರು ಮತ್ತು ಮೇಕಪ್ ಕೋರ್ಸ್‌ಗಳ ಮೇಲೆ ಶೇ.40 ವರೆಗೆ ರಿಯಾಯಿತಿ ಸಿಗಲಿದೆ.ಇದು ಸೀಮಿತ ಅವಧಿಯ ಕೊಡುಗೆಯಾಗಿದ್ದು, ಆಸಕ್ತರು ಅಗಸ್ಟ್ 16ರ ಒಳಗೆ ಸಂಸ್ಥೆಯನ್ನು ಸಂಪರ್ಕಿಸಬೇಕಾಗಿ ಈ ಪ್ರಕಟಣೆ ತಿಳಿಸಿದೆ. ಸಂಪರ್ಕಿಸಿ: 8123165068ವಿಳಾಸ: ಓರೇನ್ ಇಂಟರ್ನ್ಯಾಷನಲ್ 3ನೇ ಮಹಡಿ, ಎಂಎಸ್‌ಡಿಸಿ ಕಟ್ಟಡ ಈಶ್ವರ್ ನಗರ ಮಣಿಪಾಲ.
ಉಡುಪಿ:ವಿದೇಶದಲ್ಲಿ ಅಧ್ಯಯನ – 2025 ಕಾರ್ಯಕ್ರಮ

ಉಡುಪಿ: ರಾಜ್ಯದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ಶಿಕ್ಷಣಕ್ಕಾಗಿ ಪಾರದರ್ಶಕ, ಮೌಲ್ಯಾಧಾರಿತ ಮತ್ತು ವೈಯಕ್ತಿಕಗೊಳಿಸಿದ ಮಾರ್ಗದರ್ಶನವನ್ನು ನೀಡುವ ಮೂಲಕ ಜಾಗತಿಕ ಶಿಕ್ಷಣದ ಪ್ರಯಾಣವನ್ನು ಸರಳೀಕರಿಸಲು ಮತ್ತು ಸುರಕ್ಷಿತಗೊಳಿಸಲು ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ “ವಿದೇಶದಲ್ಲಿ ಅಧ್ಯಯನ- 2025” ಕಾರ್ಯಕ್ರಮವನ್ನು ಆಗಸ್ಟ್ 17 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರ ವರೆಗೆ ಬೆಂಗಳೂರಿನ “ಲಲಿತ್ ಅಶೋಕ್ ಹೋಟೆಲ್”ನಲ್ಲಿ ನಡೆಯಲಿದೆ. ಕಾರ್ಯಕ್ರಮಲ್ಲಿ 10 ಕ್ಕೂ ಹೆಚ್ಚು ರಾಷ್ಟ್ರಗಳ, 50 ಕ್ಕೂ ಮೇಲ್ಪಟ್ಟ ಜಾಗತಿಕ ವಿಶ್ವವಿದ್ಯಾಲಯಗಳ […]
ಉಡುಪಿ:ಅರೆಕಾಲಿಕ ಶಿಕ್ಷಕರ ನೇಮಕಾತಿ : ಅರ್ಜಿ ಆಹ್ವಾನ

ಉಡುಪಿ: ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿರುವ ನಗರದ ನಿಟ್ಟೂರಿನ ಸರ್ಕಾರಿ ಬಾಲಕಿಯರ ಬಾಲಮಂದಿರ ಹಾಗೂ ಕುಂಜಿಬೆಟ್ಟುವಿನ ಸರ್ಕಾರಿ ಬಾಲಕರ ಬಾಲಮಂದಿರ ಸಂಸ್ಥೆಯಲ್ಲಿ ಗೌರವಧನ ಆಧಾರದಲ್ಲಿ 8, 9 ಹಾಗೂ 10ನೇ ತರಗತಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಗಣಿತ ಮತ್ತು ವಿಜ್ಞಾನ ಟ್ಯೂಷನ್ ಪಾಠ ಮಾಡುವ ಅರೆಕಾಲಿಕ ಶಿಕ್ಷಕರ ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, […]
ಉಡುಪಿ:ಯುವನಿಧಿ ವಿಶೇಷ ನೋಂದಣಿ ಅಭಿಯಾನ

ಉಡುಪಿ: ರಾಜ್ಯ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯ ಪ್ರಸಕ್ತ ಸಾಲಿನ ನೋಂದಣಿಯು ಆರಂಭವಾಗಿದ್ದು, 2025 ನೇ ಸಾಲಿನಲ್ಲಿ ತೇರ್ಗಡೆಗೊಂಡ ಪದವಿ, ಡಿಪ್ಲೋಮಾ ಮತ್ತು ಎಲ್ಲಾ ಸ್ನಾತಕೋತರ ಅಭ್ಯರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಸೇವಾ ಸಿಂಧೂ ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ನೋಂದಣಿ ಹಾಗೂ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ 2025-26 ನೇ ಸಾಲಿನಲ್ಲಿ ಪದವಿ ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೋಮಾ […]