ಕೊಲ್ಲೂರು: ವಿದ್ಯಾರ್ಥಿನಿ ಆತ್ಮಹತ್ಯೆ

ಕೊಲ್ಲೂರು: ಖಾಸಗಿ ಕಾಲೇಜಿನ ವಿದ್ಯಾರ್ಥಿನಿ, ಅರುಣ್ ಎಂಬವರ ಮಗಳು ಅನನ್ಯ(17) ಎಂಬವರು ಅನಾರೋಗ್ಯ ಕಾರಣಕ್ಕಾಗಿ ಕಳೆದ ಒಂದು ತಿಂಗಳಿನಿಂದ ಕಾಲೇಜಿಗೆ ಹೋಗದೆ ಮನೆಯಲ್ಲಿದ್ದು, ಆ.13ರಂದು ಬೆಳಗ್ಗೆ ಅನನ್ಯಾ ಮನೆಯ ರೂಮ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಉಡುಪಿ:79 ನೇ ಸ್ವಾತಂತ್ರ್ಯ ದಿನಾಚರಣೆ

ಉಡುಪಿ: ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ 79 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ಆಗಸ್ಟ್ 15 ರಂದು ಬೆಳಗ್ಗೆ 8.30 ಕ್ಕೆ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 9 ಗಂಟೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ […]

ಉಡುಪಿ:ಮಾದಕ ವ್ಯಸನ ಮುಕ್ತ ಸುಸ್ಥಿರ ಸಮಾಜ ನಿರ್ಮಾಣ ಪ್ರತಿಯೊಬ್ಬರ ಆದ್ಯತೆಯಾಗಲಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಯುವಜನರಲ್ಲಿ ಮಾದಕ ದ್ರವ್ಯ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮಾದಕ ವ್ಯಸನ ಮುಕ್ತ ಸುಸ್ಥಿರ ಸಮಾಜ ನಿರ್ಮಾಣ ಪ್ರತಿಯೊಬ್ಬರ ಆದ್ಯತೆಯಾಗಲಿ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಬುಧವಾರ ನಗರದ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಸಾರ್ವಜನಿಕ […]