ಆತ್ರಾಡಿ ವಿವೇಕಾನಂದ SPYSS ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಉಡುಪಿ: ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕ ಇದರ SPYSS ವಿವೇಕಾನಂದ ನಗರ ಆತ್ರಾಡಿ ಶಾಖೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯಯನ್ನು ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡಲಾಯಿತು. ಭಾರತ ಮಾತೆಯ ಭಾವಚಿತ್ರಕ್ಕೆ ತಿಲಕ ಇರಿಸಿಅದರ ಪಕ್ಕದಲ್ಲಿ ತ್ರಿವರ್ಣ ಧ್ವಜ ವನ್ನು ಇರಿಸಿ ಮಂಗಳಾರತಿ ಮಾಡಿ ಸರ್ವ ಯೋಗ ಬಂದುಗಳು ಭಾರತಮಾತೆಗೆ ಪುಷ್ಪಾರ್ಚನೆ ಮಾಡಿದರು. ತದನಂತರ ತ್ರಿವರ್ಣ ಧ್ವಜಗಳನ್ನು ಕೈಯಲ್ಲಿ ಹಿಡಿದು ಕೊಂಡು ಯೋಗ ನೃತ್ಯವನ್ನು ಮಾಡಿದರು. ಸ್ವಾತಂತ್ರ್ಯ ಹೋರಾಟಗಾರರಿಗೆ ಜಯಕಾರ ಘೋಷಣೆ ಗಳನ್ನು ಕೂಗಿದರು. ವಂದೇ […]

ಸಂತೋಷ್ ನಾಯಕ್ ರವರಿಗೆ ಡಾಕ್ಟರೇಟ್ ಪದವಿ

ಉಡುಪಿ: ಮಣಿಪಾಲ್ ಸ್ಕೂಲ್ ಆಫ್ ಕಾಮರ್ಸ್ ಅಂಡ್ ಎಕನಾಮಿಕ್ಸ್, ಮಣಿಪಾಲ್ ಅಕಾಡೆಮಿ ಆಫ್ ಎಜುಕೇಶನ್, ಮಣಿಪಾಲದ ಸಹಪ್ರಾಧ್ಯಾಪಕರಾದ ಡಾ. ಸತೀಶ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಹಾಗೂ ಸಹಾಯಕ ಪ್ರಾಧ್ಯಾಪಕಿಯಾದ ಡಾ.ಅಂಕಿತಾ ಶೆಟ್ಟಿ ಇವರ ಸಹಮಾರ್ಗದರ್ಶನದಲ್ಲಿ ಡಾ. ಸಂತೋಷ್ ನಾಯಕ್ ರವರು ಮಂಡಿಸಿದ “ಇನ್ಫ್ಲುಯೆನ್ಸ್ ಆಫ್ ರಿಲೇಶನ್ಶಿಪ್ ಸೆಲ್ಲಿಂಗ್ ಬಿಹೇವಿಯರ್ ಆನ್ ಹೆಲ್ತ್ ಇನ್ಸೂರೆನ್ಸ್: ಎನ್ ಎವಾಲ್ಯೂವೇಶನ್ ಫ್ರಮ್ ಏಜೆಂಟ್ಸ್ ಪರ್ಸ್ಪೆಕ್ಟಿವ್” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಮಾಹೆ ಮಣಿಪಾಲ ವಿಶ್ವವಿದ್ಯಾನಿಲಯವು ಪಿ.ಎಚ.ಡಿ ಪದವಿ ಪ್ರಧಾನ ಮಾಡಿದೆ. ಮೂಲತಃ ಬೆಳಗಾವಿಯವರಾದ […]

ದೇಶದಲ್ಲಿಯೇ ಹೆಚ್ಚು ಆದಾಯ ಹೊಂದಿರುವ ರಾಜ್ಯ ಕರ್ನಾಟಕ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: 2024 -25 ನೇ ಆರ್ಥಿಕ ವರ್ಷದಲ್ಲಿ ನಮ್ಮ ರಾಜ್ಯವು ದೇಶದಲ್ಲಿಯೇ ಅತೀ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ. ರಾಜ್ಯ ಸರ್ಕಾರವು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ದೃಷ್ಠಿಯಿಂದ ವಿತ್ತೀಯ ನಿರ್ವಹಣೆಯಲ್ಲಿ ತನ್ನ ಕಾರ್ಯಕ್ಷಮತೆಯನ್ನು ತೋರಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಅಜ್ಜರಕಾಡಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೇರವೇರಿಸಿ, […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

ಉಡುಪಿ, ಬಂಟಕಲ್: ಶ್ರೀ ಮದ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಮತ್ತು ನಿರಾಮಯ ಆರೋಗ್ಯ ವಿಜ್ಞಾನ ಸಂಸ್ಥೆ ಜಂಟಿಯಾಗಿ ದಿನಾಂಕ 15 ಆಗಸ್ಟ್ 2025 ರಂದು 79ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಸೋದೆ ವಾದಿರಾಜ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿಯಾದ ಡಾ. ರಾಧಕೃಷ್ಣ ಎಸ್ ಐತಾಳ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು. ನವದೆಹಲಿಯ […]

ಕಾರ್ಕಳ ಜ್ಞಾನಸುಧಾ: ಸ್ವಾತಂತ್ರ್ಯ ದಿನಾಚರಣೆ: ಸ್ವಾತಂತ್ರ್ಯವೆಂಬುದು ಉಚಿತವಲ್ಲ ಅದೊಂದು ಜವಾಬ್ದಾರಿ:ಡಾ.ಶ್ರೀನಿವಾಸ್ ದೇಶ್‌ಪಾಂಡೆ

ಗಣಿತನಗರ : ಲಕ್ಷಾಂತರ ದೇಶಪ್ರೇಮಿಗಳ ತ್ಯಾಗ, ಬಲಿದಾನಗಳಿಗೆ ನಾವು ಧನ್ಯವಾದ ಹೇಳುವ ಅವರ ಚಿರಸ್ಮರಣೆ ಗೈಯ್ಯುವ ಶುಭದಿನ. ಸ್ವಾತಂತ್ರ್ಯವೆಂಬುದು ಉಚಿತವಾಗಿ ದೊರೆತುದಲ್ಲ. ಅದೊಂದು ಜವಾಬ್ದಾರಿಯ ಸಂಕೇತ ಎಂದು ಪದ್ಮಶ್ರೀ ಡಾ.ಎಂ.ಎಂ.ಜೋಷಿ ಸೇವಾಪ್ರಶಸ್ತಿ ಪುರಸ್ಕೃತ ನೇತ್ರತಜ್ಞ ಡಾ.ಶ್ರೀನಿವಾಸ್ ದೇಶಪಾಂಡೆ ಹೇಳಿದರು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜರುಗಿದ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪಿ.ಆರ್.ಒ ಜ್ಯೋತಿ ಪದ್ಮನಾಭ್ ಭಂಡಿ. ಪಿ.ಯು. ಉಪಪ್ರಾಂಶುಪಾಲರುಗಳಾದ ಸಾಹಿತ್ಯ, ಶ್ರೀಮತಿ ಉಷಾ ರಾವ್ ಯು, ಜ್ಞಾನಸುಧಾ ಆಂಗ್ಲಮಾಧ್ಯಮ […]