‘ಹರ್ ಘರ್ ತಿರಂಗಾ’ ಅಭಿಯಾನ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’

ಉಡುಪಿ: 79ನೇ ಸ್ವಾತಂತ್ರ್ಯ ದಿನಾಚರಣೆಯ ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’ ನಡೆಯಿತು. ಉಡುಪಿ ನಿಟ್ಟೂರು-ಅಂಬಾಗಿಲು ಜಂಕ್ಷನ್ ನಲ್ಲಿರುವ ದಿ! ಕರಂಬಳ್ಳಿ ಸಂಜೀವ ಶೆಟ್ಟಿ ಅವರ ಪ್ರತಿಮೆಗೆ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಮಾಲಾರ್ಪಣೆಗೈದರು. ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಪ್ರತಿಮೆಗೆ ಪುಷ್ಪಾರ್ಚನೆಗೈಯುವ ಮೂಲಕ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’ಕ್ಕೆ ಚಾಲನೆ ನೀಡಿದರು. ಈ […]
ಚುನಾವಣಾ ಆಯೋಗ ಬಿಜೆಪಿ ಏಜೆಂಟ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪ

ಉಡುಪಿ: ಕೇಂದ್ರ ಚುನಾವಣಾ ಆಯೋಗವು ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದೆ. ಮತಗಳ್ಳತನಕ್ಕೆ ಬಿಜೆಪಿಗೆ ಬೆಂಬಲವಾಗಿ ನಿಂತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದರು. “ಮತಕಳ್ಳರೇ ಅಧಿಕಾರ ಬಿಟ್ಟು ತೊಲಗಿ” ಘೋಷ್ಯ ವಾಕ್ಯದೊಂದಿಗೆ ಚುನಾವಣಾ ಅಕ್ರಮಗಳಿಗೆ ಕಾರಣವಾಗಿರುವ ಕೇಂದ್ರ ಸರಕಾರ ಹಾಗೂ ಚುನಾವಣಾ ಆಯೋಗದ ನೀತಿ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಹಳೆ ಸರಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಹಮ್ಮಿಕೊಂಡ ಕ್ಯಾಂಡಲ್ […]
ಉಡುಪಿಯ ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಬಾಕಿ ಅನುದಾನ ತಕ್ಷಣ ಬಿಡುಗಡೆ ಮಾಡಿ; ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

ಉಡುಪಿಯ ನೂತನ ಜಿಲ್ಲಾ ಆಸ್ಪತ್ರೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಬಾಕಿ ಅನುದಾನ ತಕ್ಷಣ ಬಿಡುಗಡೆ ಮಾಡುವಂತೆ ವಿಧಾನಸಭಾ ಅಧಿವೇಶನದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆರೋಗ್ಯ ಸಚಿವರಿಗೆ ಆಗ್ರಹಿಸಿದರು. ನಿರ್ಮಾಣ ಕಾಮಗಾರಿ ವಿಳಂಬ:ಜಿಲ್ಲಾಸ್ಪತ್ರೆ ಕಾಮಗಾರಿಯನ್ನು ಡಿಸೆಂಬರ್ 2021 ರಲ್ಲಿ ಪ್ರಾರಂಭಿಸಲಾಗಿದ್ದು, ನಿರ್ಮಾಣ ಕಾಮಗಾರಿಯು ಅಂತಿಮ ಹಂತದಲ್ಲಿದೆ. ಮೂಲ ಅಂದಾಜಿನಲ್ಲಿನ ಅಂಶಗಳಲ್ಲಿ ಕೆಲವೊಂದು ಕಾಮಗಾರಿಗಳ ಅಗತ್ಯ ಬದಲಾವಣೆ ಹಾಗೂ ಹೆಚ್ಚುವರಿ ಅಂಶಗಳನ್ನು ಕೈಗೊಂಡಿರುವ ಕಾರಣ ನಿರ್ಮಾಣ ಕಾಮಗಾರಿ ವಿಳಂಬವಾಗಿರುತ್ತದೆ. […]
ತ್ಯಾಗದಿಂದ ಬಂದ ತೇಜಸ್ಸು “ಸ್ವಾತಂತ್ರ್ಯ”: ಪ್ರಜ್ಞಾ ಬರೆದ ಸ್ವಾತಂತ್ರ್ಯ ದಿನದ ವಿಶೇಷ ಬರಹ

ಸ್ವಾತಂತ್ರ್ಯ ದಿನಾಚರಣೆ ಎಂದರೆ ನಮ್ಮ ದೇಶವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಾಯಗೊಂಡ ಕ್ಷಣವನ್ನು ಸ್ಮರಿಸುವ ವಿಶೇಷ ಕ್ಷಣ. ಇದು ಕೇವಲ ರಜೆಯ ದಿನವಲ್ಲ, ನಮ್ಮ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಹೋರಾಟಗಾರರ ತ್ಯಾಗ, ಧೈರ್ಯ ಮತ್ತು ದೇಶಪ್ರೇಮವನ್ನು ನೆನೆದು ಗೌರವಿಸುವ ದಿನ. ನನ್ನ ಪ್ರಕಾರ ನಾವು ಸ್ವಾತಂತ್ರ್ಯ ದಿನವನ್ನು ತುಂಬಾ ಖುಷಿಯಿಂದ, ಗೌರವದಿಂದ ಆಚರಿಸಬೇಕು. ನನ್ನ ಬಾಲ್ಯದ ದಿನದಲ್ಲಿ ಶಾಲೆಗೆ ಹೋಗುತ್ತಿರುವಾಗ ಸ್ವಾತಂತ್ರ್ಯ ದಿನಾಚರಣೆಯ ಹಿಂದಿನ ದಿನದಂದು ಸುತ್ತಮುತ್ತಲೂ ಎಲ್ಲಾ ಸ್ವಚ್ಛಗೊಳಿಸಿ ಭಾರತದ ನಕ್ಷೆಯನ್ನು ಧ್ವಜಸ್ತಂಬದ ಮುಂದೆ […]
2012ರಲ್ಲಿ ಧರ್ಮಸ್ಥಳದಲ್ಲಿ ಯುವತಿ ನಾಪತ್ತೆ ಪ್ರಕರಣ; ಯುವತಿಯ ಸಹೋದರರಿಂದ ಎಸ್.ಐ.ಟಿ.ಗೆ ದೂರು.

ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಕಾವಳ ಮುಡೂರು ಗ್ರಾಮದ ನಿವಾಸಿ ಯುವತಿಯೊಬ್ಬಳು 2012ರಲ್ಲಿ ಧರ್ಮಸ್ಥಳಕ್ಕೆ ಹೋದಾಕೆ ಮನೆಗೆ ಹಿಂತಿರುಗಿ ಬಾರದೆ ನಾಪತ್ತೆಯಾಗಿರುವ ಬಗ್ಗೆ ಆಕೆಯ ಸಹೋದರರಾದ ನಿತಿನ್ ಹಾಗೂ ನಿತೇಶ್ ಎಂಬವರು ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿ ಗುರುವಾರ ದೂರು ನೀಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ನಿತಿನ್ ತನ್ನ ತಂಗಿ ನಾಪತ್ತೆಯಾಗಿ 13 ವರ್ಷಗಳಾದರೂ ಯಾವುದೆ ಮಾಹಿತಿ ಲಭ್ಯವಾಗಿಲ್ಲ. ಇದೀಗ ಎಸ್.ಐ.ಟಿ ತಂಡ ನಾಪತ್ತೆಯಾ ದವರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿರುವುದು ತಿಳಿದು ಬಂದಿದ್ದು ಈ ಹಿನ್ನಲೆಯಲ್ಲಿ ಎಸ್.ಐ.ಟಿ ಕಚೇರಿಗೆ […]