ಹೆಮ್ಮಾಡಿ ಜನತಾ ಪಿಯು ಕಾಲೇಜು; ಸ್ವಾತಂತ್ರ್ಯ ದಿನಾಚರಣೆ-ಜನತಾ ವಿರಾಟ್ ಕಾರ್ಯಕ್ರಮ.

ಹೆಮ್ಮಾಡಿ: ಹಳ್ಳಿಯ ಎಲ್ಲ ಮಕ್ಕಳಿಗೂ ಶಿಕ್ಷಣ ಸಿಗಬೇಕು.ಆಗ ಮಾತ್ರ ಗಾಂಧಿ ಕಂಡ ಕನಸ್ಸು ಸಾರ್ಥಕತೆ ಪಡೆಯುತ್ತದೆ.ಹಳ್ಳಿಯ ಪ್ರತಿ ಮಗು ಸಮಾಜದ ಮುಖ್ಯ ವಾಹಿನಿಗೆ ಬರಲು ನಾವೆಲ್ಲಾ ಶ್ರಮಿಸಬೇಕು. ವಿದ್ಯಾರ್ಥಿಗಳು ಕೂಡ ವೀರ ಯೋಧರ ತ್ಯಾಗ ಸ್ಮರಿಸಿ ಅವರ ಆದರ್ಶ ಗಳನ್ನುತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜನತಾ ಪಿಯು ಕಾಲೇಜು ಹೆಮ್ಮಾಡಿಯ ಪ್ರಾಂಶುಪಾಲರಾದ ಗಣೇಶ ಮೊಗವೀರ ಹೇಳಿದರು. ಜನತಾ ಪಿಯು ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂಸ್ಯ ಇಂಗ್ಲೀಷ್ ಮಿಡಿಯಂ ಸ್ಕೂಲ್ ಕಿರಿಮಂಜೇಶ್ವರ ಇವರ ಆಸರೆಯಲ್ಲಿ ನಡೆದ ಸ್ವಾತಂತ್ರ್ಯ […]
ಉಡುಪಿ: ಕರವೇ ವತಿಯಿಂದ 79ನೇ ಸ್ವಾತಂತ್ರೋತ್ಸವದ ಸಂಭ್ರಮ

ಉಡುಪಿ: ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಘಟಕದ ವತಿಯಿಂದ 79ನೇ ಸ್ವಾತಂತ್ರೋತ್ಸವ ದಿನವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಮಹಾತ್ಮಾ ಗಾಂಧೀಜಿ, ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಗಣ್ಯರು ನಮನ ಸಲ್ಲಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಕರವೇ ಉಡುಪಿ ತಾಲೂಕು ಅಧ್ಯಕ್ಷ ಸತೀಶ್ ಸನಿಲ್ ಧ್ವಜಾರೋಹಣ ನೆರವೇರಿಸಿ 79ನೇ ಸ್ವಾತಂತ್ರೋತ್ಸವದ ಶುಭಾಶಯ ತಿಳಿಸಿದರು. ಈ ವೇಳೆ ಕರವೇ ಗೌರವಧ್ಯಕ್ಷ ಅನ್ಸಾರ್ ಅಹಮದ್ ಮಾತನಾಡಿ, ಈ ವರ್ಷ ಭಾರತಕ್ಕೆ 79 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ. […]
ಬ್ರಹ್ಮಾವರ: ಎಸ್ಎಂಎಸ್ ಪದವಿ ಪೂರ್ವ ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಬ್ರಹ್ಮಾವರ: ಬ್ರಹ್ಮಾವರ ಎಸ್ಎಂಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆ ಭರ್ಜರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಐವನ್ ದೋನಾಥ್ ಸುವಾರಿಸ್ ಅವರು ವಿದ್ಯಾರ್ಥಿಗಳಿಗೆ ಶುಭಾಶಯ ತಿಳಿಸಿ, ಸ್ವಾತಂತ್ರ್ಯ ಹೋರಾಟಗಾರರ ಬಲಿದಾನದ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಭೂ ಸೇನಾ ಯೋಧ ಹವಾಲ್ದಾರ್ ಜಯರಾಮ್ ಶೆಟ್ಟಿ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು. ಅವರು ವಿದ್ಯಾರ್ಥಿಗಳಿಗೆ ಸೇನೆಯ ಮಹತ್ವವನ್ನು ವಿವರಿಸಿ, ಸೇನೆಗೆ ಸೇರ್ಪಡೆಯಾಗಲು ಅಗತ್ಯವಾದ ಮಾಹಿತಿಯನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಕನ್ನಡ […]
ಮಣಿಪಾಲ: ಯುವಕರಲ್ಲಿ ದೇಶಪ್ರೇಮ ಸದಾ ಜಾಗೃತವಾಗಿರಬೇಕು; ಡಾ. ಎಚ್ ಎಸ್ ಬಲ್ಲಾಳ್

ಮಣಿಪಾಲ: `ದೇಶದ ಪ್ರತಿಯೊಬ್ಬ ನಾಗರಿಕರಲ್ಲೂ ದೇಶಪ್ರೇಮ ಜಾಗೃತವಾಗಿರಬೇಕು. ಅದರಲ್ಲೂ ಯುವ ಮನಸ್ಸುಗಳಲ್ಲಿ ದೇಶಪ್ರೇಮ ತುಂಬಿರಲೇಬೇಕು. ಈ ನೆಲೆಯಲ್ಲಿ ದೇಶ ಪ್ರೇಮವನ್ನು ಮೂಡಿಸುವ ಕಾರ್ಯಕ್ರಮಗಳು ನಿತ್ಯ ನಿರಂತರ ನಡೆಯುತ್ತಿರಬೇಕು. ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮೂಡಿಸುವ ಉದ್ದೇಶದಿಂದ ರೇಡಿಯೋ ಮಣಿಪಾಲ್ ನಲ್ಲಿ ಆಯೋಜಿಸಲಾದ ದೇಶಭಕ್ತಿಗೀತೆ ಸಮೂಹ ಗಾಯನ ಸ್ಪರ್ಧಾ ಕಾರ್ಯಕ್ರಮ ಅಭಿನಂದನೀಯ’ ಎಂದು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಇದರ ಸಹ ಕುಲಾಧಿಪತಿ ಡಾ. ಎಚ್ ಎಸ್ ಬಲ್ಲಾಳ್ ಹೇಳಿದರು. ಅವರು ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮತ್ತು […]
ಪಾಲಕರ ಕನಸನ್ನು ನನಸಾಗಿಸುವುದೇ ಮಕ್ಕಳ ಗುರಿಯಾಗಿರಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ವಿದ್ಯಾರ್ಥಿಗಳು ಕೇವಲ ಪಠ್ಯಗಳಿಗೆ ಮೀಸಲಾಗದೆ, ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು. ತಂದೆ ತಾಯಿ ಕಂಡ ಕನಸನ್ನು ನನಸಾಗಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಕರೆ ನೀಡಿದರು. ಉಡುಪಿಯ ಅಂಚೆ ಪರ್ಕಳದಲ್ಲಿರುವ ಶೆಟ್ಟಿಬೆಟ್ಟು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಸುಜ್ಞಾನ ಸಭಾಂಗಣವನ್ನು’ ಉದ್ಘಾಟಿಸಿ, ಬಳಿಕ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಉಚಿತ ಟ್ರ್ಯಾಕ್ ಸೂಟ್ ವಿತರಿಸಿ […]