ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಭಾರತ ದೇಶ ಹಳ್ಳಿಗಳ ದೇಶ, ಗ್ರಾಮಗಳು ಅಭಿವೃದ್ಧಿಯಾದರೆ, ದೇಶ ಅಭಿವೃದ್ಧಿಯಾದಂತೆ. ಗ್ರಾಮಗಳ ವಿಕಸನವೇ ರಾಜೀವ್ ಗಾಂಧಿ ಅವರ ಕನಸಾಗಿತ್ತು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್, ಕಾಪು ತಾಲೂಕು ಪಂಚಾಯತ್ ವತಿಯಿಂದ ಮಜೂರು ಗ್ರಾಮ ಪಂಚಾಯತ್ ನ ನವೀಕೃತ ಸಭಾ ಭವನದ ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ […]
ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಅಂಗನವಾಡಿಗಳು ಆರಂಭವಾಗಿ 50 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 2ರ ಹೊತ್ತಿಗೆ ಸುವರ್ಣ ಮಹೋತ್ಸವ ಆಚರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾಪು ತಾಲೂಕು ಪಂಚಾಯತ್ ವತಿಯಿಂದ ಎಲ್ಲೂರಿನ ದುರ್ಗಾನಗರದಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಮಕ್ಕಳಿಗೆ […]
ಉಡುಪಿ ಸಿ.ಎಸ್.ಐ ಲೋಂಬಾರ್ಡ್ ಮೆಮೋರಿಯಲ್ ಮಿಷನ್ ಆಸ್ಪತ್ರೆ: ರಕ್ತದಾನ ಶಿಬಿರ

ಉಡುಪಿ: ಸಿ.ಎಸ್.ಐ ಲೋಂಬಾರ್ಡ್ ಮೆಮೋರಿಯಲ್ (ಮಿಷನ್ ಆಸ್ಪತ್ರೆ) ಆಸ್ಪತ್ರೆ ವತಿಯಿಂದ ಮಲ್ಟಿ ಪರ್ಪಸ್ ಹಾಲ್, ಸ್ಕೂಲ್ ಆಫ್ ನರ್ಸಿಂಗ್ ಕ್ಯಾಂಪಸ್‌ನಲ್ಲಿ ಶುಕ್ರವಾರ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಈ ಶಿಬಿರದಲ್ಲಿ 75ಕ್ಕೂ ಹೆಚ್ಚು ಉತ್ಸಾಹಿ ದಾನಿಗಳು ಭಾಗವಹಿಸಿದ್ದು ಇದು ಮಾನವೀಯತೆ ಮತ್ತು ಸಹಾಯದ ಸ್ಫೂರ್ತಿಗೆ ಸಾಕ್ಷಿಯಾಗಿದೆ. ಸಂಗ್ರಹಿಸಲಾದ ಪ್ರತಿಯೊಂದು ರಕ್ತದ ಯೂನಿಟ್ ಕೂಡ ಅಪಘಾತದ ಬಲಿಗಳಿಗೆ, ಶಸ್ತ್ರಚಿಕಿತ್ಸೆಗೆ ಒಳಗಾಗುವ ರೋಗಿಗಳಿಗೆ ಹಾಗೂ ಪ್ರಾಣಾಪಾಯದ ಕಾಯಿಲೆಗಳಿಗೆ ತುತ್ತಾದವರಿಗೆ ಸಹಾಯವಾಗಲಿದೆ.ಕಾರ್ಯಕ್ರಮವನ್ನು ರೆ.ರಚೇಲ್ ಡಿ’ಸಿಲ್ವ ಪ್ರಾರ್ಥನೆಯೊಂದಿಗೆ ಆರಂಭಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಡಗಬೆಟ್ಟು […]
ಉಡುಪಿ: ಕಾರ್ಪೊರೇಷನ್ ಬ್ಯಾಂಕ್ ಸ್ಥಾಪಕ ಹಾಜಿ ಅಬ್ದುಲ್ಲಾ ಅವರಿಗೆ ನುಡಿನಮನ.

ಉಡುಪಿ: ಖಾನ್ ಬಹದ್ದೂರ್ ಹಾಜಿ ಅಬ್ದುಲ್ಲಾ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ವತಿಯಿಂದ ಕಾರ್ಪೊರೇಷನ್ ಬ್ಯಾಂಕ್ ಸ್ಥಾಪಕ ಹಾಜಿ ಅಬ್ದುಲ್ಲಾ ಸಾಹೇಬ್ ಅವರ ಪುಣ್ಯತಿಥಿಯಂದು ಉಡುಪಿಯ ಹೆರಿಟೇಜ್ ಕಾಯಿನ್ ಮ್ಯೂಸಿಯಂನಲ್ಲಿ ಅವರಿಗೆ ಗೌರವ ಸಲ್ಲಿಸಿತು. ಭಾರತದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ‘ಕರಾವಳಿ ಕರ್ನಾಟಕದ ಗಾಂಧಿ ಪ್ರಭಾವ’ ಕುರಿತು ಸಂಶೋಧನೆ ನಡೆಸುತ್ತಿರುವ ಮೈಸೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಸಂಶೋಧನಾ ವಿದ್ಯಾರ್ಥಿನಿ ಬಾಗ್ಯಾ ರಾಜೇಶ್ ಮಾತನಾಡಿ ಗಾಂಧೀಜಿ ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ವಾಗತ ಸಮಿತಿಯ ಅಧ್ಯಕ್ಷರಾಗಿದ್ದ ಹಾಜಿ ಅಬ್ದುಲ್ಲಾ ಸಾಹೇಬ್ […]
ಬಿಜೆಪಿಗರ ಮತಗಳ್ಳತನದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಬಿಜೆಪಿಯವರು ಮಾಡಿದ ಮತಗಳ್ಳತನದಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ಹಿನ್ನಡೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಉಡುಪಿಯ ಕೆ.ಎಂ.ಮಾರ್ಗ ಬಳಿಯಿರುವ ಎಲ್ಐಸಿ ಡೈಮಂಡ್ ಜುಬಿಲಿ ಹಾಲ್‌ನಲ್ಲಿ ಶುಕ್ರವಾರ ನಡೆದ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಪದಗ್ರಹಣ ಸಮಾರಂಭ ಹಾಗೂ 50ನೇ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷದ ಶಕ್ತಿ ಕುಂದಿಲ್ಲ ಎಂದರು. ವಿಧಾನಸಭೆ ಚುನಾವಣೆಯಲ್ಲಿ135 ಸೀಟುಗಳನ್ನು ಗೆದ್ದು ಕಾಂಗ್ರೆಸ್ […]