RSS ಭಾರತದ ತಾಲಿಬಾನ್‌ ಇದ್ದಂತೆ; ಬಿ.ಕೆ.ಹರಿಪ್ರಸಾದ್‌ ಕಿಡಿ

ನವದೆಹಲಿ: ಆರ್‌ಎಸ್‌ಎಸ್‌ ಭಾರತದ ತಾಲಿಬಾನ್‌ ಇದ್ದಂತೆ ಎಂದು ವಿಧಾನ ಪರಿಷತ್‌ ಸದಸ್ಯ ಬಿಕೆ ಹರಿಪ್ರಸಾದ್‌ ಕಿಡಿಕಾರಿದ್ದಾರೆ. ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆರ್‌ಎಸ್‌ಎಸ್ ಹೊಗಳಿದ್ದಕ್ಕಾಗಿ ಶನಿವಾರ ಹರಿ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್ ನವರು ದೇಶದಲ್ಲಿ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ. ನಾನು ಆರ್‌ಎಸ್‌ಎಸ್ ಅನ್ನು ತಾಲಿಬಾನ್‌ಗೆ ಮಾತ್ರ ಹೋಲಿಸುತ್ತೇನೆ, ಅವರು ಭಾರತೀಯ ತಾಲಿಬಾನ್‌ಗಳು ಮತ್ತು ಪ್ರಧಾನಿ ಅವರನ್ನು ಕೆಂಪು ಕೋಟೆಯಿಂದ ಶ್ಲಾಘಿಸುತ್ತಿದ್ದಾರೆ” ಎಂದು ಹರಿಪ್ರಸಾದ್ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ […]

ಕೋಮು ಹಿಂಸಾಚಾರ ಆಧರಿತ ‘ದಿ ಬೆಂಗಾಲ್ ಫೈಲ್ಸ್’ ಸಿನೆಮಾ ಟ್ರೇಲರ್ ಬಿಡುಗಡೆಗೆ ಕೋಲ್ಕತ್ತಾ ಪೊಲೀಸರಿಂದ ತಡೆ!

ಕೋಲ್ಕತ್ತಾ: ‘ದಿ ಬೆಂಗಾಲ್ ಫೈಲ್ಸ್‌’ನ ಟ್ರೈಲರ್‌ ಬಿಡುಗಡೆ ಕಾರ್ಯಕ್ರಮವನ್ನು ಶನಿವಾರ ಕೋಲ್ಕತ್ತಾ ಪೊಲೀಸರು ತಡೆದಿದ್ದಾರೆ ಎಂದು ಸಿನಿಮಾ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ಅವರು ಹೇಳಿದ್ದಾರೆ. ಮಹಾನಗರದ ಪಂಚತಾರಾ ಹೋಟೆಲ್‌ನಲ್ಲಿ ಆ.16 ರಂದು ಮಧ್ಯಾಹ್ನ ‘1946ರ ಕೋಲ್ಕತ್ತ ಗಲಭೆಯ ಕುರಿತು ನೈಜ ಘಟನೆಯಾಧಾರಿತ ಸಿನಿಮಾ ‘ದಿ ಬೆಂಗಾಲ್ ಫೈಲ್ಸ್‌’ನ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಪೊಲೀಸರು ಇದನ್ನು ತಡೆದಿದ್ದಾರೆ ಎಂದು ಸಿನಿಮಾ ನಿರ್ದೇಶಕರು ಆರೋಪಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಈ ವಿಷಯದ ಬಗ್ಗೆ ಯಾವುದೇ ಪ್ರತಿಕ್ರಿಯೆ […]

ಬಿ ಎಲ್ ಸಂತೋಷ್ ವಿರುದ್ಧ ಹಿಂದೂ ವಿರೋಧಿ ಶಕ್ತಿಗಳ ಅವಹೇಳನಕಾರಿ ಹೇಳಿಕೆ ಖಂಡನಾರ್ಹ: ಯಶ್ ಪಾಲ್ ಸುವರ್ಣ ಆಕ್ರೋಶ

ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರ ವಿರುದ್ಧ ಸೆಡ್ಡು ಹೊಡೆದು ಧರ್ಮಸ್ಥಳ ಕ್ಷೇತ್ರದ ಪರವಾಗಿ ನಿಂತ ರಾಷ್ಟೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕರಾದ ಬಿ. ಎಲ್. ಸಂತೋಷ್ ರವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವ ಹಿಂದೂ ವಿರೋಧಿ ಶಕ್ತಿಗಳ ವಿರುದ್ಧ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಪರವಾಗಿ ನಿಲ್ಲುವ ವ್ಯಕ್ತಿಗಳನ್ನು ವ್ಯವಸ್ಥಿತವಾಗಿ ತೇಜೋವಧೆ ಮಾಡುವ ಪಿತೂರಿಯ ಮುಂದುವರಿದ ಭಾಗವಾಗಿ ಬಿ ಎಲ್ ಸಂತೋಷ್ ರವರ ವಿರುದ್ಧ ಹೇಳಿಕೆ ನೀಡುವ ಮೂಲಕ ಧರ್ಮಸ್ಥಳ […]

ಮಂಗಳೂರು-ಬೆಂಗಳೂರು ರೈಲು ಸಂಚಾರ ಮಾರ್ಗದಲ್ಲಿ ಗುಡ್ಡ ಕುಸಿತ; ರೈಲ್ವೆ ಮಾರ್ಗ ತಾತ್ಕಾಲಿಕ ಬಂದ್!

ಹಾಸನ: ಸಕಲೇಶಪುರ ತಾಲ್ಲೂಕಿನ ಎಡಕುಮಾರಿ ಬಳಿ ಭಾರೀ ಮಳೆಯಿಂದಾಗಿ ರೈಲ್ವೇ ಹಳಿ ಮೇಲೆ ಮಣ್ಣು ಕುಸಿತಗೊಂಡಿದೆ. ಇದರಿಂದ ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗವನ್ನು ತಾತ್ಕಾಲಿಕ ಬಂದ್ ಮಾಡಲಾಗಿದ್ದು, ರಾತ್ರಿಯಿಡೀ ಮಣ್ಣು ತೆರವುಗೊಳಿಸುವ ಕಾರ್ಯ ನಡೆದಿದೆ. ಧಾರಾಕಾರ ಮಳೆಯ ನಡುವೆಯೂ ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ ಗುಡ್ಡದ ಮಣ್ಣು ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರೂ ಸಹ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಧಾರಾಕಾರ ಮಳೆಯಿಂದ ಜಿಲ್ಲೆಯಲ್ಲಿ ಅವಾಂತರ ಸೃಷ್ಟಿಯಾಗಿದೆ. ಸಕಲೇಶಪುರ […]

ಉಡುಪಿ: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬವಿಲ್ಲದೇ ಪೂರ್ಣಗೊಳಿಸಿ; ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬವಿಲ್ಲದೇ ತ್ವರಿತವಾಗಿ ಪೂರ್ಣಗೊಳಿಸುವುದರೊಂದಿಗೆ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಹಾಗೂ ಅಭಿಯಂತರರುಗಳಿಗೆ ಸೂಚನೆ ನೀಡಿದರು. ಅವರು ಆ.16 ರಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ 169 ಎ ಗೆ ಸಂಬಂಧಿಸಿದಂತೆ ಹಾಗೂ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ […]