ಆ.24ರಂದು ಉಡುಪಿಯಲ್ಲಿ “ಗ್ರಾಮೀಣ ಕ್ರೀಡೋತ್ಸವ”

ಉಡುಪಿ: ಈಶ ಫೌಂಡೇಶನ್ ಬೆಂಗಳೂರು ಇದರ ವತಿಯಿಂದ ‘ಗ್ರಾಮೀಣ ಕ್ರೀಡೋತ್ಸವ’ ಇದೇ ಆ. 24ರಂದು ಬೆಳಿಗ್ಗೆ 9ರಿಂದ ಸಂಜೆ 6ಗಂಟೆಯವರೆಗೆ ಉಡುಪಿ ಬ್ರಹ್ಮಗಿರಿಯ ಸೈಂಟ್ ಸಿಸಿಲಿಸ್ ಹೈಸ್ಕೂಲ್ ನಲ್ಲಿ ನಡೆಯಲಿದೆ ಎಂದು ಈಶ ಫೌಂಡೇಶನ್ ನ ಸ್ವಯಂ ಸೇವಕ ಸಭ್ಯತ್ ಶೆಟ್ಟಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಕ್ರೀಡೋತ್ಸವದಲ್ಲಿ ಪುರುಷರಿಗೆ ವಾಲಿಬಾಲ್ ಹಾಗೂ ಮಹಿಳೆಯರಿಗೆ ತ್ರೋಬಾಲ್ ಪಂದ್ಯಾಟ ನಡೆಯಲಿದೆ. ಮೊದಲ ಹಂತದ ಕ್ಲಸ್ಟರ್ ಪಂದ್ಯಗಳು ಸೈಂಟ್ ಸಿಸಿಲಿಸ್ ಹೈಸ್ಕೂಲ್ ನಲ್ಲಿ ನಡೆಯಲಿದೆ […]

ಮುಂಬೈನಲ್ಲಿ ಭಾರೀ ಮಳೆ: ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತ, ವಾಹನ ಸವಾರರ ಪರದಾಟ!

ಮುಂಬೈ: ವಾಣಿಜ್ಯ ನಗರಿ ಮುಂಬೈ ಸತತ ಮೂರನೇ ದಿನವಾದ ಸೋಮವಾರವೂ (ಆ.18) ಭಾರೀ ಮಳೆಗೆ ನಲುಗಿ ಹೋಗಿದ್ದು, ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿರುವುದಾಗಿ ಬೃಹನ್‌ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ಭಾರೀ ಮಳೆ ಮತ್ತು ನೀರಿನಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಸತತ ಮಳೆಯ ಹಿನ್ನಲೆಯಲ್ಲಿ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೇ ಅನಗತ್ಯವಾಗಿ ಜನರು ಮನೆಯಿಂದ ಹೊರ ಬರದಂತೆ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ. ರೈಲ್ವೆ ಹಳಿಗಳು ಜಲಾವೃತಗೊಂಡಿದ್ದರಿಂದ ಹಲವು ಪ್ರದೇಶಗಳಲ್ಲಿ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಮುಂಬೈ […]

ಉಡುಪಿ:ಸುನಾಗ್ ಆಸ್ಪತ್ರೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಉಡುಪಿ:ಸುನಾಗ್ ಆಸ್ಪತ್ರೆಯ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ ಯನ್ನು ಆಸ್ಪತ್ರೆಯ ಸ್ಥಾಪಕರು ಹಾಗೂ ವೈದ್ಯಾಧಿಕಾರಿಗಳಾದ ಡಾ ನರೇಂದ್ರ ಕುಮಾರ್ ಎಚ್ ಎಸ್ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು ಆಸ್ಪತ್ರೆಯ ವೈದ್ಯಾಧಿಕಾರಿ ಹಾಗೂ ನಿರ್ದೇಶಕರಾದ ಡಾ ವೀಣಾ ನರೇಂದ್ರ ಎಚ್ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು.ನಮ್ಮ ದೇಶದ ಪ್ರಜೆಗಳ ಏಳಿಗೆಯ ಬಗ್ಗೆ ಮಾತುಗಳನ್ನು ಆಡಿದರು. ಸುನಾಗ್ ಆಸ್ಪತ್ರೆಯು ತನ್ನ ಏಳು ವರ್ಷಗಳ ಸಾರ್ವಜನಿಕ ಸೇವೆಯನ್ನು ಯಶಸ್ವಿಯಾಗಿ ಪೂರೈಸಿದ ಸಂದರ್ಭದಲ್ಲಿ ಡಾ ನರೇಂದ್ರ ಕುಮಾರ್ ಎಚ್ ಎಸ್ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ […]

ಧರ್ಮಸ್ಥಳದಲ್ಲಿ ಆನೆ ಮಾವುತ ಮತ್ತು ತಂಗಿಯ ಕೊಲೆ ಪ್ರಕರಣ: ಮರುತನಿಖೆಗೆ ಆಗ್ರಹಿಸಿ ಎಸ್ಐಟಿ ಕಚೇರಿಗೆ ದೂರು

ಬೆಳ್ತಂಗಡಿ: 2012ರಲ್ಲಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಬೂರ್ಜೆ ಎಂಬಲ್ಲಿ ನಡೆದಿದ್ದ ಆನೆ ಮಾವುತ ನಾರಾಯಣ ಮತ್ತು ಅವರ ಸಹೋದರಿ ಯಮುನಾ ಅವರ ಅಮಾನುಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಶಕದ ಬಳಿಕ ಮರು ತನಿಖೆಗೆ ಆಗ್ರಹಿಸಿ ಅವರ ಮಕ್ಕಳು ಬೆಳ್ತಂಗಡಿಯ ವಿಶೇಷ ತನಿಖಾ ದಳ (ಎಸ್ಐಟಿ) ಕಚೇರಿಗೆ ದೂರು ನೀಡಿದ್ದಾರೆ. ಮೃತ ನಾರಾಯಣ ಅವರ ಪುತ್ರ ಗಣೇಶ್ ಮತ್ತು ಪುತ್ರಿ ಭಾರತಿ, ತಮ್ಮ ತಂದೆ ಮತ್ತು ಅತ್ತೆಯ ಸಾವಿನ ಹಿಂದಿನ ರಹಸ್ಯ ಬಯಲಾಗಬೇಕು, ನಿಜವಾದ ಆರೋಪಿಗಳನ್ನು ಬಂಧಿಸಬೇಕು […]

ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಗೃಹ ಸಚಿವ ಪರಮೇಶ್ವರ್ ಸೂಚನೆ.

ಬೆಂಗಳೂರು, ಆ.18: ಸಿಎಂ ಸಿದ್ದರಾಮಯ್ಯ 24 ಕೊಲೆಗಳನ್ನು ಮಾಡಿದ್ದಾರೆ ಎಂದಿದ್ದ ಮಹೇಶ್ ಶೆಟ್ಟಿ ತಿಮ್ಮರೋಡಿ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಹೋರಾಟಗಾರರಾದ ತಿಮರೋಡಿ ಅವರ ವಿರುದ್ಧ ಒಂದೇ ದಿನದಲ್ಲಿ ಕಠಿಣ ಕ್ರಮವನ್ನು ಕೈಗೊಳ್ಳಲು ಮುಂದಾಗಿದೆ. ಕೂಡಲೇ ಮಹೇಶ್ ಶೆಟ್ಟಿ ತಿಮ್ಮರೋಡಿ ಅವರ ಮೇಲೆ ಎಫ್‌ಐಆರ್ ದಾಖಲಿಸಿ ಬಂಧನ ಮಾಡುವಂತೆ ಸದನದಲ್ಲಿಯೇ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ವಿರುದ್ಧ ’24 ಕೊಲೆಗಳನ್ನು ಮಾಡಿದ್ದಾರೆ’ ಎಂದು ಹೇಳಿಕೆ ನೀಡಿದ್ದಾರೆ ಎನ್ನಲಾದ ಮಹೇಶ್ ಶೆಟ್ಟಿ […]