ಬೆಳಪು ಫ್ರೆಂಡ್ಸ್ ಕ್ಲಬ್ ವಾರ್ಷಿಕ ಕ್ರಿಕೆಟ್ ಪಂದ್ಯಾಕೂಟ

ಬೆಳಪುವಿನ ಹಲವಾರು ಕಡೆ ಕ್ರಿಕೆಟ್ ಪಂದ್ಯಾಟದಲ್ಲಿ ಪ್ರಶಸ್ತಿ ಪಡೆದ ಬೆಳಪು ಫ್ರೆಂಡ್ಸ್ ಕ್ಲಬ್ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳಪು ಇಲ್ಲಿಯ ಆಟದ ಮೈದಾನದಲ್ಲಿ ವಾರ್ಷಿಕ ಕ್ರಿಕೆಟ್ ಪಂದ್ಯಕೂಟದ ಉದ್ಘಾಟನೆಯನ್ನು ಸಮಾಜ ಸೇವಕ ಜನ ಸಂಪರ್ಕ ಜನಸೇವ ವೇದಿಕೆ ಕಾಪು ಇದರ ಅಧ್ಯಕ್ಷರಾದ ಮಲ್ಲಾರು ದಾಬ ನಿವಾಸ ದಿವಾಕರ ಬಿ ಶೆಟ್ಟಿ ಇವರು ಉದ್ಘಾಟಿಸಿದರು. ಬೆಳಪು ಜಾಮಿಯಾ ಮಸೀದಿ ಇದರ ಧರ್ಮ ಗುರುಗಳಾದ ಖಯಿಮ್ ಸಾಹೇಬ್ ಆಶೀರ್ವಚನ ನೀಡಿ ಮಾತನಾಡಿ ಬೆಳಪುವಿನ ಉತ್ಸಾಹಿ ಯುವಕರು ಸೇರಿಕೊಂಡು […]

ಉಡುಪಿ ಪ್ರೀ ಓನ್ಡ್ ಕಾರ್ಸ್ ಅಸೋಸಿಯೇಷನ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಉಡುಪಿ:ಉಡುಪಿ ಪ್ರೀ ಓನ್ಡ್ ಕಾರ್ಸ್ ಅಸೋಸಿಯೇಷನ್ ವತಿಯಿಂದ 15.08.2025 ರಂದು ಕೃಷ್ಣಾನುಗ್ರಹ ಸಂತೆಕಟ್ಟೆಯ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರೊಂದಿಗೆ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಮೊಹಮ್ಮದ್ ಆಶ್ರಫ್ ಮತ್ತು ಕಾರ್ಯದರ್ಶಿಗಳಾದ ಉದಯ್ ಕಿರಣ್ ಹಾಗೂ ಸಮಿತಿಯ ಸದಸ್ಯರೊಂದಿಗೆ ಕೃಷ್ಣ ಅನುಗ್ರಹದ ಸದಸ್ಯರಾದ ಉದಯ್ ಕುಮಾರ್ ಉಪಸ್ಥಿತರಿದ್ದರು. ಹಾಗೆಯೇ ಅಲ್ಲಿಯ ಮಕ್ಕಳಿಗೆ ಸಂಘದ ವತಿಯಿಂದ ಅಗತ್ಯ ವಸ್ತುಗಳನ್ನು ಪೂರೈಸಲಾಯಿತು.

ಮಕ್ಕಳಿಗೆ ಎಳವೆಯಲ್ಲಿ ತುಳು ಕಲಿಸಿದರೆ ಮಾತ್ರ ತುಳು ಸಂಸ್ಕೃತಿ‌ ಉಳಿಸಲು ಸಾಧ್ಯ: ಪೂರ್ಣಿಮಾ

ಉಡುಪಿ: ಮಕ್ಕಳಿಗೆ ತುಳುವನ್ನು ಎಳವೆಯಲ್ಲಿ ಕಲಿಸಿದರಷ್ಟೇ ಆ ಭಾಷೆ ಸಂಸ್ಕೃತಿ ಉಳಿಯಬಲ್ಲದು ಎಂದು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಹೇಳಿದರು. ಅವರು ಭಾನುವಾರ ಉಡುಪಿ ತುಳುಕೂಟದ 30 ನೇ ವರ್ಷದ ‘ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ’ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡುತಿದ್ದರು. ಮಕ್ಕಳಿಗೆ ಉಪದೇಶ ಮಾಡುವುದಕ್ಕಿಂತ ಅವರಿಗೆ ಅವಕಾಶಗಳನ್ನು ಒದಗಿಸಿ ಕೊಡಬೇಕು, ಈ ನಿಟ್ಟಿನಲ್ಲಿ ಎಸ್.ಎಸ್..ಎಲ್.ಸಿ.ಯಲ್ಲಿ ತುಳು ಅಧ್ಯಯನಕ್ಕೆ ಅವಕಾಶ ಮಾಡಿಕೊಡುತ್ತಿರುವುದು ಆಶಾದಾಯಕವಾಗಿದೆ. ಮಕ್ಕಳು ತುಳು ಭಾಷೆಯ ಅಧ್ಯಯನ, ಬಳಕೆ ಕೇವಲ […]

ಉಡುಪಿ: ಸ್ವೀಟ್ಸ್ ತಯಾರಿಕ ಘಟಕಕ್ಕೆ ಅನುಭವಿ ಕೆಲಸಗಾರರು ಬೇಕಾಗಿದ್ದಾರೆ.

ಉಡುಪಿ: ಉಡುಪಿ ಜಿಲ್ಲೆಯ ಸ್ವೀಟ್ಸ್ ತಯಾರಿಕ ಘಟಕಕ್ಕೆ ಅನುಭವಿ ಕೆಲಸಗಾರರು ಬೇಕಾಗಿದ್ದಾರೆ.ಉತ್ತಮ ವೇತನ, ಉಚಿತ ಊಟ ವಸತಿ ನೀಡಲಾಗುವುದು.ಸಂಪರ್ಕಿಸಿ 9606169903

ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆ ಮಕ್ಕಳ ಗ್ರಹಿಕೆಗೆ ಅನುಕೂಲಕರ: ಸುಭಾಷ್ಚಂದ್ರ ಶೆಟ್ಟಿ

ಬೆಳ್ತಂಗಡಿ: ವಿದ್ವತ್ ಪಿಯು ಕಾಲೇಜು ಗುರುವಾಯನಕೆರೆ, ಇದರ ಇನ್ಸ್ಪೈರ್ ವಿದ್ವತ್ ಸೈನ್ಸ್ ಫೋರಂ ಇದರ ಆಶ್ರಯದಲ್ಲಿ ಆಯೋಜಿಸಿದ ಹತ್ತನೇ ತರಗತಿಯ ಪಠ್ಯಪುಸ್ತಕದಲ್ಲಿ ಎನ್ ಸಿ ಇ ಆರ್ ಟಿ ಮಾರ್ಗಸೂಚಿಯ ಪ್ರಕಾರ ನೀಡಿದ ” ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆ* ” ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಶಾಲೆಗಳಿಂದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ, ನಿವೃತ್ತ ಪ್ರಾಂಶುಪಾಲ ಹಾಗೂ ಶಿಕ್ಷಣ ತಜ್ಞ ಪಾರ್ಥಸಾರಥಿಯವರು ಭಾಗವಹಿಸಿದ್ದರು. ಸಭಾ […]