ಹೆಬ್ರಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ

ಹೆಬ್ರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ನಿರಂತರವಾಗಿ ವೇದಿಕೆ ಕಲ್ಪಿಸಿ ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಚಾಣಕ್ಯ ಸಂಸ್ಥೆಯ ಪರಿಶ್ರಮ ಶ್ಲಾಘನೀಯ ಎಂದು ಹೆಬ್ರಿ -ಅಜೆಕಾರು ವಲಯ ಬಂಟರ ಸಂಘದ ಅಧ್ಯಕ್ಷ ಬಿ. ಹರ್ಷ ಶೆಟ್ಟಿ ಹೇಳಿದರು. ಅವರು ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ಚಾಣಕ್ಯ ಚಿತ್ರಕಲಾ ತರಬೇತಿ ಕೇಂದ್ರ ಹೆಬ್ರಿ ಇದರ ನೇತೃತ್ವದಲ್ಲಿ ನೇತಾಜಿ ಫ್ರೆಂಡ್ಸ್ ಕ್ಲಬ್ ಮುದ್ರಾಡಿ , ಬಂಟರ ಸಂಘ ಹೆಬ್ರಿ, ಲಯನ್ಸ್ ಕ್ಲಬ್ ಹೆಬ್ರಿ ಸಿಟಿ, ಜೆಸಿಐ ಹೆಬ್ರಿ ಇವರ ಸಹಯೋಗದೊಂದಿಗೆ ಹೆಬ್ರಿ ಬಂಟರ […]

ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಮಾನುಷ ಕೃತ್ಯಗಳು ಎಸ್‌ಐಟಿ ತನಿಖೆ ಮೂಲಕ ಬೆಳಕಿಗೆ ಬರಲಿ: ಮುಖ್ಯಮಂತ್ರಿಗೆ ಪತ್ರ ಬರೆದ ಜಾಗೃತ ನಾಗರಿಕರು ಕರ್ನಾಟಕದ ಮುಖಂಡರು

ಬೆಂಗಳೂರು: ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನ ಅಮಾನುಷ ಘಟನೆಗಳು ನಡೆದಿದೆ.  ಈ ಘಟನೆಗಳ ಎಸ್‌ಐಟಿ ತನಿಖೆಗೆ ಬೆಂಬಲಿಸಿ ಜಾಗೃತ ನಾಗರಿಕರು ಕರ್ನಾಟಕ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸಚಿವ ಸಂಪುಟದ ಸದಸ್ಯರ ಮತ್ತು ವಿರೋಧ ಪಕ್ಷದ ಸದಸ್ಯರ ಕಾನೂನು ವಿರೋಧಿ, ಸಂವಿಧಾನ ವಿರೋಧಿ ಹೇಳಿಕೆಗಳಿಗೆ ಜಾಗೃತ ನಾಗರಿಕರು ಕರ್ನಾಟಕದ ಮುಖಂಡರು ಖಂಡಿಸಿದ್ದಾರೆ. ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಕಳೆದ ನಾಲ್ಕು ದಶಕಗಳಿಂದ ಅತ್ಯಾಚಾರ, ಕೊಲೆ, ಭೂ ಕಬಳಿಕೆ ಪ್ರಕರಣಗಳು ಆಗಾಗ ಮುನ್ನೆಲೆಗೆ ಬರುತ್ತಲೇ ಇವೆ. ಶಾಲಾ ಕಾಲೇಜುಗಳಿಗೆ ಹೋದ ವಿದ್ಯಾರ್ಥಿನಿಯರು […]

ವಿದ್ಯಾರ್ಥಿನಿಲಯಗಳ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ /ಪರಿಶಿಷ್ಟ ವರ್ಗದ ಸಾಮಾನ್ಯ ಪದವಿ ಕೋರ್ಸಿನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 25 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ:8050770004 ಮತ್ತು 8050770005 ಅನ್ನು ಸಂಪರ್ಕಿಸಬಹುದಾಗಿದೆ […]

ಇಂದು (ಅಗಸ್ಟ್18) ಉಡುಪಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿರುವ ಹಿನ್ನಲೆ ಇಂದು ( ಅಗಸ್ಟ್ 18) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಮತ್ತು ಐಟಿಐ ಗಳಿಗೆ ರಜೆಯನ್ನು ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ. ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಿದೆ. ರೆಡ್ ಅಲರ್ಟ್::ಅಗಸ್ಟ್ 18 ರಿಂದ ಅಗಸ್ಟ್ […]