ಮಣಿಪಾಲ: ಹೋಟೆಲ್ ಬಾರ್ ಉದ್ಯಮಿ ಕೃಷ್ಣರಾಜ್ ಹೆಗ್ಡೆ ಆತ್ಮಹತ್ಯೆ

ಉಡುಪಿ: ಮಣಿಪಾಲ ಈಶ್ವನಗರದ ಡೌನ್ ಟೌನ್ ಬಾರ್ ಆ್ಯಂಡ್ ರೆಸ್ಟೋರೆಂಟ್ ನ ಪಾಲುದಾರ ಕಾರ್ಕಳ ಬೈಲೂರಿನ ನಿವಾಸಿ ಕೃಷ್ಣರಾಜ್ ಹೆಗ್ಡೆ (45)ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಉಡುಪಿ-ಮಣಿಪಾಲದಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಇವರು, ತಾಯಿ, ಪತ್ನಿ, ಪುತ್ರನನ್ನು ಅಗಲಿದ್ದಾರೆ.ಬೈಲೂರಿನಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಮುಂಚೂಣಿಯಲ್ಲಿ ಸಕ್ರಿಯರಾಗಿದ್ದರು. ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಪ್ರಕರಣ: ಉಡುಪಿ ಮೂಲದ ಇಬ್ಬರು ಪೊಲೀಸರ ವಶಕ್ಕೆ.

ಬೆಂಗಳೂರು: ನಟಿ ರಮ್ಯಾಗೆ (Actress Ramya) ಅಶ್ಲೀಲ ಕಮೆಂಟ್‌ ಮಾಡಿದ್ದ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಉಡುಪಿ ಮೂಲದ ಸುಜನ್‌ ಮತ್ತು ಆದರ್ಶ್‌ ಬಂಧಿತರು. ಆರೋಪಿಗಳು ದರ್ಶನ್‌ ಅಭಿಮಾನಿಗಳಾಗಿದ್ದು, ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು. ಈ ಹಿಂದೆ ಇದೇ ಪ್ರಕರಣದಲ್ಲಿ ಕೋಲಾರ, ಚಿಕ್ಕಮಗಳೂರು, ಬೆಂಗಳೂರು ಸೇರಿ ವಿವಿಧೆಡೆ 7 ಮಂದಿಯನ್ನು ಬಂಧಿಸಲಾಗಿತ್ತು. ಇತ್ತೀಚೆಗೆ ರಮ್ಯಾ ರೇಣುಕಾಸ್ವಾಮಿಗೆ ನ್ಯಾಯ ಸಿಗಬೇಕೆನ್ನುವ ನಿಟ್ಟಿನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. […]

ಕೊಂಕಣ ರೈಲ್ವೆಯಲ್ಲಿ ಟಿಕೆಟ್ ರಹಿತ ಪ್ರಯಾಣ; 2.37 ಕೋಟಿ ರೂ. ದಂಡ ವಸೂಲಿ

ಉಡುಪಿ: ಟಿಕೆಟ್‌ ರಹಿತ ಪ್ರಯಾಣಿಕರ ಪತ್ತೆಗಾಗಿ ಕೊಂಕಣ ರೈಲು ಮಾರ್ಗದಲ್ಲಿ ವಿಶೇಷ ಅಭಿಯಾನವನ್ನು ಕೈಗೊಂಡಿರುವ ಕೊಂಕಣ ರೈಲ್ವೆ ನಿಗಮವು ಈ ವರ್ಷ ಇದುವರೆಗೆ ಒಟ್ಟು 2,37,11,161 ರೂ.ಗಳನ್ನು ದಂಡ ರೂಪದಲ್ಲಿ ವಸೂಲಿ ಮಾಡಿದೆ ಎಂದು ನಿಗಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಇಂದಿನವರೆಗೆ ಒಟ್ಟು 3,765 ಟಿಕೇಟ್ ರಹಿತ ಪ್ರಯಾಣಿಕರ ತಪಾಸಣಾ ಅಭಿಯಾನ ಕೈಗೊಳ್ಳಲಾಗಿದೆ. ಈ ವೇಳೆ 40,602 ಮಂದಿ ಅನಧಿಕೃತವಾಗಿ ಸಂಚರಿಸುವವರನ್ನು ಹಾಗೂ ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಂಚಿ, ದಂಡ […]

ಧರ್ಮಸ್ಥಳ ಪ್ರಕರಣ: FSL ವರದಿ ಬರುವವರೆಗೂ ಶವ ಶೋಧ ಕಾರ್ಯಾಚರಣೆ ಸ್ಥಗಿತ; ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ಧರ್ಮಸ್ಥಳ ಗ್ರಾಮ ಪ್ರಕರಣ ಸಂಬಂಧಿಸಿದಂತೆ ವಿಧಿವಿಜ್ಞಾನದ ಪ್ರಯೋಗಾಲಯದ ವರದಿ ಬರುವವರೆಗೂ ಶವ ಶೋಧ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಎಸ್ಐಟಿ ನಿರ್ಧರಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸೋಮವಾರ ಹೇಳಿದರು. ಸೋಮವಾರ ವಿಧಾನಸಭೆಯಲ್ಲಿ ಸುದೀರ್ಘ ಚರ್ಚೆಯ ಬಳಿಕ ಉತ್ತರಿಸಿದ ಅವರು, ಎಸ್‌ಐಟಿ ಯಾರದೇ ಒತ್ತಡಕ್ಕೆ ಮಣಿಯದೆ ಬಹಳ ಗಂಭೀರ ಮತ್ತು ಪಾರದರ್ಶಕವಾಗಿ ತನಿಖೆ ನಡೆಸುತ್ತಿದೆ. ಧರ್ಮಸ್ಥಳದಲ್ಲಿ ಇನ್ನೂ ಎಷ್ಟು ಕಡೆ ಅಗೆಯಬೇಕು, ತನಿಖೆ ಮುಂದಕ್ಕೆ ಹೋಗಬೇಕಾ ಅಥವಾ ಬೇಡವಾ ಎಂಬುದನ್ನು ಎಸ್‌ಐಟಿ ತೀರ್ಮಾನಿಸಲಿದೆ. ಈವರೆಗೆ ಸಿಕ್ಕಿರುವ ಅಸ್ಥಿಪಂಜರ, […]

ಧರ್ಮಸ್ಥಳ ಪ್ರಕರಣದಲ್ಲಿ ಶೀಘ್ರವೇ ಸತ್ಯಾಸತ್ಯತೆ ಹೊರಬರಲಿದೆ:ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಿಧಾನಸೌಧ: ಧರ್ಮಸ್ಥಳದ ಹೆಸರಿಗೆ ಕಳಂಕ ಬರಬಾರದು ಎಂಬ ಕಾರಣಕ್ಕೆ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಈ ಕುರಿತು ಶೀಘ್ರವೇ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಗೃಹ ಸಚಿವರು ಉತ್ತರವನ್ನು ಕೊಟ್ಟಿದ್ದಾರೆ. ಅದಷ್ಟು ಬೇಗ ಸತ್ಯ ಹೊರಬೀಳಲಿದೆ ಎಂದರು. ನಿನ್ನೆ ಶ್ರಾವಣ ಸೋಮವಾರ ಆದ ಕಾರಣ ಎಲ್ಲಾ ವೀರಶೈವ-ಲಿಂಗಾಯತ ಸಚಿವರು, ಶಾಸಕರು, ವಿಧಾನಪರಿಷತ್‌ ಸದಸ್ಯರು ಪೂಜೆಯಲ್ಲಿ […]