ಧರ್ಮಸ್ಥಳ:ಎಸ್ ಐ ಟಿ ತನಿಖೆಯ ದಿಕ್ಕು ತಪ್ಪಿಸುತ್ತಿದೆಯಾ ಮಾಧ್ಯಮಗಳು? ಮಾಧ್ಯಮಗಳೇ ಜವಾಬ್ದಾರಿ ಮರೆತು ಗಾಳಿ ಸುದ್ದಿಗೆ ಮಣೆ ಹಾಕಿದವಾ?

-ವಿಶೇಷ ಬರಹ ಧರ್ಮಸ್ಥಳ ಅಸಹಜ ಶವಗಳನ್ನು ಹೂತು ಹಾಕಲಾಗಿದೆ ಎನ್ನುವ ದೂರಿನ ಕುರಿತು ಸರಕಾರ ಎಸ್ ಐಟಿ ರಚನೆ ಮಾಡಿ ತನಿಖೆ ನಡೆಯುತ್ತಿದೆ. ಸೋಮವಾರ ಸದನದಲ್ಲಿ ಗೃಹ ಸಚಿವರಾದ ಜಿ ಪರಮೇಶ್ವರ್, ಎಸ್ ಐಟಿ ನೀಡಿದ ಒಂದಷ್ಟು ವರದಿಯನ್ನೂ ವಿವರಿಸಿದ್ದಾರೆ. ಎರಡು ಕಡೆಗಳಲ್ಲಿ ಅಸ್ಥಿಪಂಜರ, ಮೂಳೆ ಸಿಕ್ಕಿರುದಾಗಿ ಮತ್ತು ಮಣ್ಣಿನಲ್ಲಿ ಆಸಿಡ್ ಅಂಶವಿದ್ದು ಕೆಲವೊಂದು ಮೂಳೆಗಳು ಕರಗಿ ಹೋಗುವ ಸಾಧ್ಯತೆ ಇದ್ದು ಮಣ್ಣನ್ನೂ ಪರೀಕ್ಷೆಗೆ ಕಳಿಸಲಾಗಿದೆ. ಯಾವುದೇ ಕಾರಣಕ್ಕೂ ಸರಕಾರ ತನಿಖೆಯನ್ನು ಅರ್ಧಕ್ಕೆ ನಿಲ್ಲಿಸುದಿಲ್ಲ,ತಪ್ಪಿತಸ್ಥರು ಯಾರೇ ಆಗಿದ್ದರೂ ಶಿಕ್ಷೆ […]
ಯಕ್ಷಗಾನ ಕಲೆ ಒಂದು ದೈವೀಕಲೆ: ಯಕ್ಷಗಾನವನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ; ಡಾ. ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ: ಶ್ರೀ ಕೃಷ್ಣ ಮಠ ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಪ್ರಯುಕ್ತ ಭಾನುವಾರ ಉಡುಪಿ ಪುತ್ತೂರು ಶ್ರೀ ಭಗವತೀ ಯಕ್ಷಕಲಾ ಬಳಗ ಇವರ ವತಿಯಿಂದ ಯಕ್ಷಗಾನಾರ್ಪಣೆ ಕಾರ್ಯಕ್ರಮ ನಡೆಯಿತು. ಪರ್ಯಾಯ ಪೀಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಕಾರ್ಯಕ್ರಮ ಉದ್ಘಾಟಿಸಿ, ಆಶೀರ್ವಚನ ನೀಡಿ, ಶ್ರೀ ಭಗವತೀ ಯಕ್ಷಕಲಾಬಳಗ ಸಂಸ್ಥೆಯು ಮಾಡುತ್ತಿರುವ ಯಕ್ಷಗಾನಾರ್ಪಣೆಯು ಶ್ರೀಕೃಷ್ಣನ ಜನ್ಮಾಷ್ಟಮಿಯ ಸಂಭ್ರಮ ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಅಧ್ಯಕ್ಷ ಡಾ. […]
ಬ್ರಹ್ಮಾವರ ಸಕ್ಕರೆ ಕಾರ್ಖಾನೆಗೆ 13.92 ಕೋಟಿ ರೂ. ನಷ್ಟ

ಉಡುಪಿ: ಬ್ರಹ್ಮಾವರದ ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆಯ ಹಳೆಯ ಯಂತ್ರೋಪಕರಣಗಳ ಮಾರಾಟದಲ್ಲಿ ಒಟ್ಟು 13.92 ಕೋಟಿ ರೂ. ನಷ್ಟ ಉಂಟಾಗಿರುವುದು ತನಿಖೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಮೇಲೆ ಕ್ರಿಮಿನಲ್ ಪ್ರಾಸಿಕ್ಯೂಷನ್‌ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅನುಮತಿ ನೀಡಿದ್ದಾರೆ. ಕಾರ್ಖಾನೆಗೆ ಒಟ್ಟು 13.92 ಕೋಟಿ ರೂ. ಆರ್ಥಿಕ ನಷ್ಟ ಉಂಟಾಗಲು ಆಡಳಿತ ಮಂಡಳಿ, ಟೆಂಡರ್ ಕಮ್ ಹರಾಜಿನ ತಾಂತ್ರಿಕ ಸಮಿತಿ ಸದಸ್ಯರು ಹಾಗೂ ಆಗಿನ […]
ಆ.21-30: ವಿದುಷಿ ದೀಕ್ಷಾ ವಿ ಅವರಿಂದ 216 ಗಂಟೆಗಳ ನಿರಂತರ ಭರತನಾಟ್ಯ ಪ್ರದರ್ಶನ

ಉಡುಪಿ: ಭರತನಾಟ್ಯದಲ್ಲಿ ವಿದುಷಿ ಪದವಿಯನ್ನು ಪಡೆದ ದೀಕ್ಷಾ ವಿ. ಅವರು 216 ಗಂಟೆಗಳ ನಿರಂತರ ಭರತನಾಟ್ಯ ಪ್ರದರ್ಶನ ನೀಡುವ ಮೂಲಕ ವಿಶ್ವದಾಖಲೆ ಬರೆಯಲು ಸಜ್ಜಾಗಿದ್ದಾರೆ. ಇದೇ ಆ.21ರಿಂದ 30ರವರೆಗೆ ಉಡುಪಿ ಅಜ್ಜರಕಾಡಿನ ಡಾ. ಜಿ. ಶಂಕರ್ ಮಹಿಳಾ ಪ್ರಥಮ ದರ್ಜೆ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ವಿಶ್ವದಾಖಲೆಯ ಪ್ರದರ್ಶನ ನೀಡಲಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿದುಷಿ ದೀಕ್ಷಾ ವಿ ಅವರು, ಮಣಿಪಾಲದ ರತ್ನ ಸಂಜೀವ ಕಲಾಮಂಡಲದ ವತಿಯಿಂದ “ನವರಸ ದೀಕ್ಷಾ ವೈಭವಂ” ಎಂಬ […]
ಬ್ರಹ್ಮಾವರ: ಹಿಂದೂ ಸಂಘಟನೆಯ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲು

ಉಡುಪಿ: ಆರೆಸ್ಸೆಸ್ ಮುಖಂಡ ಬಿ.ಎಲ್ ಸಂತೋಷ್ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದಡಿ ಹಿಂದೂ ಸಂಘಟನೆಯ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಶರತ್ ಶೆಟ್ಟಿ ಎಂಬಾತನ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶರತ್ ಶೆಟ್ಟಿ ಈ ಮೊದಲು ವಸಂತ್ ಗಿಳಿಯಾರ್ ಮಾಡಿದ್ದ ಪೋಸ್ಟ್ ನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದ ಎಂದು ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.