ಉಡುಪಿ:ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ-ಸಂಸ್ಥೆಗಳ ನೋಂದಣಿ ಕಡ್ಡಾಯ

ಉಡುಪಿ: ವಿಕಲಚೇತನ ವ್ಯಕ್ತಿಗಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಹಾಗೂವಿಕಲಚೇತನ ಸಂಘಗಳು ಕಡ್ಡಾಯವಾಗಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016 ಕಾಯ್ದೆಯ ಸೆಕ್ಷನ್ 50, 51 ಮತ್ತು 52 ರ ಪ್ರಕಾರ ಸೇವಾಸಿಂಧು ತಂತ್ರಾಂಶದ ಮೂಲಕ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ನೋಂದಣಿ ಮಾಡಿಸಿಕೊಳ್ಳಬೇಕು. ಈ ರೀತಿ ನೋಂದಣಿಯಾದ ಸಂಸ್ಥೆಗಳು ತಮ್ಮ ನೋಂದಣಿಯನ್ನು ಪ್ರತಿ 5 ವರ್ಷಗಳಿಗೊಮ್ಮೆ ನವೀಕರಿಸಬೇಕಾಗಿರುತ್ತದೆ. ಆದರೆ ಪ್ರಸ್ತುತ ಜಿಲ್ಲೆಯಲ್ಲಿ ಹಲವಾರು ಸಂಘ ಸಂಸ್ಥೆಗಳು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ […]

ಉಡುಪಿ:ರಾಜ್ಯ ಮಟ್ಟದ ಉತ್ತಮ ಗ್ರಂಥಪಾಲಕ ಪ್ರಶಸ್ತಿಗೆ ಆಯ್ಕೆಯಾದ ಸಿ. ರಂಜಿತಾ

ಉಡುಪಿ: ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು ಇವರ ವತಿಯಿಂದ ಆಗಸ್ಟ್ 12 ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಗ್ರಂಥಪಾಲಕರ ದಿನಾಚರಣೆಯ ಕಾರ್ಯಕ್ರಮದಲ್ಲಿ, 2025 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಗ್ರಂಥಪಾಲಕ ಪ್ರಶಸ್ತಿಗೆ ಆಯ್ಕೆಯಾದ ನಗರದ ಅಜ್ಜರಕಾಡು ವಿದ್ಯಾ ವಾಚಸ್ಪತಿ ಡಾ ಬನ್ನಂಜೆ ಗೋವಿಂದಾಚಾರ್ಯರ ಸ್ಮಾರಕ ನಗರ ಕೇಂದ್ರ ಗ್ರಂಥಾಲಯ ಇಲ್ಲಿನ ಗ್ರಂಥಪಾಲಕಿ ಸಿ ರಂಜಿತಾ ಇವರಿಗೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ ರವರು ಪ್ರಶಸ್ತಿ ಪ್ರದಾನ ಮಾಡಿದರು.

ಉಡುಪಿ:ರಾ.ಹೆ ರಸ್ತೆಯಲ್ಲಿ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ವೈಜ್ಞಾನಿಕವಾಗಿ ರಸ್ತೆ ಸುಧಾರಣೆ ಕಾಮಗಾರಿಗಳನ್ನು ಕೈಗೊಳ್ಳಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ:ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ರಸ್ತೆಗಳಲ್ಲಿ ಗುರುತಿಸಲಾದ ಅಪಘಾತವಾಗುವ ಕಪ್ಪು ಚುಕ್ಕೆಪ್ರದೇಶಗಳಲ್ಲಿ ಅಗತ್ಯವಿರುವ ರಸ್ತೆ ಸುಧಾರಣೆ ಅಭಿವೃದ್ಧಿ ಕಾಮಗಾರಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳುವ ಮೂಲಕಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಈಗಾಗಲೇ ರಾಷ್ಟ್ರೀಯ ಹೆದ್ದಾರಿಯಲ್ಲಿ 18 ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ ಬಹುತೇಕಕಾಮಗಾರಿಗಳಲ್ಲಿ ದಾರಿದೀಪ ಅಳವಡಿಕೆ, […]

ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿಯವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸೊಸೈಟಿಯ ಉಪಾಧ್ಯಕ್ಷರಾದ ಜಾರ್ಜ್ ಸ್ಯಾಮ್ಯುಯೆಲ್, ಶತಮಾನೋತ್ಸವ ಸಮಿತಿ ಸಂಚಾಲಕರಾದ ಪುರುಷೋತ್ತಮ್ ಪಿ. ಶೆಟ್ಟಿ, ಸೊಸೈಟಿಯ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ವರ್ಗ, ದೈನಿಕ ಠೇವಣಿ ಸಂಗ್ರಾಹಕರು ಉಪಸ್ಥಿತರಿದ್ದರು. ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್ ಸ್ವಾಗತಿಸಿ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ವಂದಿಸಿದರು. ಮಲ್ಪೆ ಶಾಖಾ ವ್ಯವಸ್ಥಾಪಕರಾದ ನವೀನ್ […]