ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣ ಎಸ್‌ಐಟಿಗೆ ಹಸ್ತಾಂತರ

ಬೆಳ್ತಂಗಡಿ: 2003ರಲ್ಲಿ ಧರ್ಮಸ್ಥಳ ದೇವಸ್ಥಾನದ ಆವರಣದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಇದೀಗ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಹಸ್ತಾಂತರಿಸಲಾಗಿದೆ. ಯುವತಿಯ ತಾಯಿ 2025ರ ಜುಲೈ 15ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ನೀಡಿದ್ದರು. ಪ್ರಕರಣವನ್ನು ಕೇಸ್ ನಂ. 175/PTN/DPS/2025 ಅಡಿಯಲ್ಲಿ ದಾಖಲಿಸಲಾಗಿದೆ. ದೂರಿನ ಆಧಾರದ ಮೇಲೆ, ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್‌ಪೆಕ್ಟರ್ ಜನರಲ್ (ಡಿಜಿ ಮತ್ತು ಐಜಿಪಿ) 2025ರ ಆಗಸ್ಟ್ 19ರಂದು ಪ್ರಕರಣವನ್ನು ವಿವರವಾದ ತನಿಖೆಗಾಗಿ […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಅಟಲ್ ಟಿಂಕರಿಂಗ್ ಲ್ಯಾಬ್‌ನ ಕುರಿತು ಮಾರ್ಗದರ್ಶನ

ಉಡುಪಿ, ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ದಿನಾಂಕ 16 ಆಗಸ್ಟ್ 2025 ರಂದು ಸರಕಾರಿ ಪಿ ಯು ಕಾಲೇಜು (ಹೈಸ್ಕೂಲ್ ವಿಭಾಗ) ಬ್ರಹ್ಮಾವರ, ಕೆ ಪಿ ಎಸ್ ಹಿರಿಯಡ್ಕ ಮತ್ತು ಎಸ್ ಎಲ್ ಜೆ ಐ ಶಾಲೆ ಬೆಳ್ಮಣ್‌ಗಳಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್‌ನ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮವನ್ನು ನಡೆಸಿದರು. ವಿದ್ಯಾರ್ಥಿಗಳಲ್ಲಿ ಹೊಸತನ, ಸೃಜನಶೀಲತೆ ಮತ್ತು ವಿಜ್ಞಾನ – ತಾಂತ್ರಿಕ ಕ್ಷೇತ್ರಗಳತ್ತ ಆಸಕ್ತಿ ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದ್ದು, ವಿದ್ಯಾರ್ಥಿಗಳ ಆವಿಷ್ಕಾರ ಶಕ್ತಿಯನ್ನು ಬೆಳೆಸುವಲ್ಲಿ […]
ಕುಂದಾಪುರ: ದಸರಾ ಕ್ರೀಡಾಕೂಟದ ಥ್ರೋ ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ

ಕುಂದಾಪುರ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೈಂದೂರು ಹಾಗೂ ಕುಂದಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರು ಥ್ರೋಬಾಲ್ ಪಂದ್ಯಾಟ ದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ಸಾಧನೆ ಮೆರೆದಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕರಾದ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋದಕೇತರ ಸಿಬ್ಬಂದಿ […]
ವೆಂಕಟರಮಣ ಪದವಿ ಪೂರ್ವ ಕಾಲೇಜು:ಕಬಡ್ಡಿ ಪಂದ್ಯಾಟದಲ್ಲಿ ಬಾಲಕರ ತಂಡಕ್ಕೆ ದ್ವಿತೀಯ ಸ್ಥಾನ.

ಕುಂದಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೈಂದೂರು ಹಾಗೂ ಕುಂದಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಕಬಡ್ಡಿ ಪಂದ್ಯಾಟ ದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕರಾದ ರಾಘವೇಂದ್ರ ಗಾಣಿಗ ಹಾಗೂ ಕೃಷ್ಣ ಉಪಸ್ಥಿತರಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ […]
ಆ.30ರಂದು ಜಂಟಿ ಸಭೆ ನಡೆಸಲು ಒಪ್ಪಿಗೆ; ಕಟ್ಟಡ ನಿರ್ಮಾಣ ಕಾರ್ಮಿಕರ ಧರಣಿ ಸತ್ಯಾಗ್ರಹ ಅಂತ್ಯ

ಉಡುಪಿ: ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವು ಜಂಟಿ ಸಭೆ ಕರೆಯುವ ಭರವಸೆ ಹಿನ್ನೆಲೆಯಲ್ಲಿ ಬುಧವಾರ ಅಂತ್ಯಗೊಂಡಿತು. ಜಿಲ್ಲೆಯ ಸಾವಿರಾರು ಕಟ್ಟಡ ನಿರ್ಮಾಣ ಕಾರ್ಮಿಕರು ಮಣಿಪಾಲ ಟೈಗರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಮೆರವಣಿಗೆ ನಡೆಸಿದರು. ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ಗೇಟಿನ ಬಳಿ ಬರುತ್ತಿದ್ದಂತೆ ಪೋಲೀಸರು ಗೇಟ್ ಅನ್ನು ಬಂದ್ […]