ಕಳೆದ ವಾರವಷ್ಟೇ ಹರಕೆ ಹೊತ್ತಿದ್ದ ತಾಯಿ; ನಟಿ ರಕ್ಷಿತಾ ಪ್ರೇಮ್ ಕಾಪು ಮಾರಿಯಮ್ಮ ಕ್ಷೇತ್ರಕ್ಕೆ ಅನಿರೀಕ್ಷಿತ ಭೇಟಿ

ಉಡುಪಿ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ತಾಣ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಈಗಾಗಲೇ ಹಲವಾರು ಕಾರಣಿಕಗಳಿಗೆ ಖ್ಯಾತಿಯಾಗಿದ್ದು, ನಟ – ನಟಿಯರು, ನ್ಯಾಯಾಧೀಶರು, ಅಧಿಕಾರಿಗಳು, ರಾಜಕೀಯ ನೇತಾರರು ಸೇರಿದಂತೆ ಹಲವಾರು ಗಣ್ಯರು ನಿತ್ಯ ಭೇಟಿ ನೀಡುತ್ತಿದ್ದು, ಬಹಳ ಕಾರಣಿಕದ ಕ್ಷೇತ್ರವಾಗಿ ಗುರುತಿಸಿಕೊಂಡಿದೆ. ಇಂದು ಕಟೀಲು ದೇವಸ್ಥಾನಕ್ಕೆ ಆಗಮಿಸಿದ್ದ ನಟಿ ರಕ್ಷಿತಾ ಪ್ರೇಮ್ ಅವರು ಕಾಪುವಿಗೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರ್ಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಅವರು […]
ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಸಿಕೊಂಡ ನಿರ್ದೇಶಕ ಪ್ರೇಮ್:ಎಮ್ಮೆಗೆ ಕೊಟ್ಟದ್ದು 4.5 ಲಕ್ಷ, ಎಮ್ಮೆ ಕೊಡದೇ ಕೈ ಕೊಟ್ಟ ಭೂಪ!

ಬೆಂಗಳೂರು:ಕನ್ನಡ ಚಿತ್ರ ನಿರ್ದೇಶಕ ಪ್ರೇಮ್ ಎಮ್ಮೆ ಖರೀದಿಸಲು ಹೋಗಿ ಮೋಸಗೊಂಡು ಲಕ್ಷಗಟ್ಟಲೆ ಹಣ ಕಳೆದುಕೊಂಡಿದ್ದಾರೆ. ಅವರಿಗೆ ಎಮ್ಮೆ ಕೊಡಿಸುವುದಾಗಿ 4.5 ಲಕ್ಷ ರೂಪಾಯಿ ಪಡೆದು ವಂಚಿಸಿರುವ ಆರೋಪದ ಮೇಲೆ ಗುಜರಾತ್ ಮೂಲದ ವನರಾಜ್ ಭಾಯ್ ಎಂಬಾತನ ವಿರುದ್ಧ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಮ್ ಅವರ ಮ್ಯಾನೇಜರ್ ಕಂ ನಟ ದಶಾವರ ಚಂದ್ರು ಅವರು ದೂರು ನೀಡಿದ್ದಾರೆ. ಏನಾಗಿತ್ತು: ನಿರ್ದೇಶಕ ಪ್ರೇಮ್ ಅವರು ತಮ್ಮ ಹೈನುಗಾರಿಕೆ ಮಾಡಲು ಎರಡು ಎಮ್ಮೆಗಳನ್ನು ಖರೀದಿಸಲು ಯೋಚಿಸಿದ್ದರು. ಅದರಂತೆ ಈ […]
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಿಧಾನಸೌಧ (ವಿಧಾನಸಭೆ): ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 35 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಪ್ರಸ್ತುತ ಜಿಲ್ಲಾಧಿಕಾರಿಗಳ ಅನುಮೋದನೆಯೊಂದಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಕಳೆದ 2 ವರ್ಷಗಳಿಂದ ನೇಮಕಾತಿ ಮಾಡದೇ ಇರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ ಎಂದು ಶಾಸಕ ಡಿ.ಜಿ.ಶಾಂತನಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, […]
ಆ. 23ರಿಂದ 25ರವರೆಗೆ ಉಡುಪಿಯಲ್ಲಿ ಕರ್ನಾಟಕ ರಾಜ್ಯ ಕಿರಿಯರ ಮತ್ತು ಅಂಡರ್ 23 ವಯೋಮಿತಿ ಕ್ರೀಡಾಕೂಟ

ಉಡುಪಿ: ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆ ಮತ್ತು ಕರ್ನಾಟಕ ರಾಜ್ಯದ ಸಂಸ್ಥೆಯ ಜಂಟಿ ಆಶ್ರಯದಲ್ಲಿ “ಕರ್ನಾಟಕ ರಾಜ್ಯ ಕಿರಿಯರ ಮತ್ತು ಅಂಡರ್ 23ರ ವಯೋಮಿತಿ ಕ್ರೀಡಾಕೂಟವು ಆ. 23 ರಿಂದ 25ರವರೆಗೆ ಉಡುಪಿ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಮಾಜಿ ಶಾಸಕರು ಹಾಗೂ ಕ್ರೀಡಾಕೂಟ ಸಂಘಟನಾ ಸಮಿತಿ ಅಧ್ಯಕ್ಷರಾದ ಕೆ ರಘುಪತಿ ಭಟ್ ಹೇಳಿದರು. ಈ ಕುರಿತು ಸುದ್ದಿಗೋಷ್ಠೀಯಲ್ಲಿ ಮಾತನಾಡಿ ಅವರು, ಈ ಕ್ರೀಡಾಕೂಟದಲ್ಲಿ ಪುದುಚೇರಿಯಲ್ಲಿ ನಡೆಯುವ ಅಖಿಲ ಭಾರತ ದಕ್ಷಿಣ […]
ಹಿಂದೂ-ಮುಸ್ಲಿಂ ಭಾವೈಕ್ಯಕ್ಕೆ ಸಾಕ್ಷಿಯಾದ ಕೈಪುಂಜಾಲು ಉರೂಸ್

ಉಡುಪಿ: ಹಿಂದೂಗಳ ಜಾಗದಲ್ಲಿರುವ ದರ್ಗಾ ಕಾಪು ಸಮುದ್ರ ಕಿನಾರೆಯಲ್ಲಿರುವ ಸಯ್ಯದ್ ಅರಭೀ ವಲಿಯುಲ್ಲಾಹಿರವರ ದರ್ಗಾ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಇಲ್ಲಿನ ವಾರ್ಷಿಕ ಸಫರ್ ಝಿಯಾರತ್’ (ಉರೂಸ್) ಸಮಾರಂಭವು ಸಂಭ್ರಮದಿಂದ ನಡೆಯಿತು. ಇದರಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರೈಸ್ತರು ಕೂಡ ಭಾಗಿಯಾಗುತ್ತಾರೆ. ಕಾಪು ಕಡಲ ತಡಿಯಲ್ಲಿ ಮೊಗವೀರ ಸಮಾಜದ ಶ್ರೀಯಾನ್ ಕುಟುಂಬಕ್ಕೆ ಸೇರಿದ ಜಾಗದಲ್ಲಿದೆ ಈ ದರ್ಗಾ. ಕ್ಯಾಲೆಂಡರ್‌ನ ಸಫರ್ ತಿಂಗಳ ಕೊನೆಯ ಬುಧವಾರ ಸಫರ್ ಝಿಯಾರತ್ ನಡೆಯುತ್ತದೆ. ಇದರಲ್ಲಿ ಉಡುಪಿ ಮಾತ್ರವಲ್ಲದೇ ಕೇರಳದಿಂದ ಭಟ್ಕಳದವರೆಗಿನ ಸಹಸ್ರಾರು ಮಂದಿ […]