ಉಡುಪಿ: ಧರ್ಮಸ್ಥಳ ವಿರುದ್ಧ ಷಡ್ಯಂತ್ರ -ವಿಶ್ವ ಹಿಂದೂ ಪರಿಷತ್ನಿಂದ ಅನಂತೇಶ್ವರ ದೇವಸ್ಥಾನದಲ್ಲಿ ಶಿವ ಪಂಚಾಕ್ಷರಿ ಮಂತ್ರ ಪಠಣ

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ, ಅಪಪ್ರಚಾರ ದೂರವಾಗಿ ಶ್ರೀ ಮಂಜುನಾಥನ ಭಕ್ತರಿಗೆ ಶಾಂತಿ- ನೆಮ್ಮದಿ ಲಭಿಸಲಿ, ಭಕ್ತಿ ಹೆಚ್ಚಾಗಲಿ ಎನ್ನುವ ಸಂಕಲ್ಪದೊಂದಿಗೆ ವಿಶ್ವ ಹಿಂದೂ ಪರಿಷತ್ ವತಿಯಿಂದ ಉಡುಪಿಯ ಅನಂತೇಶ್ವರ ದೇವಸ್ಥಾನದಲ್ಲಿ ‘ಓಂ ನಮಃ ಶಿವಾಯ’ ಶಿವ ಪಂಚಾಕ್ಷರಿ ಮಂತ್ರ ಪಠಣ ನಡೆಯಿತು. ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ನೆರವೇರಿಸಿದ ಬಳಿಕ ಶಿವ ಪಂಚಾಕ್ಷರಿ ಪಠಣ ಮಾಡಲಾಯಿತು.ಈ ಸಂದರ್ಭಮಾತನಾಡಿದ ವಿಶ್ವ ಹಿಂದೂ ಪರಿಷತ್ ಮುಖಂಡ ಸುನಿಲ್ ಕೆ.ಆರ್, ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ವ್ಯವಸ್ಥಿತ […]

ಉಡುಪಿಯ ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (PIM) ನಲ್ಲಿ MCA ಕೋರ್ಸ್ಗಳ ಪ್ರವೇಶಾತಿ ಆರಂಭ

ಉಡುಪಿ: ನಿರ್ವಹಣೆ ಮತ್ತು ತಂತ್ರಜ್ಞಾನ ಶಿಕ್ಷಣದಲ್ಲಿ ಶ್ರೇಷ್ಠತೆಗೆ ಹೆಸರುವಾಸಿಯಾದ ಉಡುಪಿಯ ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (PIM), ತನ್ನ ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್ (MCA) ಕಾರ್ಯಕ್ರಮಕ್ಕೆ ಪ್ರವೇಶವನ್ನು ಹೆಮ್ಮೆಯಿಂದ ಘೋಷಿಸುತ್ತದೆ. ಸುಧಾರಿತ ತಾಂತ್ರಿಕ ಕೌಶಲ್ಯಗಳು ಮತ್ತು ಸ್ಪರ್ಧಾತ್ಮಕ ವ್ಯವಹಾರ ಮನಸ್ಥಿತಿಯೊಂದಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ವಿನ್ಯಾಸಗೊಳಿಸಲಾದ PIM ನಲ್ಲಿನ MCA ಕಾರ್ಯಕ್ರಮವು ಸಾಂಪ್ರದಾಯಿಕ ಪದವಿಯನ್ನು ಮೀರಿದೆ – ಇದು ಶೈಕ್ಷಣಿಕ ಆಳ, ಉದ್ಯಮ ಸಿದ್ಧತೆ ಮತ್ತು ಆಜೀವ ವೃತ್ತಿಪರ ಬೆಂಬಲದ ಸಂಪೂರ್ಣ ಪ್ಯಾಕೇಜ್ ಆಗಿದೆ. ಇಂದಿನ ವೇಗವಾಗಿ […]

ಅನಾಥ ಮಕ್ಕಳಿಗೆ ವಿಶೇಷ ರಿಯಾಯಿತಿ ನೀಡಲು ಚಿಂತನೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಿಧಾನಸೌಧ (ವಿಧಾನಸಭೆ): ಅನಾಥಾಶ್ರಮಗಳಲ್ಲಿ ಇರುವ ಮಕ್ಕಳಿಗೆ ಪದವಿ ಪೂರ್ವ ಶಿಕ್ಷಣದವರೆಗೂ ದಾಖಲಾತಿ ಬಗ್ಗೆ ಯಾವುದೇ ಸಮಸ್ಯೆ ಇರುವುದಿಲ್ಲ. ಉನ್ನತ ಶಿಕ್ಷಣಕ್ಕೆ ದಾಖಲಾಗುವ ಸಂದರ್ಭದಲ್ಲಿ ಸಾಮಾನ್ಯವರ್ಗದ ಇತರ ಮಕ್ಕಳಂತೆ ಈ ಮಕ್ಕಳನ್ನು ದಾಖಲಾತಿ ಮಾಡಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಇಂಥ ಮಕ್ಕಳಿಗೆ ವಿಶೇಷ ರಿಯಾಯಿತಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದಲ್ಲಿ 108 ಸರ್ಕಾರಿ, 54 ಅನುದಾನಿತ ಮತ್ತು […]

ಕಾರ್ಕಳ : ಮಳೆಯಿಂದ ಹಲವೆಡೆ ಹಾನಿ; ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಶಾಸಕ ವಿ.ಸುನಿಲ್‌ ಕುಮಾರ್ ಮನವಿ

ಕಾರ್ಕಳ: ಸುಂಟರಗಾಳಿ ಮತ್ತು ಅತಿಯಾದ ಮಳೆಯಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ವಿ ಸುನಿಲ್ ಕುಮಾರ್ ಮನವಿ ಮಾಡಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಆಗಸ್ಟ್ 18ರಂದು ಅತಿಯಾದ ಮಳೆ ಹಾಗೂ ಸುಂಟರ ಗಾಳಿಯಿಂದಾಗಿ ಸುಮಾರು ನೂರಕ್ಕೂ ಹೆಚ್ಚಿನ ವಾಸದ ಮನೆಗಳಿಗೆ ಹಾನಿಯಾಗಿದೆ. ಕಾರ್ಕಳ ತಾಲೂಕಿನ ಬೆಳ್ಮಣ್, ಸೂಡ, ನಂದಳಿಕೆ, ರೆಂಜಾಳ, ಬೈಲೂರು, ಕಡ್ತಲ ಹಾಗೂ ಯರ್ಲಪಾಡಿ ಗ್ರಾಮಗಳ ಪರಿಸರದಲ್ಲಿ ಮತ್ತು ಹೆಬ್ರಿ ತಾಲೂಕಿನ […]

ಆ.24ರಂದು “ಸಿಂಗಾರ ಸಿರಿ” ಮದುಮಗಳ ಶೃಂಗಾರದಲ್ಲಿ ಸೌಂದರ್ಯ ತಜ್ಞೆಯರ ಕೌಶಲಗಳ ಅನಾವರಣ ಕಾರ್ಯಕ್ರಮ

ಉಡುಪಿ: ಅಖಿಲ ಕರ್ನಾಟಕ ಮಹಿಳಾ ಸೌಂದರ್ಯ ತಜ್ಞೆಯರ ಸಂಘ ಉಡುಪಿ ಇದರ ಆಶ್ರಯದಲ್ಲಿ ವಿಶ್ವ ಗೀತಾ ಪರ್ಯಾಯದ ಪ್ರಯುಕ್ತ “ಸಿಂಗಾರ ಸಿರಿ” ಮದುಮಗಳ ಶೃಂಗಾರದಲ್ಲಿ ಸೌಂದರ್ಯ ತಜ್ಞೆಯರ ಕೌಶಲಗಳ ಅನಾವರಣ ಕಾರ್ಯಕ್ರಮವನ್ನು ಇದೇ ಆ.24ರಂದು ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಅಖಿಲ ಕರ್ನಾಟಕ ಮಹಿಳಾ ಸೌಂದರ್ಯ ತಜ್ಞೆಯರ ಸಂಘದ ಉಡುಪಿ ಜಿಲ್ಲಾಧ್ಯಕ್ಷೆ ನಂದಾ ಶೆಟ್ಟಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಇದು ಕರಾವಳಿ ಕರ್ನಾಟಕದಲ್ಲಿಯೇ ಪ್ರಪ್ರಥಮ ಪ್ರದರ್ಶನವಾಗಿದ್ದು, ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ […]