ಎಂ.ಸಿ.ಸಿ. ಬ್ಯಾಂಕಿನಲ್ಲಿ ಎನ್ ಆರ್ ಐ ಸಮಾವೇಶ -2025

ಮಂಗಳೂರು: 113 ವರ್ಷಗಳ ಸಮರ್ಪಿತ ಸೇವೆಯ ಪರಂಪರೆಯನ್ನು ಹೊಂದಿರುವ ಪ್ರತಿಷ್ಠಿತ ಬ್ಯಾಂಕ್ ಎಂಸಿಸಿ ಬ್ಯಾಂಕ್, ಆಗಸ್ಟ್ 17ರಂದು ಮಂಗಳೂರಿನ ಅತ್ತಾವರದಲ್ಲಿರುವ ದಿ ಅವತಾರ್ ಹೋಟೆಲ್‍ನಲ್ಲಿ ತನ್ನ ಎನ್ ಆರ್ ಐ ಸಮಾವೇಶ 2025 ಅನ್ನು ಆಯೋಜಿಸಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೊ ವಹಿಸಿದ್ದರು. ಕಾರ್ಯಕ್ರಮವನ್ನು ಕಂಕನಾಡಿಯ ಎಫ್‍ಎಂಸಿಐ ನಿರ್ದೇಶಕ ವಂದನೀಯ ಫೌಸ್ಟಿನ್ ಲೋಬೊ ಉದ್ಘಾಟಿಸಿದರು. ರಿಲಯೆಬಲ್ ಫೆಬ್ರಿಕೇಟರ್ಸ್ ಎಲ್‍ಎಲ್‍ಸಿ, ದುಬಾಯಿ ಇದರ ಪ್ರೊಪ್ರೈಟರ್ ಜೇಮ್ಸ್ ಮೆಂಡೋನ್ಸಾ, ಅಮಿಗೋ ಆಟೋಮೊಬೈಲ್ ಸರ್ವೀಸಸ್ ಎಸ್‍ಪಿ […]
ಉಡುಪಿ: ಮೂರನೇ ದಿನಕ್ಕೆ ಕಾಲಿಟ್ಟ ಕಟ್ಟಡ ನಿರ್ಮಾಣ ಕಾರ್ಮಿಕರ ಧರಣಿ

ಉಡುಪಿ: ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಕಟ್ಟಡ ನಿರ್ಮಾಣ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವು ಮೂರನೇ ದಿನಕ್ಕೆ ಕಾಲಿಟ್ಟಿದೆ. ಕೆಲಸ ಇಲ್ಲದೆ ಕಾರ್ಮಿಕರು ಧರಣಿ ನಡೆಸುತ್ತಿದ್ದರೂ ಜಿಲ್ಲಾಡಳಿತ ಮಾತ್ರ ಸ್ಪಂದಿಸುತ್ತಿಲ್ಲ. ಕೆಂಪು ಕಲ್ಲು ಕೊರತೆ ಇಲ್ಲ ಎಂದು ಜಿಲ್ಲಾಡಳಿತ ಹೇಳುತ್ತಿದೆ. ಹಾಗಾದರೆ ಕೆಂಪು ಕಲ್ಲು ಬೆಲೆ ದುಬಾರಿ ಆಗಿರುವುದು ಯಾಕೆಂದು ಉತ್ತರಿಸಬೇಕು ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು. ಕಾನೂನು ಬದ್ಧ ಪರವಾನಿಗೆ ನೀಡಿದ […]
ಅಗಲಿದ ಹಿರಿಯ ಪತ್ರಕರ್ತರ ಮಂಜುನಾಥ್ ಭಟ್‌ಗೆ ಶ್ರದ್ಧಾಂಜಲಿ ಸಭೆ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತರ ಮಂಜುನಾಥ್ ಭಟ್ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು. ಹಿರಿಯ ಪತ್ರಕರ್ತರಾದ ಕುಮಾರಸ್ವಾಮಿ ನುಡಿನಮನ ಸಲ್ಲಿಸಿ, ಮಂಜುನಾಥ್ ಭಟ್ ಕಷ್ಟದಿಂದ ಬೆಳೆದು ಬಂದವರು. ವಿದ್ಯಾರ್ಥಿ ಜೀವನದಲ್ಲಿ ಹಿರಿಯ ಸಾಹಿತಿಗಳ ಚರ್ಚಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತ ಅವರು ಸಾಹಿತ್ಯದತ್ತ ಒಲವು ಬೆಳೆಸಿಕೊಂಡರು. ಉಪ ಸಂಪಾದಕರಾಗಿ ಡೆಸ್ಕ್‌ನಲ್ಲಿಯೇ ಕುಳಿತು ಸ್ಥಳದಲ್ಲಿ ಸುದ್ದಿ ಮಾಡುವ […]
ಮೈ ಮನಸ್ಸಿನ ನೆಮ್ಮದಿಗೆ ಎನರ್ಜಿ ಕೊಡುತ್ತೆ ಮನೆಯ ಒಳಾಂಗಣ ವಿನ್ಯಾಸ: ಇಂಟೀರಿಯರ್ ವಿನ್ಯಾಸದಲ್ಲಿದೆ ಆರೋಗ್ಯದ ಗುಟ್ಟು!

ಲೇಖನ : ಹೇಮಾ ನಿರಂಜನ್ ವೇಗವಾಗಿ ಬದಲಾಗುತ್ತಿರುವ ಈಗಿನ ಜಗತ್ತಿನಲ್ಲಿ ಮನೆಗಳು ಆರೋಗ್ಯ ಮತ್ತು ಶಾಂತಿ ಉತ್ತೇಜಿಸುವ ಸುರಕ್ಷಿತ ಸ್ಥಳಗಳಾಗಿರಬೇಕು. ಇದಕ್ಕೆ ಒಳಾಂಗಣ ವಿನ್ಯಾಸವು ಪೂರಕವಾಗಿರಬೇಕು. ಇಂಥ ಆರೋಗ್ಯದಾಯಕ ವಾತಾವರಣ ನಿರ್ಮಿಸಲು ಅಗತ್ಯವಿರುವ ಅಂಶಗಳು ಹೀಗಿವೆ. ಸ್ಮಾರ್ಟ್ ಸಂಗ್ರಹಣೆಮನೆ ಸ್ವಚ್ಛವಾಗಿದ್ದರೆ ಮನಸ್ಸು ಪ್ರಶಾಂತವಾಗಿರುತ್ತದೆ. ಯೂನಿವರ್ಸಿಟಿ ಆಫ್ ಕ್ಯಾಲಿ ಫೋರ್ನಿಯಾ ಸಂಶೋಧನೆಯ ಪ್ರಕಾರ, ಇದರಿಂದ ಕಾರ್ಟಿಸಾಲ್ ಹಾರ್ಮೋನ್‌ನ ಉತ್ಪಾದನೆ ಶೇ. 27ರಷ್ಟು ಹೆಚ್ಚುತ್ತದೆ. ಇದಕ್ಕಾಗಿ ಮನೆಯಲ್ಲಿ ಸ್ಮಾರ್ಟ್ ಸ್ಟೋರೇಜ್ ಪರಿಹಾರಗಳನ್ನು ಕಂಡುಕೊಳ್ಳಬೇಕು. ಅಂದರೆ ಫುಶ್ ಟು ಓಪನ್ ಕ್ಯಾಬಿನೆಟ್, […]
ಉಡುಪಿ:ಬಾಲ್ಯವಿವಾಹ ಪದ್ಧತಿ ನಿಷೇಧ ಕಾಯ್ದೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ : ಪೊಲೀಸ್ ಅಧೀಕ್ಷಕ ಡಿ.ಟಿ ಪ್ರಭು ಸೂಚನೆ

ಉಡುಪಿ: ಸಾಮಾಜಿಕ ಪಿಡುಗಾಗಿರುವ ಬಾಲ್ಯವಿವಾಹ ಪದ್ಧತಿಯನ್ನು ನಿರ್ಮೂಲನೆ ಮಾಡಲು ಜಾರಿಗೊಳಿಸಲಾದಕಾಯಿದೆ ಹಾಗೂ ಕಾನೂನುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದು ಪ್ರತಿಯೊಬ್ಬ ಅಧಿಕಾರಿಯ ಆದ್ಯ ಕರ್ತವ್ಯವಾಗಿದ್ದು, ಇದಕ್ಕೆ ಒತ್ತು ನೀಡಬೇಕು ಎಂದು ಉಪ ಪೊಲೀಸ್ ಅಧೀಕ್ಷಕ ಪ್ರಭು ಡಿ.ಟಿ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ […]