ಜಾಮೀನು ಅರ್ಜಿ ತಿರಸ್ಕೃತ: ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನ ನ್ಯಾಯಾಂಗ ಬಂಧನ

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು ಸಂಜೆ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಹ್ಮಾವರ ತಾಲೂಕು ಸಂಚಾರಿ ಪೀಠವು ಮಹೇಶ್ ತಿಮರೋಡಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಕುರಿತು ಬಿಜೆಪಿ ಮುಖಂಡರು ಬ್ರಹ್ಮಾವರ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಎರಡು […]
ಸಿಎ ಫೌಂಡೇಶನ್ ಹಾಗೂ ಸಿಎಸ್ ಇಇಟಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ.

ಕಟಪಾಡಿ: ತ್ರಿಶಾ ವಿದ್ಯಾ ಪಿ ಯು ಸಿ ವಿದ್ಯಾರ್ಥಿಗಳಿಗೆ ಆಗಸ್ಟ್ 18 ರಂದು ಸಿಎ ಹಾಗು ಸಿಎಸ್ ಮಾಹಿತಿ ಕಾರ್ಯಗಾರವು ತ್ರಿಶಾ ವಿದ್ಯಾ ಪಿಯು ಕಾಲೇಜಿನ ಕವಿರತ್ನ ಕಾಳಿದಾಸ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ ತ್ರಿಶಾ ಸಂಸ್ಥೆಯ ಅಧ್ಯಕ್ಷ ಸಿ ಎ ಗೋಪಾಲಕೃಷ್ಣ ಭಟ್ ಅವರು ಕಾರ್ಯಕ್ರಮ ಉದ್ಘಾಟಿಸಿ ಸತತ ಪರಿಶ್ರಮ ಮಾತ್ರ ನಮ್ಮನ್ನುಗುರಿಯ ಕಡೆಗೆ ಕೊಂಡುಯ್ಯುತ್ತವೆ ಸಿಎ ಹಾಗು ಸಿಎಸ್ ಎನ್ನುವ ಪದವಿ ಪಡೆಯುವುದಕ್ಕೆ ಛಲ ಮತ್ತು ನಂಬಿಕೆ ಇದ್ದಾಗ ಖಂಡಿತವಾಗಿಯೂ ನಾವು ನಮ್ಮ ಗುರಿಯನ್ನು […]
ರೈಲ್ವೆ ನೇಮಕಾತಿ: ಕನ್ನಡದಲ್ಲಿ ಪರೀಕ್ಷೆ ಬರೆಯಬಹುದು; ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ನವದೆಹಲಿ: ರೈಲ್ವೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ 15 ಭಾಷೆಗಳಲ್ಲಿ ನಡೆಸಲಾಗುತ್ತದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು. ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಪ್ರಶ್ನೆಗೆ ಉತ್ತರಿಸಿದ ಅವರು, ‘ಅರ್ಜಿ ಸಲ್ಲಿಸುವ ಎಲ್ಲರನ್ನೂ ಸಮಾನವಾಗಿ ಪರಿಗಣಿಸಲಾಗುತ್ತದೆ. ಯಾವುದೇ ರಾಜ್ಯ ಅಥವಾ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು. ‘ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಹದಿನೈದು ಭಾಷೆಗಳ ಪೈಕಿ ಯಾವುದಾದರೂ ಒಂದು ಪರೀಕ್ಷಾ ಮಾಧ್ಯಮ ಆಯ್ಕೆ […]
ಎಂಐಟಿ ಕುಂದಾಪುರ ಮತ್ತು ಎಂಎಸ್‌ಡಿಸಿ ಮಣಿಪಾಲ ಶೈಕ್ಷಣಿಕ ಒಡಂಬಡಿಕೆ.

ಕುಂದಾಪುರ: ಎಂಐಟಿ ಕುಂದಾಪುರ ಮತ್ತು ಎಂಎಸ್‌ಡಿಸಿ ಮಣಿಪಾಲ ಸಂಸ್ಥೆಗಳು ಪ್ರಸ್ತುತ ಉದ್ಯಮದ ಅವಶ್ಯಕತೆಗಳಿಗೆ ಅನುಗುಣವಾಗಿ ವಿವಿಧ ಅತ್ಯಾಧುನಿಕ ತಂತ್ರಜ್ಞಾನಗಳಲ್ಲಿ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗಾಗಿ, ಉದ್ಯಮದ ಅವಶ್ಯಕತೆಗಳಿಗೆ ತಕ್ಕಂತೆ ವಿವಿಧ ಅತ್ಯಾಧುನಿಕ ತಂತ್ರಜ್ಞಾನಗಳಲ್ಲಿ ಸಹಯೋಗದೊಂದಿಗೆ ಕೆಲಸ ಮಾಡಲು ಒಪ್ಪಂದಕ್ಕೆ ಸಹಿ ಹಾಕಿದವು. ಎಂಎಸ್‌ಡಿಸಿ ಮಣಿಪಾಲ ಅಧ್ಯಕ್ಷ ಬ್ರಿಗೇಡಿಯರ್ ಡಾ. ಸುರ್ಜಿತ್ ಸಿಂಗ್ ಪಬ್ಲಾ ಮತ್ತು ಐಎಂಜೆ ವಿದ್ಯಾ ಸಂಸ್ಥೆಗಳ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ. ರಾಮಕೃಷ್ಣ ಹೆಗ್ಡೆ, ಡಾ. ಇಂದ್ರವಿಜಯ ಸಿಂಗ್ ಡೀನ್ ಮತ್ತು ವಿಭಾಗ ಮುಖ್ಯಸ್ಥರು ಎಐಎಂಎಲ್ […]
ಕರಾಟೆ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ವಿದ್ಯಾರ್ಥಿನಿ ಸುದೀಕ್ಷಾ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ಉಪನಿರ್ದೇಶಕರ ಕಛೇರಿ ಉಡುಪಿ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಇವರ ಆಶ್ರಯದಲ್ಲಿ ಸಂತ ಫ್ರಾನ್ಸಿಸ್ ಆಂಗ್ಲಮಾಧ್ಯಮ ಶಾಲೆ ಉದ್ಯಾವರ ಇಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ 14/17 ರ ವಯೋಮಿತಿಯ ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ಕಿಂಗ್ ಆಂಗ್ಲಮಾದ್ಯಮ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಸುದೀಕ್ಷಾ ರಾಜ್ಯಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾಳೆ. ಉಡುಪಿ ಜಿಲ್ಲಾಮಟ್ಟದ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸುವುದರ ಮೂಲಕ ಸುದೀಕ್ಷಾ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ಉಳಿದಂತೆ ಏಳನೇ […]