ಮಹೇಶ್ ಶೆಟ್ಟಿ ತಿಮರೋಡಿ ವಿಚಾರಣೆ: ಬ್ರಹ್ಮಾವರ ಠಾಣೆಯ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಉಡುಪಿ: ಮಹೇಶ್ ಶೆಟ್ಟಿ ತಿಮರೋಡಿಯ ಅವರನ್ನು ಉಡುಪಿಯ ಬ್ರಹ್ಮಾವರ ಠಾಣೆಯ ಪೊಲೀಸರು ವಿಚಾರಣೆಗಾಗಿ ಠಾಣೆಗೆ ಹಾಜರು ಪಡಿಸಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ ಸುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಉಡುಪಿ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಲಾಗಿದ್ದು, ನಾಳೆ ಮಧ್ಯಾಹ್ನ 1.00 ಗಂಟೆಯ ವರೆಗೆ ನಿಷೇಧಾಜ್ಞೆ ಮುಂದುವರಿಯಲಿದೆ […]

ಬ್ರಹ್ಮಾವರ ಠಾಣೆಗೆ ಆಗಮಿಸಿದ ತಿಮರೋಡಿ: ಪೊಲೀಸರಿಂದ ತೀವ್ರ ವಿಚಾರಣೆ

ಉಡುಪಿ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬೆಳ್ತಂಗಡಿಯ ತಿಮರೋಡಿಯಲ್ಲಿ ವಶಕ್ಕೆ ಪಡೆದು, ಬಿಗಿ ಬಂದೋಬಸ್ತ್ ನಲ್ಲಿ ಗುರುವಾರ ಮಧ್ಯಾಹ್ನ ಬ್ರಹ್ಮಾವರ ಠಾಣೆಗೆ ಕರೆತರಲಾಯಿತು. ಖಾಸಗಿ ವಾಹನದಲ್ಲಿ ಪೊಲೀಸ್ ಬಂದೋಬಸ್ತ್‌ನಲ್ಲಿ ಬ್ರಹ್ಮಾವರ ಠಾಣೆ ತಲುಪಿದ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ತಿಮ್ಮರೋಡಿ ಜತೆ ಗಿರೀಶ್ ಮಟ್ಟಣ್ಣನವರ್ ಆಗಮಿಸಿದ್ದು, ಠಾಣೆಗೆ ಆಗಮಿಸುವ ಮುನ್ನವೇ ಮಹೇಶ್ ಶೆಟ್ಟಿ […]

ಕರಾಟೆ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ರಜತ್‌ ರಾಜ್ಯಮಟ್ಟಕ್ಕೆ ಆಯ್ಕೆ.

ಕಿರಿಮಂಜೇಶ್ವರ: ಅಗಸ್ಟ್ 20ರಂದು ಶಾಲಾ ಶಿಕ್ಷಣ ಇಲಾಖೆ ಹಾಗೂ ಸೇಂಟ್ ಫ್ರಾನ್ಸಿಸ್ ಕ್ಸೆವಿಯರ್ ಇಂಗ್ಲಿಷ್ ಮೀಡಿಯಂ ಶಾಲೆ, ಉದ್ಯಾವರ ಇವರ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆ ಕಿರಿಮಂಜೇಶ್ವರದ ರಜತ್ ( 8 ನೆ ತರಗತಿ)14 ವರ್ಷದ ಒಳಗಿನ ವಯೋಮಿತಿಯ 50 ಕೆಜಿ ವಿಭಾಗದಲ್ಲಿ ವಿಜಯಶಾಲಿಯಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಹೆಮ್ಮೆಯ ವಿದ್ಯಾರ್ಥಿಯ ಅಪೂರ್ವವಾದ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇದರ ಪ್ರಾಂಶುಪಾಲರಾದ ಗಣೇಶ ಮೊಗವೀರರವರು, ಮುಖ್ಯ […]

ಧರ್ಮಸ್ಥಳ ವಿರುದ್ಧ ಷಡ್ಯಂತ್ರ; ಆಗಸ್ಟ್​ ತಿಂಗಳಾಂತ್ಯಕ್ಕೆ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ- ಕೆ. ರಘುಪತಿ ಭಟ್

ಉಡುಪಿ: ಧರ್ಮಸ್ಥಳ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ. ಹೀಗಾಗಿ ಸಾಮಾಜಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಗಸ್ಟ್​ ತಿಂಗಳಾಂತ್ಯಕ್ಕೆ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಪ್ರತಿಭಟನಾ ಸಭೆ ಆಯೋಜಿಸಲಾಗುವುದು ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್​ ತಿಳಿಸಿದರು. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್​ಐಟಿ ತನಿಖೆ ನಡೆದಿರುವುದು ಬಹಳ ಒಳ್ಳೆಯದಾಗಿದೆ. ಅನ್ವೇಷಣೆಯಿಂದ ಸಂಶಯಗಳಿಗೆ ತೆರೆಬಿದ್ದಿದೆ ಎಂದರು.ಧರ್ಮಸ್ಥಳ ಧಾರ್ಮಿಕ ಸಂಸ್ಥೆಯಾಗಿ ಆದಾಯವನ್ನು ವ್ಯವಸ್ಥಿತವಾಗಿ ವಿನಿಯೋಗಿಸುತ್ತಿದೆ. ಅನೇಕ ಧಾರ್ಮಿಕ ಕೇಂದ್ರಗಳ ಜೀಣೋರ್ದ್ಧಾರಕ್ಕೆ 1 ಲಕ್ಷದಿಂದ 1 ಕೋಟಿ ರೂ. ವರೆಗೆ ಅನುದಾನ […]

ಕಾರ್ಕಳ ಪರಶುರಾಮ ಪ್ರತಿಮೆ, ರೂ.5 ಲಕ್ಷ ಠೇವಣಿ ನೀಡಿ, ಅರ್ಜಿದಾರರಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಪ್ರತಿಮೆಯನ್ನು ಮರು ಸ್ಥಾಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ಅರ್ಜಿದಾರರಿಗೆ ರೂ.5 ಲಕ್ಷ ಠೇವಣಿ ಇರಿಸುವಂತೆ ಹೈಕೋರ್ಟ್ ಆದೇಶಿಸಿದೆ. ಉಡುಪಿ ತಾಲ್ಲೂಕಿನ ವರಂಗ ಗ್ರಾಮದ ಉದಯ ಶೆಟ್ಟಿ ಮುನಿಯಾಲು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಹಿಂದು ನಂಬಿಕೆಯ […]