ಉಡುಪಿ:ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನ : ಅರ್ಜಿ ಆಹ್ವಾನ

ಉಡುಪಿ: ಮೀನುಗಾರಿಕಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯ ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಟಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಲಾಗಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಟಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಘಟಕಗಳ ವಿವರ: ಪಚ್ಚಿಲೆ ಕೃಷಿ (ಮಸೆಲ್ಸ್, ಕಲ್ಲ, ಕ್ಲಾಮ್ಸ್, ಮುತ್ತು ಇತ್ಯಾದಿ), ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು ಹಾಗೂ ಐಸ್ ಪ್ಲಾಂಟ್ / ಕೋಲ್ಡ್ ಸ್ಟೋರೇಜ್ ಆಧುನೀಕರಣಕ್ಕೆ ಸಹಾಯಧನ ನೀಡಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 […]
ಉಡುಪಿ:ಡಿ. ದೇವರಾಜ ಅರಸು ಅವರ ಆಡಳಿತ ಸೇವೆ ದೂರದೃಷ್ಠಿಗೆ ಹಿಡಿದ ಕೈಗನ್ನಡಿ : ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ

ಉಡುಪಿ: ಸಾಮಾಜಿಕ ನ್ಯಾಯದ ಹರಿಕಾರ ದಿವಂಗತ ಡಿ. ದೇವರಾಜ ಅರಸು ರವರು ಆಡಳಿತ ಅವಧಿಯಲ್ಲಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತರ, ಬಡವರ ಹಾಗೂ ದೀನ ದಲಿತರ ಕಲ್ಯಾಣಕ್ಕಾಗಿ ಜಾರಿಗೊಳಿಸಿದ ಯೋಜನೆಗಳು ಇಂದಿಗೂ ಸಹ ಮುಂದುವರೆಯುತ್ತಿರುವುದು ಅವರ ದೂರದೃಷ್ಠಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಹೇಳಿದರು. ಅವರು ಬುಧವಾರ ನಗರದ ಮಿಷನ್ ಕಂಪೌಂಡ್‌ನ ಬಳಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ […]