ಉಡುಪಿ:ಇಂಡಿಪೆಂಡೆನ್ಸ್ ಕ್ರಿಕೆಟ್ ರೋಟರ‍್ಯಾಕ್ಟ್ ಕ್ಲಬ್: ಬ್ರಹ್ಮಾವರಕ್ಕೆ ಪ್ರಶಸ್ತಿ

ಉಡುಪಿ:ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ಉಡುಪಿ ಮತ್ತು ನೇಜಾರ್ ಲೀಜನ್, ರೋಟರ‍್ಯಾಕ್ಟ್ ಕ್ಲಬ್, ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ನೇಜಾರು ಕ್ರೀಡಾಂಗಣದಲ್ಲಿ ಜರುಗಿದ ಇಂಡಿಪೆಂಡೆನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾಟವನ್ನು ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್‌ನ ನಿಕಟಪೂರ್ವ ರಾಷ್ಟ್ರೀಯ ಅಧ್ಯಕ್ಷ ಚಿತ್ರಕುಮಾರ್ ಉದ್ಘಾಟಿಸಿ ಶುಭ ಹಾರೈಸಿದರು. ಸೀನಿಯರ್ ಛೇಂಬರ್ ಉಡುಪಿ ಲೀಜನ್ ಅಧ್ಯಕ್ಷ ಶಿವಾನಂದ ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಮುಖ್ಯ ಅತಿಥಿಯಾಗಿ ಸೀನಿಯರ್ ಛೇಂಬರ್ ರಾಷ್ಟ್ರೀಯ ಅಧಿಕಾರಿ ಜಗದೀಶ್ ಕೆಮ್ಮಣ್ಣು, ರೋರ‍್ಯಾಕ್ಟ್ ಸಭಾಪತಿ ಸುಂದರ್‌ರಾಮ್ ಶೆಟ್ಟಿ ಉಪಸ್ಥಿತರಿದ್ದರು. ಜಂಟಿ ಆತಿಥ್ಯ […]
ಸಹಕಾರಿ ಕಾಯ್ದೆಗಳಲ್ಲಿ ಆಗುವ ತಿದ್ದುಪಡಿಗಳ ಬಗ್ಗೆ ಹೆಚ್ಚು ಗಮನಹರಿಸಿ- ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ರಾಜ್ಯಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಕಡಿಯಾಳಿಯ ದಿ ಓಷ್ಯನ್ ಪರ್ಲ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅವರು, ಪ್ರಸಕ್ತ ವರ್ಷದಲ್ಲಿ ಕರ್ನಾಟಕ […]
ಕರಾವಳಿ ಜಿಲ್ಲೆ ಧಾರ್ಮಿಕ ಆಚರಣೆಗೆ ಹಿಂದಿನಂತೆ ಅವಕಾಶ ನೀಡುವಂತೆ ಗೃಹ ಸಚಿವರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮನವಿ

ಉಡುಪಿ: ಕರಾವಳಿಯ ಜಿಲ್ಲೆಯ ಧಾರ್ಮಿಕ ಆಚರಣೆಗಳನ್ನು ಈ ಹಿಂದಿನಂತೆಯೇ ನಡೆಸಲು ಕಾನೂನು ನಿಯಮಗಳನ್ನು ಸರಳೀಕರಣಗೊಳಿಸಿ ಅವಕಾಶ ನೀಡುವಂತೆ ಗೃಹ ಸಚಿವ ಪರಮೇಶ್ವರ್ ರವರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮನವಿ ಮಾಡಿದ್ದಾರೆ. ಕರಾವಳಿ ಭಾಗಗಳಲ್ಲಿ ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಾದ ಕೋಲ, ನೇಮೋತ್ಸವ, ಜಾತ್ರಾ ಮಹೋತ್ಸವ, ನಾಗಮಂಡಲ, ಯಕ್ಷಗಾನ ಮೊದಲಾದವುಗಳನ್ನು ಅನಾದಿ ಕಾಲದಿಂದ ಶ್ರದ್ಧಾ ಭಕ್ತಿಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿ ವರ್ಷ ಸಾರ್ವಜನಿಕ ಶ್ರೀ ಗಣೇಶ ಚತುರ್ಥಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ನವರಾತ್ರಿ ಉತ್ಸವಗಳನ್ನು ಧಾರ್ಮಿಕತೆ ಮತ್ತು […]
ಉಡುಪಿ:ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಕರಾವಳಿ ಆಟೋಮೊಬೈಲ್ಸ್ ನಲ್ಲಿ ವಿಶೇಷ ಕೊಡುಗೆಗಳು

ಉಡುಪಿ:ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಕರಾವಳಿ ಆಟೋಮೊಬೈಲ್ಸ್ ನಲ್ಲಿ ವಿಶೇಷ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಸಮೃದ್ಧಿಗೆ ಕಾರಣವಾಗುವ ಮಾರ್ಗಗಳನ್ನು ಆರಿಸಿಈ ಗಣೇಶ ಚತುರ್ಥಿಗೆ, ಕರಾವಳಿ ಆಟೋಮೊಬೈಲ್ಸ್‌ನಲ್ಲಿ ವ್ಯಾಪಕ ಶ್ರೇಣಿಯ ಗುಣಮಟ್ಟದ ಬಳಸಿದ ಕಾರುಗಳು ನಿಮಗಾಗಿ ಕಾಯುತ್ತಿವೆ. ಪ್ರಯೋಜನಗಳು: 🔹1 ವರ್ಷದವರೆಗೆ ಖಾತರಿ🔹100% ವರೆಗೆ ಹಣಕಾಸು🔹ಉಚಿತ RTO ಡಾಕ್ಯುಮೆಂಟೇಶನ್🔹3 ಉಚಿತ ಸೇವೆ🔹ಉಚಿತ ಮೊದಲ ತಿಂಗಳ EMI 27 ನೇ ತಾರೀಖಿನ ಮೊದಲು ಮಾಡಿದ ಬುಕಿಂಗ್‌ಗಳಿಗೆ ಮಾತ್ರ ಕೊಡುಗೆಗಳು ಅನ್ವಯವಾಗುತ್ತವೆ. 📍ವಿಶಾಲ್ ಮಾರ್ಟ್ ಗುಂಡಿಬೈಲ್ ಎದುರುಕಲ್ಸಂಕ ರಸ್ತೆ, ಉಡುಪಿ📞 +91 8050092644/46 […]
ಮಂಗಳೂರು: ಎಎಸ್ಐ ನೇಣು ಬಿಗಿದು ಆತ್ಮಹತ್ಯೆ.

ಮಂಜೇಶ್ವರ: ಮಂಜೇಶ್ವರ ಪೊಲೀಸ್ ಠಾಣೆಯ ಎಎಸ್‌ಐ ಓರ್ವರು ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕುತ್ತಿಕೋಲ್ ನಿವಾಸಿ ಮಧು (50) ಮೃತಪಟ್ಟವರು. ಪೊಲೀಸ್ ಕ್ವಾಟರ್ಸ್ ನಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಇಂದು ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪೊಲೀಸ್ ಕ್ವಾಟರ್ಸ್ ನಲ್ಲಿ ಇವರ ಡೆತ್ ನೋಟ್ ಲಭಿಸಿದೆ ಎಂದು ತಿಳಿದು ಬಂದಿದೆ. ನಿಷ್ಠಾವಂತ ಅಧಿಕಾರಿಯಾಗಿದ್ದ ಇವರು ಬದಿಯಡ್ಕ ಆದೂರು, ಕಾಸರಗೋಡು ನಗರ ಪೊಲೀಸ್ ಠಾಣೆ ಗಳಲ್ಲಿ […]