ಹಿರಿಯಡ್ಕ: ಶರಣ್ ಪಂಪ್ ವೆಲ್’ಗೆ ಕಾರ್ಯಕ್ರಮಕ್ಕೆ ಆಹ್ವಾನ; ಬಜರಂಗದಳದ ಇಬ್ಬರು ಮುಖಂಡರ ವಿರುದ್ಧ ಪ್ರಕರಣ ದಾಖಲು.

ಉಡುಪಿ: ಪೊಲೀಸರಿಗೆ ಮಾಹಿತಿ ನೀಡದೆ ಶರಣ್ ಪಂಪ್‌ವೆಲ್‌ನನ್ನು ಕಾರ್ಯಕ್ರಮಕ್ಕೆ ಕರೆಸಿರುವ ಸಂಬಂಧ ಬಜರಂಗದಳದ ಮುಖಂಡರ ವಿರುದ್ಧ ದಿನೇಶ್ ಮೆಂಡನ್ ಹಾಗೂ ಸುಬ್ರಹ್ಮಣ್ಯ ಭಟ್ ವಿರುದ್ಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಜರಂಗ ದಳ ಹಿರಿಯಡ್ಕ ಘಟಕದ ಪ್ರಮುಖರು ಆ.20ರಂದು ಸಂಜೆ 6 ಗಂಟೆಯಿಂದ ಹಿರಿಯಡ್ಕ ಕೋಟ್ನಕಟ್ಟೆಯಿಂದ ದೇವಾಡಿಗ ಸಭಾಭವನದ ವರೆಗೆ ಪಂಜಿನ ಮೆರವಣಿಗೆ ಮಾಡಿ, ದೇವಾಡಿಗರ ಸಭಾಭವನದಲ್ಲಿ ಸಭಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಕಾರ್ಯಕ್ರಮವನ್ನು ಅಯೋಜಕರು ನಿಗಧಿಪಡಿಸಿದ ಸ್ಥಳದಿಂದ 6ಗಂಟೆಗೆ ಪಂಜಿನ ಮೆರವಣಿಗೆ ಪ್ರಾರಂಭಿಸದೆ ವಿಳಂಬವಾಗಿ 7:30ಕ್ಕೆ […]
ಟ್ರಾಫಿಕ್ ನಿಯಮ ಉಲ್ಲಂಘನೆ: ದಂಡಕ್ಕೆ ಶೇ.50ರಷ್ಟು ರಿಯಾಯತಿ!

ಬೆಂಗಳೂರು: ರಾಜ್ಯ ಸರ್ಕಾರ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಮತ್ತೊಮ್ಮೆ ಟ್ರಾಫಿಕ್ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಷ್ಟು ರಿಯಾಯಿತಿ ಘೋಷಿಸಿ ಆದೇಶಿಸಿದೆ. ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಮ್ಮೆ ರಿಯಾಯಿತಿ ಘೋಷಣೆ ಮಾಡಿದ್ದು, ಆಗಸ್ಟ್ 23 ರಿಂದ ಸೆಪ್ಟೆಂಬರ್ 9ರವರೆಗೆ ದಂಡದ ಅರ್ಧದಷ್ಟು ಹಣ ಪಾವತಿಸಲು ವಾಹನ ಸವಾರರಿಗೆ ಅವಕಾಶ ಕಲ್ಪಿಸಲಾಗಿದೆ. ಈ […]
ಸೃಜನಾತ್ಮಕ ಬರವಣಿಗೆಯಿಂದ ಮಾಧ್ಯಮ ಕ್ಷೇತ್ರದಲ್ಲಿ ಉದ್ಯೋಗವಕಾಶ: ಹೆಬ್ರಿ ಉದಯ ಕುಮಾರ್ ಶೆಟ್ಟಿ

ಶಂಕರನಾರಾಯಣ: ಪತ್ರಿಕೆಗಳನ್ನು ಓದುವ ಅಭ್ಯಾಸವನ್ನು ಬೆಳೆಸಿಕೊಂಡಾಗ ಬರವಣಿಗೆಯ ಗುಣಮಟ್ಟವನ್ನು ಹೆಚ್ಚಿಸುತ್ತದೆ.ಆಧುನಿಕ ಮಾಧ್ಯಮ ಪ್ರಪಂಚ ವಿಶಾಲ ವ್ಯಾಪ್ತಿ ಹೊಂದಿದ್ದು.ಸೃಜನಾತ್ಮಕ ಬರವಣಿಗೆಯಿಂದ ಮಾಧ್ಯಮ ಕ್ಷೇತ್ರದಲ್ಲಿ ಉತ್ತಮ ಉದ್ಯೋಗ ಅವಕಾಶಗಳಿವೆ ಎಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಉಪಾಧ್ಯಕ್ಷ ಪತ್ರಕರ್ತ ಹೆಬ್ರಿ ಉದಯ್ ಕುಮಾರ್ ಶೆಟ್ಟಿ ಹೇಳಿದರು. ಅವರು ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತ್ತಕೋತ್ತರ ಅಧ್ಯಯನ ಕೇಂದ್ರದಲ್ಲಿ ನೆರಳು ಚಾರಿಟೇಬಲ್ ಟ್ರಸ್ಟ್ ಅರಸಮ್ಮಕಾನು -ಶೇಡಿಮನೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರೇರಣಾ ಸರಣಿ ತರಬೇತಿ […]
ಉಡುಪಿ: ಪತ್ರಕರ್ತ ಆಸ್ಟ್ರೋ ಮೋಹನ್ ರವರಿಗೆ ಕಸಾಪ ಗೌರವ

ಉಡುಪಿ: ಅಮೆರಿಕದ ಇಮೇಜ್ ಕಾಲಿಂಗ್ ಸೊಸೈಟಿ ಇಂಟರ್ನ್ಯಾಷನಲ್ ಇದರ ವತಿಯಿಂದ ಗೌರವ ಫೆಲೋಶಿಪ್ ಪ್ರಶಸ್ತಿಗೆ ಪಾತ್ರರಾದ ಹಿರಿಯ ಛಾಯಾಚಿತ್ರ ಪತ್ರಕರ್ತ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಮಾಧ್ಯಮ ಪ್ರತಿನಿಧಿ ಆಸ್ಟ್ರೋ ಮೋಹನ್ ಅವರನ್ನು ಕಸಾಪ ಉಡುಪಿ ತಾಲೂಕು ಘಟಕದ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. ಪೂರ್ಣಪ್ರಜ್ಞ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಪ್ರೊ. ಸದಾಶಿವ ರಾವ್ ಸನ್ಮಾನ ನೆರೆವೇರಿಸಿ ಮಾತನಾಡಿ ಆಸ್ಟ್ರೋ ಮೋಹನ್ ರವರು ಕಳೆದ ಹಲವಾರು ವರ್ಷಗಳಿಂದ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಯನ್ನು […]
2ನೇ ಅಂತರಾಷ್ಟ್ರೀಯ ಆರಿ ಕಾರ್ಮಿಕರ ಸಮ್ಮೇಳನ – ವಿಶ್ವ ದಾಖಲೆಯನ್ನು ನಿರ್ಮಿಸಿದ ಉಡುಪಿಯ ಸಿದ್ಧಿ ಸಿವಿಂಗ್ ಸ್ಕೂಲ್ ನ ವಿದ್ಯಾರ್ಥಿಗಳು

ಉಡುಪಿ:ದಿನಾಂಕ 10.8.2025 ರಂದು ಬೆಂಗಳೂರಿನಲ್ಲಿ ನಡೆದ ಎರಡನೇ ಅಂತರಾಷ್ಟ್ರೀಯ ಆರಿ ಕಾರ್ಮಿಕರ ಸಮ್ಮೇಳನ –2025 ದಲ್ಲಿ ಸಿದ್ಧಿ ಸ್ಕೂಲ್ ನ 24 ವಿದ್ಯಾರ್ಥಿಗಳು ಭಾಗವಹಿಸಿನೊಬೆಲ್ ವಿಶ್ವ ದಾಖಲೆಗಳು ಮತ್ತು ಆಸ್ಕರ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿ ಪ್ರಮಾಣ ಪತ್ರ ಮತ್ತು ಪದಕಗಳನ್ನು ಪಡೆದುಕೊಂಡಿರುತ್ತಾರೆ. ಅದರೊಂದಿಗೆ ಭಾರತೀಯ ಆರಿ ಕಾರ್ಮಿಕರ ಫೆಡರೇಶನ್ ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿರುತ್ತಾರೆ. ವಿಶ್ವ ದಾಖಲೆಯ ಶೀರ್ಷಿಕೆ 1 ಗಂಟೆ 30 ನಿಮಿಷಗಳ ಒಳಗೆ ಮಹಿಳೆಯರ ಸ್ವಾತಂತ್ರ್ಯದ ವಿಷಯದ ಅಡಿಯಲ್ಲಿ […]