ಉಡುಪಿ ಜಿಲ್ಲೆಯ ಕ್ರೀಡಾ ಸೌಲಭ್ಯಗಳ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ ದೊರಕಿಸಿಕೊಡಲು ಪ್ರಯತ್ನ- ಡಾ. ಜಿ. ಪರಮೇಶ್ವರ್

ಉಡುಪಿ: ಉಡುಪಿ ಜಿಲ್ಲೆಯ ಕ್ರೀಡಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಈ ಹಿಂದೆ ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಘೋಷಿಸಿರುವ 3 ಕೋಟಿ ರೂ. ಅನುದಾನವನ್ನು ದೊರಕಿಸಿಕೊಡಲು ಪ್ರಯತ್ನಿಸುತ್ತೇನೆ. ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಇನ್ನಷ್ಟು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಆಗಬೇಕಿದೆ. ಉತ್ತಮ ಸೌಲಭ್ಯಗಳು ಸಿಕ್ಕಿದರೆ ಇನ್ನಷ್ಟು ಚಾಂಪಿಯನ್ ಶಿಫ್ ಗಳು ಈ ಊರಿಗೆ ಬರುವಂತಾಗುತ್ತದೆ. ಈ ಕ್ರೀಡಾಂಗಣಕ್ಕೂ ಅಂದಾಜು 30 ಲಕ್ಷ ರೂ. ನೀಡುವಂತೆ ಕೋರಿದ್ದೇನೆ. ಸಿಎಂ ಅನುದಾನ ನೀಡುವ ಭರವಸೆ ಇದೆ ಎಂದು ಗೃಹ ಸಚಿವ ಡಾ. ಜಿ. […]

ಮಣಿಪಾಲ ಮಾಹೆಗೆ ಕರ್ನಾಟಕ ರಾಜ್ಯ ಗೃಹ ಸಚಿವ ಪರಮೇಶ್ವರ್ ಭೇಟಿ

ಮಣಿಪಾಲ: ಅಂತರಾಷ್ಟ್ರೀಯ ಶೈಕ್ಷಣಿಕ ವ್ಯವಸ್ಥೆಯಲ್ಲಿ ಮಹತ್ವದ ಸ್ಥಾನ ಪಡೆದಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ಗೆ ಶನಿವಾರ ಕರ್ನಾಟಕ ರಾಜ್ಯ ಗೃಹ ಸಚಿವ ಡಾಜಿ ಪರಮೇಶ್ವರ್ ಅವರು ಭೇಟಿ ನೀಡಿದರು. ಮಣಿಪಾಲಕ್ಕೆ ಅವರ ಅಧಿಕೃತ ಭೇಟಿಯ ಸಂದರ್ಭದಲ್ಲಿ ಅವರು ಮಾಹೆಗೆಆಗಮಿಸಿದರು. ಡಾ. ಜಿ. ಪರಮೇಶ್ವರರವರು ಮಾಹೆಯ ದೀರ್ಘಕಾಲದ ಪರಂಪರೆ ಹಾಗೂ ಶಿಕ್ಷಣ, ಆರೋಗ್ಯ ವಿಜ್ಞಾನ, ತಂತ್ರಜ್ಞಾನ ಮತ್ತು ನವೀನತೆ ಕ್ಷೇತ್ರಗಳಲ್ಲಿ ಕಾಪಾಡಿಕೊಂಡಿರುವ ಉನ್ನತ ಮಟ್ಟದ ಮಾನದಂಡಗಳನ್ನು ಪ್ರಶಂಸಿಸಿದರು. ಸಂಸ್ಥೆಯ ಹಿರಿಯ ಅಧಿಕಾರಿಗಳು […]

ಉಡುಪಿ ಜಿಲ್ಲೆಯ ಸಹಕಾರಿ ಸಂಸ್ಥೆಗಳಿಂದ ಸಹಕಾರಿ ಕ್ಷೇತ್ರದ ಭವಿಷ್ಯ ರೂಪಿಸುವ ಕೆಲಸ ಆಗುತ್ತಿದೆ- ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಕರ್ನಾಟಕ ರಾಜ್ಯ ಸಹರಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪತ್ತಿನ ಹಾಗೂ ಇತರೆ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕರಿಗೆ ರಾಜ್ಯಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಶನಿವಾರ ಉಡುಪಿ ಲಿಕೋ ಬ್ಯಾಂಕಿನ ಡೈಮಂಡ್ ಜ್ಯುಬಿಲಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಸಹಕಾರಿ ಕ್ಷೇತ್ರದ ಭವಿಷ್ಯ ರೂಪಿಸುವ ಕೆಲಸ ಜಿಲ್ಲೆಯ ಸಹಕಾರಿಗಳಿಂದ ಆಗುತ್ತಿರುವುದು ಹೆಮ್ಮೆಯ […]

ಉಡುಪಿ: ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು ಮಂಜೂರು

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಹಿರಿಯಡ್ಕ ಜೈಲಿನಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ನ್ಯಾಯಾಲಯವು ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಮೂರು ಗಂಟೆಗಳ ಪೊಲೀಸ್ ಕಸ್ಟಡಿ ಬಳಿಕ ಸಂಜೆ 4:00ಗೆ ಉಡುಪಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದು ಆರೋಪಿ ಪರ ವಕೀಲ ವಿಜಯ ವಾಸು ಪೂಜಾರಿ ಹಾಗೂ ಸಹಾಯಕ ಸರಕಾರಿ ಅಭಿಯೋಜಕರ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ನಾಗೇಶ್ ಎನ್ಎ ಶರತುಬದ್ಧ […]

ಕಾರ್ಕಳ ಜ್ಞಾನಸುಧಾ : ಸಂಸ್ಥಾಪಕರ ಜನ್ಮ ದಿನಾಚರಣೆ, ಸಾಮಾಜಿಕ ಕಾರ್ಯಕ್ರಮ, ರಕ್ತದಾನ ಶಿಬಿರ, ಆಡಂಬರ ರಹಿತ ಆರ್ಥಪೂರ್ಣ ಕಾರ್ಯಕ್ರಮ :ಡಾ.ಸಂಜಯ್

ಕಾರ್ಕಳ: ಸಾಮಾಜಿಕ ಪ್ರಜ್ಞೆಯ ಜವಾಬ್ದಾರಿಯನ್ನುಹೊಂದಿದ ಅರ್ಥಪೂರ್ಣ ಆಡಂಬರರಹಿತ ಜ್ಞಾನಸುಧಾದಕಾರ್ಯಗಳು ಪ್ರಶಂಸನೀಯ. ಸಭ್ಯತೆ, ನಡೆನುಡಿಯಸಾಕಾರಮೂರ್ತಿ ಡಾ.ಸುಧಾಕರ್ ಶೆಟ್ಟಿಯವರು ಎಂದುಕಾರ್ಕಳ ಟಿ.ಎಂ.ಎಪೈ ರೋಟರಿ ಆಸ್ಪತ್ರೆಯ ಪ್ರಸೂತಿ,ಸ್ತ್ರೀ ರೋಗ ತಜ್ಞ ಡಾ. ಸಂಜಯ್ ಹೇಳಿದರು. ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನವತಿಯಿಂದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕದಿ.ಗೋಪ ಶೆಟ್ಟಿಯವರ 104ನೇ ಜನ್ಮದಿನದ ಅಂಗವಾಗಿಆಗಸ್ಟ್ 21ರಂದು ನಡೆದ ಸಾಮಾಜಿಕ ನೆರವಿನ ಸೇವಾಕಾಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಮಾಜಿಕ ಕಾರ್ಯಕ್ರಮ :ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನವತಿಯಿಂದ ಸಮಾಜ ಸೇವಕ ಅಂಬಲಪಾಡಿ ವಿಶು ಶೆಟ್ಟಿ ಹಾಗೂಸ್ವಚ್ಛ ಕಾರ್ಕಳದ […]