ನ್ಯಾಯಾಲಯಕ್ಕೆ ಹಾಜರಾದ ತಿಮರೋಡಿ: ಎರಡು ಗಂಟೆಗಳ ಕಾಲ ಪೊಲೀಸ್ ಕಸ್ಟಡಿಗೆ

ಉಡುಪಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಇಂದು ಉಡುಪಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದರು. ತನಿಖಾಧಿಕಾರಿ ಬ್ರಹ್ಮಾವರ ಪೊಲೀಸ್ ಉಪನಿರೀಕ್ಷಕ ಅಶೋಕ್ ಮಾಳಬಗಿ ಸಹಿತ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನ್ಯಾಯಲಯಕ್ಕೆ ಹಾಜರುಪಡಿಸಲಾಯಿತು. ಮಹೇಶ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ಕಸ್ಟಡಿಗೆ ಕೇಳಿದ್ದ ಹಿನ್ನೆಲೆಯಲ್ಲಿ ಮಧ್ಯಾಹ್ನ 1.30ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಎರಡು ಗಂಟೆಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ […]

ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ ಮಾಡಬೇಕು ಎಂದು ಆಲೋಚನೆ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಸಂಜೆ ಪ್ರತಿಕ್ರಿಯೆ ನೀಡಿದರು. ಎರಡನೇ ಸಭೆಯನ್ನು ಮಂಗಳೂರಿನಲ್ಲಿ ನಡೆಸಲಾಗುವುದು. ಮುಂದಿನ ಸಭೆಗೆ ಯಾರನ್ನು ಆಹ್ವಾನ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಈ ಸಭೆಯಲ್ಲಿ ಬಂಡವಾಳ ಹೂಡಿಕೆದಾರರು, ಕೇಂದ್ರ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಕರೆಯಲಾಗುತ್ತದೆ. ಕರಾವಳಿ ಭಾಗಕ್ಕೆ ಹೊಸ ರೂಪ ನೀಡಲಾಗುತ್ತದೆ” ಎಂದು ತಿಳಿಸಿದರು. […]

ಧರ್ಮಸ್ಥಳ: ದೂರುದಾರ ಮಾಸ್ಕ್ ಮ್ಯಾನ್ ಸಿ.ಎನ್ ಚಿನ್ನಯ್ಯ ಹತ್ತು ದಿನ SIT ಕಸ್ಟಡಿಗೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತ ಪ್ರಕರಣ ಇದೀಗ ಮಹತ್ವದ ತಿರುವು ಪಡೆದಿದೆ. ಬುರುಡೆ ಹಿಡಿದುಕೊಂಡು ಬಂದು ದೂರು ನೀಡಿದ್ದ ಅನಾಮಿಕ ದೂರುದಾರನನ್ನು ಇದೀಗ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಶನಿವಾರ (ಆ.23) ದೂರುದಾರ ಮಾಸ್ಕ್‌ಮ್ಯಾನ್ (ಸಿ.ಎನ್.ಚಿನ್ನಯ್ಯ) ನನ್ನು ಎಸ್‌ಐಟಿ ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿದ್ದಾರೆ. ಬೆಳಗ್ಗೆ ವೈದ್ಯಕೀಯ ತಪಾಸಣೆಯ ಬಳಿಕ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಜೆಎಂಎಫ್‌ಎಸ್‌ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಅಲ್ಲಿ ಆತನನ್ನು 10 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ […]

ಉಡುಪಿ: ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ : 216 ಗಂಟೆಗಳ ಭರತನಾಟ್ಯ ಆರಂಭಿಸಿದ ವಿದುಷಿ ದೀಕ್ಷಾ !

ಉಡುಪಿ: ವಿದುಷಿ ದೀಕ್ಷಾ ವಿ. ಅವರು 9 ದಿನಗಳ ಕಾಲ 216 ಗಂಟೆಗಳ ನಿರಂತರ ಭರತನಾಟ್ಯ ಪ್ರದರ್ಶನದ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ಹೆಸರು ದಾಖಲಿಸಲು ಪ್ರಯತ್ನ ಆರಂಭಿಸಿದ್ದಾರೆ. 216 ಗಂಟೆಗಳ ಕಾಲ, 9 ದಿನಗಳ ಕಾಲ ನಿರಂತರವಾಗಿ ನಡೆಯುವ ಈ ನೃತ್ಯ ಮ್ಯಾರಥಾನ್ ಅಜ್ಜರಕಾಡಿನ ಡಾ. ಜಿ. ಶಂಕ‌ರ್ ಮಹಿಳಾ ಮಹಾವಿದ್ಯಾಲಯದ ಸ್ನಾತಕೋತ್ತರ ಸಭಾಭವನದಲ್ಲಿ ಆರಂಭಗೊಂಡಿದ್ದು, ಆಗಸ್ಟ್ 30ರಂದು ಸಂಪನ್ನಗೊಳ್ಳಲಿದೆ. ಕಾರ್ಯಕ್ರಮವನ್ನು ಮಾಜಿ ಶಾಸಕ ರಘುಪತಿ ಭಟ್ ಹಾಗೂ ಗಣ್ಯ ಅತಿಥಿಗಳು ದೀಪ […]

ಉಡುಪಿ: ಉದ್ಯೋಗಾವಕಾಶ

ಉಡುಪಿ: ಉಡುಪಿಯಲ್ಲಿರುವ ಪ್ರಸಿದ್ಧ ಬ್ಯಾಟರಿ ಕಂಪನಿಗೆ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗೆ ಆರ್ಜಿ ಆಹ್ವಾನಿಸಲಾಗಿದೆ. ಪುರುಷರು ಪರವಾನಗಿಯೊಂದಿಗೆ ದ್ವಿಚಕ್ರ ವಾಹನ, ಸ್ಥಳೀಯ ಭಾಷೆ ಮಾತನಾಡಬಲ್ಲವರು ಹಾಗೂ ಅತ್ಯುತ್ತಮ ಸಂವಹನ ಕೌಶಲ್ಯ ಹೊಂದಿದವರು. ಹುದ್ದೆಯಲ್ಲಿ ಅನುಭವಿ ಅಥವಾ ಹೊಸಬರು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: SF ಬ್ಯಾಟರಿಗಳುUDUPI95909123459845309100