ಉಡುಪಿ:ಕೌಶಲ್ಯಾಭಿವೃದ್ಧಿ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳು ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಗರಿಷ್ಠ 5 ಲಕ್ಷ ರೂ. ವರೆಗೆ ಸಹಾಯಧನ ನೀಡಲು ಅರ್ಹ 20 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://www.karnatakatourism.org/sevasindhu.karnataka.gov.in ಅಥವಾ ಪ್ರವಾಸೋದ್ಯಮ […]

ಉಡುಪಿ:ಕಿಶೋರ ಕನಕ ಕಾವ್ಯ ಸ್ಪರ್ಧೆ : ಅರ್ಜಿ ಆಹ್ವಾನ

ಉಡುಪಿ: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವತಿಯಿಂದ ಕಿಶೋರ ಕನಕ ಕಾವ್ಯಸ್ಪರ್ಧೆಯನ್ನು ಏರ್ಪಡಿಸಲಾಗುತ್ತಿದ್ದು, 10 ರಿಂದ 15 ವರ್ಷದೊಳಗಿನ ಕಿಶೋರ ಪ್ರತಿಭೆಗಳಿಂದ ವೆಬ್‌ಸೈಟ್ https://kanakadasaresearchcenter.karnataka.gov.in/ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟಂಬರ್ 20 ರ ಒಳಗಾಗಿ ತಮ್ಮ ಇತ್ತೀಚಿನ ಭಾವಚಿತ್ರಗಳೊಂದಿಗೆ ಸಂತಕವಿ ಕನಕದಾಸ ಮತ್ತು ತತ್ವ ಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಇಲ್ಲಿಗೆ ಅಂಚೆ/ಕೊರಿಯರ್/ಖುದ್ದಾಗಿ ಅಥವಾ ಇ-ಮೇಲ್ [email protected] ಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ:6364529319 ಅನ್ನು ಸಂಪರ್ಕಿಸಬಹುದಾಗಿದೆ […]

ಉಡುಪಿ:ಆ.24 ರಂದು ರಕ್ತದಾನ ಶಿಬಿರ

ಉಡುಪಿ: ಉಡುಪಿ ಬ್ರಹ್ಮಕುಮಾರೀಸ್ ಇವರಿಂದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ, ಕುಂದಾಪುರ ತಾಲೂಕುಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಬ್ರಹ್ಮಗಿರಿ ರೆಡ್‌ಕ್ರಾಸ್ ಭವನದಲ್ಲಿ ಆಗಸ್ಟ್ 24 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಕುಂದಾಪುರ ರೆಡ್‌ಕ್ರಾಸ್ ಸಭಾಪತಿ ಎಸ್. ಜಯಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬ್ರಹ್ಮ ಕುಮಾರೀಸ್ ಉಡುಪಿ ಸಂಚಾಲಕಿ ಬಿ.ಕೆ ಸುಮಾ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಉಡುಪಿ:ಸಂಶೋಧನೆ / ವಿಮರ್ಶಾ ಗ್ರಂಥಕ್ಕೆ ಬಹುಮಾನ : ಅರ್ಜಿ ಆಹ್ವಾನ

ಉಡುಪಿ: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ಕನಕ ಸಾಹಿತ್ಯ, ದಾಸ ಸಾಹಿತ್ಯ ಹಾಗೂ ತತ್ವಪದ ಸಾಹಿತ್ಯ ಕುರಿತ ಸಂಶೋಧನೆ ಅಥವಾ ವಿಮರ್ಶಾ ಗ್ರಂಥವೊAದಕ್ಕೆ ಬಹುಮಾನ ನೀಡುವ ಯೋಜನೆ ರೂಪಿಸಿದ್ದು, 2024 ನೇ ಸಾಲಿನಲ್ಲಿ ಪ್ರಕಟವಾದ ಪ್ರಥಮ ಮುದ್ರಣದ ಗ್ರಂಥವನ್ನು ಬಹುಮಾನಕ್ಕೆ ಪರಿಗಣಿಸಲಾಗುತ್ತಿದ್ದು, ವೆಬ್‌ಸೈಟ್ https://kanakadasaresearchcenter.karnataka.gov.in/ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಬಹುಮಾನಕ್ಕೆ ಗ್ರಂಥ ಲೇಖಕರು, ಪ್ರಕಾಶಕರು ಸೆಪ್ಟಂಬರ್ 10 ರ ಒಳಗಾಗಿ ಸಂತಕವಿ ಕನಕದಾಸ ಮತ್ತು ತತ್ವ ಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 […]

ಉಡುಪಿ:ಮಾಸ್ಟರ್ ಆಫ್ ವಿಜ್ಯುಯಲ್ ಆಟ್ಸ್ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಮೈಸೂರಿನ ಸಿದ್ದಾರ್ಥ ನಗರದಲ್ಲಿರುವ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಮಾಸ್ಟರ್ ಆಫ್ ವಿಜ್ಯುಯಲ್ ಆಟ್ಸ್ (ಎಂ.ವಿ.ಎ) ಪ್ರಥಮ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಪ್ರಥಮ ಬಿ.ವಿ.ಎ ಸ್ನಾತಕ ಪದವಿಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಎಂ.ವಿ.ಎ ಪ್ರವೇಶಾತಿಗಾಗಿ ಚಿತ್ರಕಲೆ, ಗ್ರಾಫಿಕ್ಸ್ ಮತ್ತು ಶಿಲ್ಪಕಲೆ ವಿಭಾಗಕೆ ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಅರ್ಹತಾ ಪರೀಕ್ಷೆ […]