ಆ.25- ಸೆ.7: ಕನ್ನರ್ಪಾಡಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿಯಿಂದ “20ನೇ ವರ್ಷದ ವೈಭವದ ಗಣೇಶೋತ್ಸವ”

ಉಡುಪಿ: ಕಿನ್ನಿಮೂಲ್ಕಿಯ ಕನ್ನರ್ಪಾಡಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿಯಿಂದ 20ನೇ ವರ್ಷದ ಗಣೇಶೋತ್ಸವವನ್ನು ಆ.25ರಿಂದ ಸೆ.7ರ ವರೆಗೆ 14 ದಿನಗಳ ಕಾಲ ಅತ್ಯಂತ ವೈವಿಧ್ಯಮಯ ಮತ್ತು ವೈಭವದಿಂದ ಆಚರಿಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅ.25ರಂದು ಸಂಜೆ ಜೋಡುಕಟ್ಟೆಯಿಂದ ಗಣಪತಿ ಮೈದಾನದ ವರೆಗೆ ಭಕ್ತರ ಭವ್ಯ ಮೆರವಣಿಗೆಯೊಂದಿಗೆ ಈ ಬಾರಿ ಗಣೇಶೋತ್ಸವ ಆರಂಭವಾಗಲಿದೆ. ಗಣೇಶೋತ್ಸವವನ್ನು ರಾಜ್ಯದ ಡಿಸಿಎಂ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ. ನಾಡೋಜಿ ಜಿ.ಶಂಕರ್ ಸಭಾಧ್ಯಕ್ಷತೆ […]

ಉಡುಪಿ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ದಂಧೆ; ಪೊಲೀಸರ ದಾಳಿ

ಉಡುಪಿ: ಉಡುಪಿ ನಗರದ ಸಮ್ಮರ್ ಪಾರ್ಕ್ ಹೋಟೆಲ್‌ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಹಿಳಾ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಆರೋಪಿ ಶರತ್ ಯಾನೆ ಮೊಹಮ್ಮದ್ ಪಯಾಜ್ ಎಂಬವನ ಮೇಲೆ ಪ್ರಕರಣ ದಾಖಲಾಗಿದೆ. ಹೋಟೆಲ್‌ ರೂಮ್ ನಂಬ್ರ 308ಕ್ಕೆ ದಾಳಿ ನಡೆಸಿದ ಪೊಲೀಸರು, ರೂಮ್ ನಲ್ಲಿದ್ದ ಒಬ್ಬ ಮಹಿಳೆಯನ್ನು ವಿಚಾರಿಸಿದ್ದಾರೆ. ಈ ವೇಳೆ ಶರತ್ ಯಾನೆ ಮೊಹಮ್ಮದ್ ಫಯಾಜ್ ಎಂಬಾತ ಕೆಲಸ ಕೊಡಿಸುವುದಾಗಿ […]

ಸಾರ್ವಜನಿಕ ಗಣೇಶೋತ್ಸವಕ್ಕೆ ಕಠಿಣ ನಿಯಮ ಜಾರಿ ಮಾಡಿದ ಇಂಧನ ಇಲಾಖೆ, ನಿಯಮ ಪಾಲಿಸದೆ ಇದ್ರೆ ಕಠಿಣ ಶಿಕ್ಷೆ

ಬೆಂಗಳೂರು : ಆಗಸ್ಟ್ 27ರಂದು ಗಣೇಶ ಹಬ್ಬ ಆಚರಿಸಲು ಅದ್ದೂರಿ ಸಿದ್ಧತೆಗಳು ನಡೆಯುತ್ತಿದ್ದು, ಇದರ ಬೆನ್ನಲ್ಲೇ ಇಂಧನ ಇಲಾಖೆ ಕರೆಂಟ್ ಶಾಕ್ ನೀಡಿದೆ. ಗಣೇಶೋತ್ಸವ ಆಚರಿಸಲು ದೇವಸ್ಥಾನ, ಗುಡಿ, ಸಂಘ ಸಂಸ್ಥೆಗಳು, ಗೆಳೆಯರ ಬಳಗ ಸೇರಿದಂತೆ ಹಲವು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲಿ ಗಣೇಶೋತ್ಸವ ಆಚರಿಸುತ್ತಿದ್ದು, ಸಾರ್ವಜನಿಕ ಗಣೇಶೋತ್ಸವ ಆಚರಿಸುವವರು ಕೆಲ ಕಠಿಣ ನಿಯಮ ಪಾಲಿಸಬೇಕು ಎಂದು ಇಂಧನ ಇಲಾಖೆ ಸೂಚಿಸಿದೆ. ನಿಯಮ ಉಲ್ಲಂಘಿಸಿದರೆ ಕ್ರಮದ ಎಚ್ಚರಿಕೆಯ್ನು ಬೆಸ್ಕಾಂ ನೀಡಿದೆ. ಸಾರ್ವಜನಿಕ ಗಣೇಶೋತ್ಸವಕ್ಕೆ ವಿದ್ಯುತ್ ಪಡೆಯಲು […]

ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್‌ ಸೊಸೈಟಿ: ವಾರ್ಷಿಕ ಮಹಾಸಭೆ.

ಮಂಗಳೂರು: ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರಿಯಲ್ಕೋ-ಆಪರೇಟಿವ್ ಸೊಸೈಟಿ 2024-2025 ನೇ ಸಾಲಿನ ವಾರ್ಷಿಕ ಮಹಾಸಭೆ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅಧ್ಯಕ್ಷತೆಯಲ್ಲಿ ನಗರದ ಉರ್ವಸ್ಟೋರ್‌ ಡಾ.ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಭಾನುವಾರ ಜರುಗಿತು. ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ 2024-2025 ರ ಸಾಲಿನ ವಾರ್ಷಿಕ ವರದಿ ಮಂಡಿಸಿದರು. ವಜ್ರಮಹೋತ್ಸವ ವರ್ಷದ ಪ್ರಯುಕ್ತ 2024- 2025 ರ ಸಾಲಿಗೆ ಸದಸ್ಯರಿಗೆ ಶೇ.20ರಷ್ಟು ಡಿವಿಡೆಂಡ್ ಪಾವತಿಗೆ ಮಂಜೂರಾತಿ ಪಡೆಯಲಾಯಿತು. ಪಂಚ ಕಸುಬುಗಳಲ್ಲಿ ಸಾಧನೆಗೈದ ಐವರು ಶಿಲ್ಪಿಗಳಾದ ಸ್ವರ್ಣಶಿಲ್ಪ-ಎನ್.ರಾಮಚಂದ್ರ ಆಚಾರ್ಯ ನಿಟ್ಟೆ, ಕಾಷ್ಠಶಿಲ್ಪ-ಬಳ್ಕೂರು ಗೋಪಾಲ ಆಚಾರ್ಯ ಮಣಿಪಾಲ, […]

ಮಂಗಳೂರು: ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಮುಳುಗಿ ಓರ್ವ ಮೃತ್ಯು; ಮೂವರ ರಕ್ಷಣೆ

ಸುರತ್ಕಲ್: ಇಲ್ಲಿನ ಸಸಿಹಿತ್ಲು ಮೂಂಡಾ ಬೀಚ್ ಬಳಿ ಸಮುದ್ರಕ್ಕೆ ಇಳಿದಿದ್ದ 4 ಮಂದಿಯ ಪೈಕಿ ಓರ್ವ ಮೃತಪಟ್ಟು ಮೂವರನ್ನು ಸ್ಥಳೀಯರು ರಕ್ಷಿಸಿದ ಘಟನೆ ಸಸಿಹಿತ್ಲು ಎಂಬಲ್ಲಿ ರವಿವಾರ ಸಂಜೆ ವರದಿಯಾಗಿದೆ. ಮೃತರನ್ನು ಪಡುಪಣಂಬೂರು ಕಜಕತೋಟ ನಿವಾಸಿ ದಿ. ಅನ್ವರ್ ಎಂಬವರ ಪುತ್ರ ಮುಹಮ್ಮದ್ ಸಮೀರ್ (23) ಎಂದು ತಿಳಿದು ಬಂದಿದೆ. ಪಡುಪಣಂಬೂರು ಕಜಕತೋಟ ನಿವಾಸಿ ಅಬೂಬಕರ್ ಎಂಬವರ ಪುತ್ರ ಐಮಾನ್ (23), ಕಜಕತೋಟ ನಿವಾಸಿ ರಯೀಸ್ (22), ಹಳೆಯಂಗಡಿ ಬೊಳ್ಳೂರು ನಿವಾಸಿ ಹನೀಫ್ ಎಂಬವರ ಪುತ್ರ ಫಾಝಿಲ್ […]