ಉಡುಪಿ:ಮಕ್ಕಳ ಹೃದ್ರೋಗ ಉಚಿತ ತಪಾಸಣಾ ಶಿಬಿರ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ ಉಡುಪಿ, ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು ರಾಷ್ಟ್ರೀಯ ಬಾಲಸ್ವಾಸ್ಥ್ಯ ಕಾರ್ಯಕ್ರಮ, ಡಿ.ಇ.ಐ.ಸಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ನಗರದ ಸರಕಾರಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಮಕ್ಕಳ ಹೃದ್ರೋಗ ಉಚಿತ ತಪಾಸಣಾ ಶಿಬಿರ ಕಾರ್ಯಕ್ರಮ ನಡೆಯಿತು. ಶಿಬಿರದಲ್ಲಿ ಮಂಗಳೂರು ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮಕ್ಕಳ ಹೃದ್ರೋಗ ತಜ್ಞರಾದ ಡಾ.ಪ್ರೇಮ ಆಳ್ವ ಹಾಗೂಡಾ.ನಿಕಿಲ್ ಸ್ವಪ್ನಿಲ್, […]
ಉಡುಪಿ:ನೈಸರ್ಗಿಕ ಕೃಷಿ ತರಬೇತಿ : ಸಮಾರೋಪ

ಉಡುಪಿ: ಜಿಲ್ಲಾ ಪಂಚಾಯತ್ ಉಡುಪಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ಕೃಷಿ ಜೀವನೋಪಾಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ ಕೃಷಿಸಖಿಯರಿಗೆ 6 ದಿನದ ನೈಸರ್ಗಿಕ ಕೃಷಿ ತರಬೇತಿಯ ಸಮಾರೋಪ ಸಮಾರಂಭವು ಇತ್ತೀಚೆಗೆ ಬ್ರಹ್ಮಾವರದ ಕೃಷಿ ವಿಜ್ಜಾನ ಕೇಂದ್ರದಲ್ಲಿ ನಡೆಯಿತು. ಸಂಜೀವಿನಿ ಯೋಜನೆಯ ಜಿಲ್ಲಾ ವ್ಯವಸ್ಥಾಪಕ ಅವಿನಾಶ್ ಕೃಷಿ ಸಖಿಯರಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಯನ್ನು ಅಭಿವೃದ್ಧಿ ಪಡಿಸಲು ಹಾಗೂ ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ […]
ಉಡುಪಿ:ಗೃಹ ರಕ್ಷಕರ ಸೇವೆ ಸಮಾಜಮುಖಿಯಾಗಿರಬೇಕು: ಡಾ.ರೋಶನ್ ಕುಮಾರ್ ಶೆಟ್ಟಿ

ಉಡುಪಿ: ಕಾನೂನು ಸುವ್ಯವಸ್ಥೆ, ಬಂದೋಬಸ್ತ್, ಚುನಾವಣೆ, ಪ್ರಾಕೃತಿಕ ವಿಕೋಪದಂಥ ಸಂದರ್ಭಗಳಲ್ಲಿ ಪೊಲೀಸ್ ಹಾಗೂ ಇತರ ಇಲಾಖೆಗಳೊಂದಿಗೆ ಕರ್ತವ್ಯ ನಿರ್ವಹಿಸುವ ಗೃಹ ರಕ್ಷಕರ ಸೇವೆ ಸಮಾಜಮುಖಿಯಾಗಿರಬೇಕು ಎಂದು ಜಿಲ್ಲಾಗೃಹರಕ್ಷಕ ದಳ ಸಮಾದೇಷ್ಟರಾದ ಡಾ.ರೋಶನ್‌ಕುಮಾರ ಶೆಟ್ಟಿ ಅವರು ಹೇಳಿದರು. ಅವರು ಸೋಮವಾರ ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ, ಪ್ರಸಕ್ತ ಸಾಲಿನಲ್ಲಿ ಉಡುಪಿ ಜಿಲ್ಲಾ ಗೃಹರಕ್ಷಕದಳದಲ್ಲಿ ನೂತನವಾಗಿ ನೋಂದಾಯಿಸಲ್ಪಟ್ಟ ಗೃಹರಕ್ಷಕರಿಗೆ ನಡೆದ ವಾರ್ಷಿಕ ಮೂಲ ಬುನಾದಿ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಜಿಲ್ಲಾ ಸೆಕೆಂಡ್ ಇನ್ ಕಮಾಂಡ್ ರಾಜೇಶ್ ಕೆ.ಸಿ […]
ಉಡುಪಿ:ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ : ಅರ್ಜಿ ಆಹ್ವಾನ

ಉಡುಪಿ:ಜಿಲ್ಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ಪದವಿ / ಡಿಪ್ಲೋಮಾಮತ್ತು ವೃತ್ತಿಪರ ಪದವಿಯವರೆಗೆ ರಾಜ್ಯದಲ್ಲಿರುವ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗಮಾಡುತ್ತಿರುವ ರಾಜ್ಯದ ಮೂಲನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ ಡಿಪ್ಲೋಮಾ ವರೆಗೆ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅಕ್ಟೋಬರ್ 15 ರ ಒಳಗಾಗಿ ಹಾಗೂ ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ನವೆಂಬರ್ 15 ರ ಒಳಗಾಗಿ ಅರ್ಜಿ […]
ಉಡುಪಿ:ಮಾಜಿ ಸೈನಿಕರ ಮಕ್ಕಳಿಗೆ ನಗದು ಪ್ರಶಸ್ತಿ : ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ, ನಡೆದಂತಹ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲನಿವಾಸಿ ಮಾಜಿ ಸೈನಿಕರ ಮಕ್ಕಳಿಂದ “ಜನರಲ್ ಕೆ.ಎಸ್ ತಿಮ್ಮಯ್ಯ” ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.