ಉಡುಪಿ:ಕೆಲಸದ ಸ್ಥಳದಲ್ಲಿ ಆಂತರಿಕ ದೂರು ಸಮಿತಿ ರಚನೆ ಕಡ್ಡಾಯ

ಉಡುಪಿ: ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ ಮತ್ತುನಿವಾರಿಸುವಿಕೆ) ಕಾಯ್ದೆ 2013 ರ ಅನುಷ್ಠಾನಕ್ಕಾಗಿ ಸರ್ವೋಚ್ಛ ನ್ಯಾಯಾಲಯವು ನೀಡಿರುವ ನಿರ್ದೇಶನಗಳನ್ವಯ ಕಾಯ್ದೆಯುಅನ್ವಯಿಸುವ 10 ಮತ್ತು 10 ಕ್ಕಿಂತ ಹೆಚ್ಚಿನ ಕಾರ್ಮಿಕರನ್ನು ಹೊಂದಿರುವ ಪ್ರತಿ ಸಂಸ್ಥೆಯ ಮಾಲೀಕರು ತಮ್ಮ ಸಂಸ್ಥೆಯಲ್ಲಿ ಆಂತರಿಕ ದೂರು ಸಮಿತಿಯನ್ನು ರಚಿಸುವುದು ಕಡ್ಡಾಯವಾಗಿರುತ್ತದೆ. ಜಿಲ್ಲೆಯಲ್ಲಿ ಹಲವು ಸಂಸ್ಥೆಗಳು ಇದುವರೆಗೂ ಆಂತರಿಕ ಸಮಿತಿಯನ್ನು ರಚಿಸದೇ ಮತ್ತು ರಚಿಸಿರುವ ಬಗ್ಗೆ ಮಾಹಿತಿ ನೀಡದಿರುವುದು ಕಂಡು ಬಂದಿದ್ದು, ಸರ್ವೋಚ್ಛ ನ್ಯಾಯಾಲಯವು ನೀಡಿರುವ ನಿರ್ದೇಶನದಂತೆ, ಆಂತರಿಕ […]
ಉಡುಪಿ:ಫಲಾನುಭವಿ ಆಧಾರಿತ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿಅನುಷ್ಠಾನಗೊಳಿಸಲಾದ 13 ಫಲಾನುಭವಿ ಆಧಾರಿತ ಯೋಜನೆಗಳಾದ ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ, ಸ್ವಯಂ ಉದ್ಯೋಗಕ್ಕಾಗಿ ಆಧಾರ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ,ನಿರುದ್ಯೋಗ ಭತ್ಯೆ ಮತ್ತು ಅಂಧ ಮಹಿಳೆಗಾಗಿ ಶಿಶುಪಾಲನಾ ಭತ್ಯೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ […]
ಮಣಿಪಾಲದ MSDCಯಲ್ಲಿ ವಾಸ್ತುಶಿಲ್ಪ ಮತ್ತು ಇಂಟೀರಿಯರ್ ಡಿಸೈನ್ ತರಬೇತಿ ಶೀಘ್ರದಲ್ಲಿ

ಮಣಿಪಾಲ: ಸ್ಪರ್ಧಾತ್ಮಕ ಯುಗದಲ್ಲಿ ಶೈಕ್ಷಣಿಕ ಅರ್ಹತೆಗಳಿಗಿಂತಲೂ ಜಾಸ್ತಿ ಕೌಶಲ್ಯಗಳು ಅಗತ್ಯವಿದೆ. ಆ ಕೌಶಲ್ಯಾಧಾರಿತ ಶಿಕ್ಷಣವನ್ನು,ತರಬೇತಿಯನ್ನು ನೀಡುತ್ತಲೇ ಬಂದಿರುವ ಮಣಿಪಾಲ ಕೌಶಲ್ಯಾಧಾರಿತ ಕೇಂದ್ರ (MSDC) blender for Architects & interior designers ಎನ್ನುವ ಹೊಸ ತರಬೇತಿಯನ್ನು ನೀಡಲಿದೆ. ವಾಸ್ತುಶಿಲ್ಪ ಮತ್ತು ಇಂಟೀರಿಯರ್ ಡಿಸೈನ್ ಭಾರೀ ಬೇಡಿಕೆಯಿರುವ ಕ್ಷೇತ್ರವಾಗಿದ್ದು ಈ ಕ್ಷೇತ್ರದಲ್ಲಿ ಇನ್ನಷ್ಟು ಪಳಗಲು ಈ ಕೌಶಲ್ಯಾದಾರಿತ ತರಬೇತಿ ಹೆಚ್ಚಿನ ಪ್ರಯೋಜನ ನೀಡಲಿದೆ. ಶೀಘ್ರದಲ್ಲಿಯೇ ಇದು ಆರಂಭಾಗಲಿದೆ. ಆಸಕ್ತರು CADD CENTER,MSDC MANIPAL mobile: 9448159810 ಸಂಪರ್ಕಿಸಬಹುದು.
ಉಡುಪಿ:ವಿಕಲಚೇತನರಿಗೆ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಂಗವಿಕಲರಿಗಾಗಿ, ಸರ್ಕಾರ ಅನುಷ್ಟಾನಗೊಳಿಸಲಾದ ಯೋಜನೆಗಳಾದ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ವಿವಾಹ ಪ್ರೋತ್ಸಾಹಧನ, ಬ್ಯಾಟರಿಚಾಲಿತ ಗಾಲಿಕುರ್ಚಿ, ನಿರಾಮಯ ಯೋಜನೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಸ್ಪರ್ಧಾ ಚೇತನ ಯೋಜನೆಗಳ ಸೌಲಭ್ಯ ಪಡೆಯಲು ಜಿಲ್ಲೆಯ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ […]
ಕಾರ್ಕಳ: ಮಂಗಳೂರು ಮೂಲದ ವ್ಯಕ್ತಿಯ ಭೀಕರ ಕೊಲೆ

ಕಾರ್ಕಳ: ತಾಲೂಕಿನ ಕುಂಟಲ್ಪಾಡಿಯಲ್ಲಿ ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂಬವರನ್ನು ಕೊಲೆ ಮಾಡಲಾಗಿದೆ. ಮಂಗಳವಾರ (ಆ.26) ಬೆಳಗಿನ ಹೊತ್ತಿಗೆ ಈ ಘಟನೆ ಪತ್ತೆಯಾಗಿದ್ದು, ಕಾರ್ಕಳ ನಗರ ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ನವೀನ್ ಪೂಜಾರಿ ಕಾರ್ಕಳದಲ್ಲಿ ನೆಲೆಸಿ ಬಡ್ಡಿ ವ್ಯಾಪಾರ ನಡೆಸುತ್ತಿದ್ದವರು ಎಂದು ತಿಳಿದುಬಂದಿದೆ. ಪೋಲೀಸರು ಸಹಕಾರದಿಂದ ತನಿಖೆ ಮುಂದುವರೆದಿದೆ. ಘಟನಾ ಸ್ಥಳಕ್ಕೆ ಎಸ್‌ಪಿ ಹರಿರಾಮ್ ಶಂಕರ್, ಎಎಸ್‌ಪಿ ಡಾ.ಹರ್ಷ ಪ್ರಿಯಾಂವದ ಹಾಗೂ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸರು […]