ನಾಳೆ (ಅಗಸ್ಟ್ 28) ಉಡುಪಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆ.28ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಐಟಿಐ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ಕಾಲೇಜಿಗೆ ರಜೆ ಘೋಷಿಸಿರುವುದಿಲ್ಲ.

ಡಿಸ್ಟ್ರಿಬ್ಯೂಟರ್ಸ್ ಬೇಕಾಗಿದ್ದಾರೆ

ಉಡುಪಿ:ಭಟ್ಕಳದಲ್ಲಿ ಡಿಸ್ಟ್ರಿಬ್ಯೂಟರ್ಸ್ ಬೇಕಾಗಿದ್ದಾರೆ. ಅಗತ್ಯತೆಗಳು: ▪️200-300sqft ಗೋಡಾನ್▪️ಕಮರ್ಷಿಯಲ್ ವೆಹಿಕಲ್ & ಡ್ರೈವರ್▪️ವಿತರಣಾ ಚಾನಲ್ ರಚಿಸುವ ಸಾಮರ್ಥ್ಯ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:📞9731621800

ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿನ್‌ ಐಪಿಎಲ್‌ಗೆ ವಿದಾಯ.

ಚೆನ್ನೈ: ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿನ್‌ ಅವರು ತಮ್ಮ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ವೃತ್ತಿಜೀವನಕ್ಕೆ ನಿವೃತ್ತಿ ಹೇಳಿದ್ದಾರೆ. 221 ಪಂದ್ಯಗಳನ್ನು ಆಡಿ 187 ವಿಕೆಟ್‌ಗಳನ್ನು ಪಡೆದಿರುವ ಅಶ್ವಿನ್‌ ಸಾಮಾಜಿಕ ಜಾಲತಾಣದಲ್ಲಿ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಪ್ರತಿ ಅಂತ್ಯವು ಹೊಸ ಆರಂಭವನ್ನು ಹೊಂದಿರುತ್ತದೆ. ಐಪಿಎಲ್ ಕ್ರಿಕೆಟಿಗನಾಗಿ ನನ್ನ ಸಮಯ ಇಂದು ಕೊನೆಗೊಳ್ಳುತ್ತದೆ. ಎಲ್ಲಾ ಅದ್ಭುತ ನೆನಪುಗಳು ಮತ್ತು ಸಂಬಂಧಗಳನ್ನು ನೀಡಿದ ಎಲ್ಲಾ ಫ್ರಾಂಚೈಸಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಮುಖ್ಯವಾಗಿ ಐಪಿಎಲ್ ಮತ್ತು ಬಿಸಿಸಿಐಗೆ ಕೃತಜ್ಞತೆಗಳು ಎಂದು ಹೇಳಿದ್ದರು.

ಉಡುಪಿ: ಕೆಂಪು ಕಲ್ಲು, ಮರಳಿನ ಮೇಲಿನ ನಿರ್ಬಂಧ ತೆರವುಗೊಳಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ಉಡುಪಿ: ಕೆಂಪು ಕಲ್ಲು ಮತ್ತು ಮರಳಿನ ಮೇಲೆ ಹೇರಿರುವ ನಿರ್ಬಂಧವನ್ನು ಸಡಿಲಿಸಬೇಕು ಎಂದು ಆಗ್ರಹಿಸಿ ಇವತ್ತು ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು. ಮಣಿಪಾಲದ ಟೈಗರ್ ಸರ್ಕಲ್ ನಿಂದ ಹೊರಟ ಪ್ರತಿಭಟನೆ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಾಪ್ತಿಗೊಂಡಿತು. ಅಲ್ಲಿ ಜಿಲ್ಲಾಧಿಕಾರಿಗೆ ಮನವಿ ನೀಡಿದ ಕರವೇ ಮುಖಂಡರು, ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು.ಮುಖ್ಯವಾಗಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ತೆಗೆಯುವುದಕ್ಕೆ ನಿರ್ಬಂಧ ಇದೆ. ಹೊರಭಾಗದಿಂದ ಮರಳು ಮತ್ತು ಕೆಂಪು ಕಲ್ಲು ಸಾಗಾಣಿಕೆ ಮಾಡುತ್ತಿರುವ ಲಾರಿಗಳನ್ನು ಪೋಲಿಸರು […]

ಉಡುಪಿ: ಆ.29ರಂದು “ಜಿಎಸ್ ಟಿ ಸೊಲ್ಯೂಷನ್ಸ್” ಕಾರ್ಯಕ್ರಮ

ಉಡುಪಿ: ಉಡುಪಿ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯ ನೇತೃತ್ವದಲ್ಲಿ ಉಡುಪಿ ಟ್ಯಾಕ್ಸ್ ಬಾರ್ ಅಸೋಸಿಯೇಶನ್, ದ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟ್ಸ್ ಆಫ್ ಇಂಡಿಯಾ ಉಡುಪಿ ಬ್ರಾಂಚ್ (ಎಸ್ ಐ ರ್ ಸಿ),ಉಡುಪಿ ಜಿಲ್ಲಾ ಬೇಕರಿ ಹಾಗೂ ಖಾದ್ಯ ತಿನಸುಗಳ ತಯಾರಕರು ಮತ್ತು ಮಾರಾಟಗಾರರ ಸಂಘ, ಉಡುಪಿ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಶನ್, ಉಡುಪಿ ಡಿಸ್ಟಿಕ್ಟ್ ಕನ್ವೆನ್ಷನ್ ಹಾಲ್ ಅಸೋಸಿಯೇಶನ್, ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಅಂಡ್ ಆರ್ಕಿಟೆಕ್ಟ್ಸ್, ಉಡುಪಿ, ಉಡುಪಿ ಹೋಟೆಲ್ ಓನರ್ಸ್ ಅಸೋಸಿಯೇಶನ್ […]