ಪೆರ್ಣಂಕಿಲ ಮಹಾಗಣಪತಿಗೆ ಮಂಗಳಾರತಿ ಸೇವೆ

ಉಡುಪಿ: ಉಡುಪಿ ಜಿಲ್ಲೆಯ ಅತ್ಯಂತ ಪ್ರಾಚೀನ ನೆಲೆಗಳಲ್ಲಿ ಒಂದಾಗಿರುವ “ಕೊಪ್ಪರಿಗೆ ಅಪ್ಪ” ಹರಕೆ ಖ್ಯಾತಿಯ ಪೆರ್ಣಂಕಿಲ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಪೂಜೆ ನೆರವೇರಿಸಲಾಯಿತು. ಹಬ್ಬದ ಪ್ರಯುಕ್ತ ದೇಗುಲದಲ್ಲಿ ಬೆಳಿಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮಹಾಗಣಪತಿಗೆ ವಿಶೇಷ ನೈವೇದ್ಯ, ಅಭಿಷೇಕ ಮಾಡಿದ ಬಳಿಕ ಮಹಾಮಂಗಳಾರತಿ ಬೆಳಗಿಸಲಾಯಿತು. ನೂರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.

ಕಾರ್ಕಳ ಮೂಲದ ಹೊಟೇಲ್‌ ಉದ್ಯಮಿ ಬರ್ಬರ ಕೊಲೆ

ಉಡುಪಿ: ಕೆಲಸದ ವಿಚಾರಕ್ಕೆ ಹೊಟೇಲ್ ಸಿಬ್ಬಂದಿಯೊಬ್ಬನಿಗೆ ಗದರಿದ ಹೊಟೇಲ್ ಮಾಲೀಕನನ್ನೇ ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾರಾಷ್ಟ್ರದ ಪೂನಾದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಕಾರ್ಕಳ ತಾಲೂಕಿನ ಎಣ್ಣೆಹೊಳೆ ಕುಮೇರುಮನೆ ನಿವಾಸಿ ಹೊಟೇಲ್ ಉದ್ಯಮಿ ಸಂತೋಷ್ ಶೆಟ್ಟಿ(46) ಹತ್ಯೆಯಾದ ಉದ್ಯಮಿ.ಉತ್ತರ ಪ್ರದೇಶ ಮೂಲದ ವೆಯರ್‌ ಹೊಟೇಲ್ ನಲ್ಲಿ ಕೆಲಸದ ಸಮಯದಲ್ಲಿ ಮದ್ಯಪಾನ ಮಾಡಿರುವುದಕ್ಕೆ ಬೈದು ಬುದ್ಧಿವಾದ ಹೇಳಿದ್ದಕ್ಕೆ ಸಿಟ್ಟಿಗೆದ್ದ ಆತ ಕಿಚನ್’ನಿಂದ ಕತ್ತಿ ಹಿಡಿದುಕೊಂಡು ಬಂದು ಸಂತೋಷ್ ಶೆಟ್ಟಿಯವರು ಕುಳಿತ್ತಿದ್ದ ವೇಳೆ ಹಿಂಬದಿಯಿಂದ ಕುತ್ತಿಗೆಗೆ ಕಡಿದು […]

ಮೂಡುಬಿದಿರೆ:ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟ 2025 ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ 42 ಪದಕ

ಮೂಡುಬಿದಿರೆ: ಉಡುಪಿ ಜಿಲ್ಲಾ  ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ಕ್ರೀಡಾಪಟುಗಳಿಗೆ 19 ಚಿನ್ನ, 15 ಬೆಳ್ಳಿ, 8 ಕಂಚು ಒಟ್ಟು 42 ಪದಕಗಳು, 3 ನೂತನ ಕೂಟ ದಾಖಲೆ ಹಾಗೂ 1 ವಿಭಾಗ ಕ್ರೀಡಾಕೂಟದ ವೈಯಕ್ತಿಕ ಪ್ರಶಸ್ತಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಇದರಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನ ಕ್ರೀಡಾಪಟುಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುವುದರಲ್ಲಿ ಮಹತ್ವದ ಕೊಡುಗೆಯನ್ನು […]

ಉಡುಪಿ:ಪ.ಜಾತಿ/ ಪಂಗಡದ ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಸ್ವ-ಉದ್ಯೋಗ ಹೊಂದಲು ಹಾಗೂ ತರಬೇತಿಯೊಂದಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ IHM ಹಾಗೂ FCI ಸಂಸ್ಥೆಗಳ ಮೂಲಕ ಬೆಂಗಳೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಹಾಗೂ ಕೆ.ಎಸ್.ಟಿ.ಡಿ.ಸಿ ಸಂಸ್ಥೆಗಳ ಮೂಲಕ ಕನಿಷ್ಠ 20 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ […]

ಉಡುಪಿ:ಹಾಡಿರೇ ರಾಗಗಳ ತೂಗಿರೇ ದೀಪಗಳ : ಸಂಗೀತ ಗಾಯನ ಕಾರ್ಯಕ್ರಮ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಮತ್ತು ಭಂಡಾರ್‌ಕರ‍್ಸ್ ಕಾಲೇಜು ಐ.ಕ್ಯೂ.ಎ.ಸಿ ವಿಭಾಗ, ಕುಂದಾಪುರ ಇವರ ಸಹಕಾರದೊಂದಿಗೆ ಹಾಡಿರೇ ರಾಗಗಳ ತೂಗಿರೇ ದೀಪಗಳ -ಸಂಗೀತ ಗಾಯನ ಕಾರ್ಯಕ್ರಮವು ಆಗಸ್ಟ್ 28 ರಂದು ಬೆಳಗ್ಗೆ 9.30 ಕ್ಕೆ ಕುಂದಾಪುರ ಭಂಡಾರ್ ಕರ‍್ಸ್ ಕಾಲೇಜು ಇಲ್ಲಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಲಿದ್ದು, ಭಂಡಾರ್‌ಕರ‍್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶುಭಕರಾಚಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ […]