ಕುಂದಾಪುರ: ಅಕ್ರಮವಾಗಿ ಮದ್ಯ ಮಾರಾಟ: ಆರೋಪಿಯ ಬಂಧನ, ಮದ್ಯ ವಶ

ಉಡುಪಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮದ ಶೇಷಾದ್ರಿ (43) ಬಂಧಿತ ಆರೋಪಿ. ಗಣೇಶ ಹಬ್ಬದ ಪ್ರಯುಕ್ತ ಮದ್ಯ ಮಾರಾಟ ನಿಷೇಧಿಸಲಾಗಿತ್ತು. ಆದರೂ ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘಿಸಿ ಯಾವುದೇ ಪರವಾನಗಿ ಇಲ್ಲದೆ ಕುಂದಾಪುರ ತಾಲೂಕಿನ ಹೆಸ್ಕುತ್ತೂರು ಸಾನ್ವಿ ಕೋಳಿ ಫಾರ್ಮ್ ಸಮೀಪ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನಿಂದ 13,650 ರೂ. ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. […]
ಆ.30ರಂದು ಉಡುಪಿ ಮಿಷನ್ ಆಸ್ಪತ್ರೆಯಲ್ಲಿ ಸ್ತನ ಕ್ಯಾನ್ಸರ್ ಪರೀಕ್ಷಾ ಘಟಕದ ಉದ್ಘಾಟನೆ

ಉಡುಪಿ: ಉಡುಪಿ ಸಿ.ಎಸ್.ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯ ಸ್ತನ ಕ್ಯಾನ್ಸರ್ ಪರೀಕ್ಷಾ ಘಟಕದ (ಮ್ಯಾಮೋಗ್ರಫಿ ಯುನಿಟ್) ಉದ್ಘಾಟನೆ ಇದೇ ಆಗಸ್ಟ್ 30 ರಂದು ಬೆಳಿಗ್ಗೆ 10 ಗಂಟೆಗೆ ಆಸ್ಪತ್ರೆಯ ಚಾಪೆಲ್ ನಲ್ಲಿ ನಡೆಯಲಿದೆ ಎಂದು ಮಿಷನ್ ಆಸ್ಪತ್ರೆಯ ನಿರ್ದೇಶಕ ಡಾ. ಸುಶೀಲ್ ಜತ್ತನ್ನ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಅವರು ನೂತನ ಘಟಕವನ್ನು ಉದ್ಘಾಟಿಸಲಿದ್ದಾರೆ. ಸಿಎಸ್‌ಐ, ಕೆಎಸ್ ಡಿ ಖಜಾಂಚಿ ಐವನ್ ಡಿ ಸೋನ್ಸ್ ಮುಖ್ಯ ಅತಿಥಿಗಳಾಗಿ […]
ಬೆಳ್ತಂಗಡಿ: ಎಸ್.ಐ.ಟಿ ಕಚೇರಿಗೆ ಬಂದು ದೂರು ನೀಡಿದ ಸೌಜನ್ಯ ತಾಯಿ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಬಗ್ಗೆ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಕಚೇರಿಗೆ ಆಗಮಿಸಿದ ಸೌಜನ್ಯ ತಾಯಿ ಕುಸುಮಾವತಿ ಅವರು, ಎಸ್.ಐ.ಟಿ ಅಧಿಕಾರಿಗಳಿಗೆ ಗುರುವಾರ ದೂರು ನೀಡಿದ್ದು, ದೂರನ್ನು ಸ್ವೀಕರಿಸಿದ ಅಧಿಕಾರಿಗಳು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹಿಂಬರಹ ನೀಡಿದ್ದಾರೆ. ಸೌಜನ್ಯ ತಾಯಿ ಕುಸುಮಾವತಿ ಹಾಗೂ ಮನೆಯವರು ಗುರುವಾರ ಮಧ್ಯಾಹ್ನ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದು, ಅಧಿಕಾರಿಗಳ ಸೂಚನೆಯ ಮೇರೆಗೆ ಆರಂಭದಲ್ಲಿ ಅಲ್ಲಿಂದ ಹಿಂತಿರುಗಿದ್ದರು. ಆದರೆ, ಬಳಿಕ ಅಧಿಕಾರಿಗಳ ಸೂಚನೆಯಂತೆ ಸೌಜನ್ಯ ತಾಯಿ ಕುಸುಮಾವತಿ […]
ವಾಟರ್ ಪ್ಯೂರಿಫೈಯರ್ ದುರಸ್ತಿಗೆ ಟೋಲ್ ಫ್ರೀ ಕಾಲ್ ಮಾಡುವ ಮುನ್ನ ಇರಲಿ ಎಚ್ಚರ! ಎಲ್ಲೆಡೆ ನಕಲಿ ಟೋಲ್ ಫ್ರಿ ಕಾಲ್ ಹಾವಳಿ.

ಪತ್ತನಂತಿಟ್ಟ: ಮನೆಯಲ್ಲಿ ಬಳಸುವ ನೀರು ಶುದ್ದೀಕರಿಸುವ ಯಂತ್ರದ ದುರಸ್ತಿಗಾಗಿ ಆನ್‌ಲೈನ್‌ನಲ್ಲಿ ದೊರೆತ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿದ ಕೇರಳದ 52 ವರ್ಷದ ವ್ಯಕ್ತಿ, ಬರೋಬ್ಬರಿ ₹95 ಸಾವಿರ ಕಳೆದುಕೊಂಡಿದ್ದಾರೆ. ಈ ಕುರಿತು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ. 23ರಂದು ಈ ಘಟನೆ ನಡೆದಿದೆ. ನೀರು ಶುದ್ದೀಕರಿಸುವ ಯಂತ್ರದ ದುರಸ್ತಿಗಾಗಿ ಆನ್‌ಲೈನ್‌ನಲ್ಲಿ ಹುಡುಕಾಟ ನಡೆಸಿದಾಗ ಸಿಕ್ಕ ಟೋಲ್ ಫ್ರೀ ಸಂಖ್ಯೆ ನಕಲಿ ಎಂದು ತಿಳಿಯುವ ಹೊತ್ತಿಗೆ ಸಾಕಷ್ಟು ಹಣವನ್ನು ಕಳೆದುಕೊಂಡಿರುವುದಾಗಿ ಈ ವ್ಯಕ್ತಿ ತಿಳಿಸಿದ್ದಾರೆ. ‘ಆನ್‌ಲೈನ್‌ನಲ್ಲಿ […]
17ನೇ ಮಗುವಿಗೆ ಜನ್ಮ ನೀಡಿದ ಮಹಿಳೆ: ಜೀವನನಿರ್ವಹಣೆ ಕಷ್ಟವೆಂದು ಸಹಾಯ ಯಾಚಿಸಿದ ಕುಟುಂಬಸ್ಥರು!

ರಾಜಸ್ಥಾನದ ಉದಯಪುರದಲ್ಲಿ 55 ವರ್ಷದ ಮಹಿಳೆಯೊಬ್ಬರು ಮಂಗಳವಾರ 17 ನೇ ಮಗುವಿಗೆ ಜನ್ಮ ನೀಡಿದ್ದಾರೆ. ಕುಟುಂಬವು ತೀವ್ರ ಬಡತನ ಮತ್ತು ನಿರಾಶ್ರಿತತೆಯನ್ನು ಎದುರಿಸುತ್ತಿದೆ ಎಂದು ಕುಟುಂಬಸ್ಥರು ಸಹಾಯ ಬೇಡುತ್ತಿದ್ದಾರೆ. ರೇಖಾ ಗಲಿಯಾ (55) ಈ ಹಿಂದೆ 16 ಮಕ್ಕಳಿಗೆ ಜನ್ಮ ನೀಡಿದ್ದರು ಮತ್ತು ಇತ್ತೀಚೆಗೆ ಅವರ 17 ನೇ ಮಗುವಿಗೆ ಜನ್ಮ ನೀಡಿದರು. ತಾಯಿ ಮತ್ತು ಮಗು ಪ್ರಸ್ತುತ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕಸ ಸಂಗ್ರಹಿಸುವ ಮೂಲಕ ಜೀವನ ಸಾಗಿಸುವ ಕಾವ್ರಾ ಮತ್ತು ರೇಖಾ ದಂಪತಿಗೆ […]