ತೆಕ್ಕಟ್ಟೆ ಸರಕಾರಿ ಪ.ಪೂ ಕಾಲೇಜು: ಹಳೆ ವಿದ್ಯಾರ್ಥಿಗಳಿಂದ ಶಾಲೆಗೆ ವಿವಿಧ ಪರಿಕರಗಳ ಹಸ್ತಾಂತರ

ತೆಕ್ಕಟ್ಟೆ: ಸರಕಾರಿ ಪದವಿ ಪೂರ್ವ ಕಾಲೇಜು ತೆಕ್ಕಟ್ಟೆ ಇಲ್ಲಿನ ಪ್ರೌಢಶಾಲಾ ವಿಭಾಗದಲ್ಲಿ 2009 ಮತ್ತು 10ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಂದ ಪ್ರೌಢ ಶಾಲೆಗೆ ಪ್ರೊಜೆಕ್ಟರ್,ಟ್ರ್ಯಾಕ್ ಸೂಟ್,ಕಂಪ್ಯೂಟರ್ ಮೌಸ್ ಮತ್ತು ಕೀಪ್ಯಾಡ್ ಗಳ ವಿತರಣಾ ಸಮಾರಂಭ ನಡೆಯಿತು. ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಿವರಾಮ ಶೆಟ್ಟಿ ವಿದ್ಯಾರ್ಥಿಗಳ ಕೊಡುಗೆಯನ್ನು ಶ್ಲಾಘಿಸಿದರು. ವಿಜಯ ಭಂಡಾರಿ ಪೂರ್ವ ವಿದ್ಯಾರ್ಥಿಗಳಿಂದ ನಿರಂತರವಾಗಿ ಶಾಲೆಗೆ ಸಹಾಯವಾಗಲಿ ಎಂದು ಹಾರೈಸಿದರು. ಕಾಲೇಜಿನ ಪ್ರಾಂಶುಪಾಲೆ ಶಾರದಾ ಹೊಳ್ಳ,ಸಂಸ್ಥೆಯ ಉಪ ಪ್ರಾಂಶುಪಾಲೆ […]
ಉಡುಪಿ ಹಾಗೂ ಮಣಿಪಾಲದಲ್ಲಿ ಹೊಟೇಲ್, ಅಂಗಡಿಗಳು ರಾತ್ರಿ 11 ಗಂಟೆಯವರೆಗೆ ತೆರೆದಿಡಲು ಅವಕಾಶ

ಉಡುಪಿ: ಆರ್ಥಿಕತೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಉಡುಪಿ ಹಾಗೂ ಮಣಿಪಾಲದಲ್ಲಿ ಹೊಟೇಲ್, ಅಂಗಡಿಗಳು ರಾತ್ರಿ 11 ಗಂಟೆಯವರೆಗೆ ತೆರೆದಿಡಲು ಅವಕಾಶ ಕಲ್ಪಿಸಬೇಕು ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು. ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಕಾನೂನು ಸುವ್ಯವಸ್ಥೆಯ ನೆಪವೊಡ್ಡಿ ಪ್ರಸ್ತುತ ಉಡುಪಿ, ಮಣಿಪಾಲದಲ್ಲಿ ರಾತ್ರಿ 10ಗಂಟೆಗೆ ಅಂಗಡಿ, ಹೊಟೇಲ್‌ಗಳನ್ನು ಬಂದ್ ಮಾಡಲಾಗುತ್ತಿದೆ. ಇದರಿಂದ ಜಿಲ್ಲೆಯ ಆರ್ಥಿಕತೆಗೆ ಪೆಟ್ಟು ಬೀಳುತ್ತಿದೆ. ಅದೇ ರೀತಿ ಪ್ರವಾಸಿಗರು, ರೋಗಿಯ ಸಂಬಂಧಿಕರು, ವಿದಾರ್ಥಿಗಳಿಗೆ […]
ಉಡುಪಿ: ಆ.30ರಂದು ವಿದುಷಿ ದೀಕ್ಷಾ ಅವರಿಗೆ ಸಾರ್ವಜನಿಕ ಅಭಿನಂದನೆ

ಉಡುಪಿ: ಬ್ರಹ್ಮಾವರದ ಆರೂರು ಗ್ರಾಮದ ವಿದುಷಿ ದೀಕ್ಷಾ ಅವರು 170 ಗಂಟೆಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ಮಾಡಿ ಹೊಸ ವಿಶ್ವ ದಾಖಲೆ ಮಾಡಿದ್ದಾರೆ. ಆದರೆ, ಅವರು ಒಂಭತ್ತು ದಿನಗಳಲ್ಲಿ 216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡುವ ಗುರಿ ಹೊಂದಿದ್ದು, ನಾಳೆ ಮಧ್ಯಾಹ್ನ 3.30ಕ್ಕೆ ಸಾಧನೆ ಗುರಿ ತಲುಪಲಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಾಜಿ ಶಾಸಕ ರಘುಪತಿ ಭಟ್ ಅವರು, ವಿದುಷಿ ದೀಕ್ಷಾ ಅವರು 216 ಗಂಟೆಗಳ ಗುರಿ ಸಾಧನೆ ಮಾಡುವ ಹಿನ್ನೆಲೆಯಲ್ಲಿ […]
ಆ. 31ರಂದು ಉಡುಪಿ ಕೇರಳ ಕಲ್ಚರಲ್ ಆ್ಯಂಡ್ ಸೋಶಿಯಲ್ ಸೆಂಟರ್ ನ “31ನೇ ವಾರ್ಷಿಕೋತ್ಸವ- “ಓಣಂ ಸಂಭ್ರಮ-2025”

ಉಡುಪಿ: ಉಡುಪಿ ಕೇರಳ ಕಲ್ಚರಲ್ ಆ್ಯಂಡ್ ಸೋಶಿಯಲ್ ಸೆಂಟರ್ ನ “31ನೇ ವಾರ್ಷಿಕೋತ್ಸವ” ಹಾಗೂ “ಓಣಂ ಸಂಭ್ರಮ-2025” ಕಾರ್ಯಕ್ರಮವನ್ನು ಇದೇ ಆಗಸ್ಟ್ 31ರ ಭಾನುವಾರ ಅಂಬಲಪಾಡಿಯ ಶಾಮಿಲಿ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಸುಗುಣ ಕುಮಾರ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 8ಗಂಟೆಯಿಂದ 9ಗಂಟೆಯವರೆಗೆ ಹೂವಿನ ರಂಗೋಲಿ ಸ್ಪರ್ಧೆ, ಬೆಳಿಗ್ಗೆ 9ರಿಂದ 11 ಗಂಟೆಯವರೆಗೆ ಸಾಂಸ್ಕೃತಿಕ ಸ್ಪರ್ಧೆಗಳು, ಮಧ್ಯಾಹ್ನ 12.30ರಿಂದ 2.30ರವರೆಗೆ ಕೆಸಿಎಸ್ ಸಿ ಕಲ್ಚರಲ್ ಬ್ಲಾಸ್ಟ್ ಹಾಗೂ […]
170 ಗಂಟೆ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವ ದಾಖಲೆ ಬರೆದ ವಿದುಷಿ ದೀಕ್ಷಾ ವಿ.

ಉಡುಪಿ: ಬ್ರಹ್ಮಾವರ ತಾಲೂಕು ಮುಂಡ್ಕಿನಜಡ್ಡುವಿನ ವಿದುಷಿ ದೀಕ್ಷಾ ವಿ. ಅವರು ಅಜ್ಜರಕಾಡಿನ ಡಾ. ಜಿ.ಶಂಕರ ಮಹಿಳಾ ಕಾಲೇಜಿನ ಪಿಜಿ ಸಭಾಭವನದಲ್ಲಿ ವಿಶ್ವ ದಾಖಲೆಗಾಗಿ 7 ದಿನಗಳಿಂದ ನಿರಂತರ ಭರತನಾಟ್ಯ ಪ್ರದರ್ಶನ ನೀಡುತ್ತಿದ್ದು, ಗುರುವಾರ ಸಂಜೆ 5.30ಕ್ಕೆ 170 ಗಂಟೆಗಳ ಗಡಿಯನ್ನು ದಾಟಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಈ ಹಿಂದಿನ 170 ಗಂಟೆಗಳ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆಯನ್ನು ಮೀರಿಸಿದ್ದಾರೆ. ಆಗಸ್ಟ್ 21 ರಂದು ಮಧ್ಯಾಹ್ನ 3:30ಕ್ಕೆ ನೃತ್ಯ ಪ್ರದರ್ಶನ ಪ್ರಾರಂಭವಾಗಿದ್ದು, ಒಂಭತ್ತು ದಿನಗಳಲ್ಲಿ 216 […]