ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಮಗುಚಿಬಿದ್ದ ನಾಡದೋಣಿ; ನಾಲ್ವರು ಮೀನುಗಾರರು ಅಪಾಯದಿಂದ ಪಾರು

ಉಡುಪಿ: ಸಮುದ್ರದ ಅಲೆಗಳ ಹೊಡೆತಕ್ಕೆ ದೋಣಿ ಮಗುಚಿ ಬಿದ್ದಿದ್ದು, ಏಡಿಬಲೆಗೆ ಹೋದ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಮಲ್ಪೆಯ ಸಮುದ್ರ ತೀರದ ತೊಟ್ಟಂ ಬಳಿ ಇಂದು ಮುಂಜಾನೆ ಸಂಭವಿಸಿದೆ. ತೊಟ್ಟಂ ವಾರ್ಡಿನ ನಗರ ಸಭಾ ಸದಸ್ಯರಾದ ಯೋಗೇಶ್ ಅವರು ಈಶ್ವರ್ ಮಲ್ಪೆ ತಂಡಕ್ಕೆ ಮಾಹಿತಿ ನೀಡಿದ್ದು, ಸ್ಥಳಿಯರಾದ ಪ್ರವೀಣ್, ಉದಯ್ ಅವರ ಜೊತೆ ಸೇರಿ ಲೈಫ್ ಜಾಕೇಟ್ ನೀಡಿ ನಾಲ್ವರು ಮೀನುಗಾರರ ಜೀವ ರಕ್ಷಿಸಲಾಗಿದೆ ಎಂದು ಮುಳುಗು ತಜ್ಞ ಈಶ್ವ‌ರ್ ಮಲ್ಪೆ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಕಳೆದ […]

ಉಡುಪಿ:ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಕ್ರಮ ವಹಿಸಿ : ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ: ಸರಕಾರ ಜಿಲ್ಲೆಯ ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಉದ್ದೇಶದಿಂದ ಜಲ್‌ಜೀವನ್ ಮಿಷನ್ ಅಡಿ ಮನೆ ಮನೆಗೆ ನಳ ನೀರು ಪೂರೈಸುವ ಕಾಮಗಾರಿಗಳನ್ನು ಕೈಗೊಂಡಿದೆ. ಇದು ಪ್ರತಿಯೊಂದು ಮನೆಗೂ ತಲುಪಿಸುವ ಕಾರ್ಯವಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್ ಅಭಿಯಂತರರಿಗೆ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ […]

ಸೆ.13ರಂದು ಉಡುಪಿಯಲ್ಲಿ “ಬೃಹತ್ ಉದ್ಯೋಗ ಮೇಳ”

ಉಡುಪಿ: ಉಡುಪಿ ನಗರಸಭೆ ಮತ್ತು ಮಲ್ಪೆ ಶ್ರೀ ಜ್ಞಾನ ಜ್ಯೋತಿ ಭಜನಾ ಮಂದಿರ ಸುವರ್ಣ ಸಂಭ್ರಮ ಸಮಿತಿ ಜಂಟಿ ಆಶ್ರಯದಲ್ಲಿ ಎಂಎಸ್/ಎಸ್ ಯಶಸ್ ಮ್ಯಾನೇಜ್ಮೆಂಟ್ ಸೊಲ್ಯೂಷನ್ ಪ್ರೆ.ಲಿ.ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಮತ್ತು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಸಹಕಾರದೊಂದಿಗೆ “ಬೃಹತ್ ಉದ್ಯೋಗ ಮೇಳ”ವನ್ನು ಸೆ.13ರಂದು ಬೆಳಿಗ್ಗೆ 8.30ರಿಂದ ಸಂಜೆ 5 ರವರೆಗೆ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಾಸಕ ಯಶ್ ಪಾಲ್ ಸುವರ್ಣ ಅವರು, […]

ಇಂದು(ಆ.29) ದ.ಕ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಹವಮಾನ ಇಲಾಖೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು (ಆ.29) ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ಜಿಲ್ಲೆಯ ಅಂಗನವಾಡಿ ಪ್ರಾಥಮಿಕ ಹಾಗು ಪ್ರೌಢಶಾಲೆಗಳಿಗೆ ಹಾಗು ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ(Bangala Kolli) ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವೆಡೆ ಆಗಸ್ಟ್ 31ರ ವರೆಗೆ ಭಾರೀ ಮಳೆಯಾಗುವ (Karnataka Rains) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ […]