ಕೊಲ್ಲೂರು: ಸೌರ್ಪಣಿಕ ನದಿಯಲ್ಲಿ ಕೊಚ್ಚಿ ಹೋದ ಮಹಿಳೆಯ ಮೃತದೇಹ ಪತ್ತೆ.

ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸಮೀಪದ ಸೌರ್ಪಣಿಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಬೆಂಗಳೂರು ಮೂಲದ ಮಹಿಳೆಯ ಮೃತದೇಹ ಇಂದು ಮಧ್ಯಾಹ್ನ ವೇಳೆ ಮಾವಿನಕಾರು ಬಳಿ ಪತ್ತೆಯಾಗಿದೆ. ಮೃತರನ್ನು ಬೆಂಗಳೂರಿನ ತ್ಯಾಗರಾಜ ನಗರದ ಗೋವಿಂದರಾಜು ಎಂಬವರ ಮಗಳು ವಸುಧ ಚಕ್ರವರ್ತಿ(45) ಎಂದು ಗುರುತಿಸಲಾಗಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಇವರು ಆ.27ರಂದು ಕೊಲ್ಲೂರಿಗೆ ಆಗಮಿಸಿದ್ದು, ಇದೇ ಚಿಂತೆಯಲ್ಲಿ ಸೌಪರ್ಕಣಿಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ನೀರಿನ ರಭಸಕ್ಕೆ ಮೃತದೇಹ ಕೊಚ್ಚಿಕೊಂಡು ಹೋಗಿದ್ದು, ಕಳೆದ ಎರಡು ದಿನಗಳಿಂದ […]
ಜೆಡಿಎಸ್- ಬಿಜೆಪಿಯವರು ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ: ಡಿಸಿಎಂ ಡಿಕೆ ಶಿವಕುಮಾರ್

ಉಡುಪಿ: ಜೆಡಿಎಸ್ ಮತ್ತು ಬಿಜೆಪಿಗೆ ಬೇರೆ ವೃತ್ತಿ ಇಲ್ಲ. ಎರಡೂ ಪಕ್ಷಗಳು ಬದುಕಿನ ಬಗ್ಗೆ ನೋಡಲ್ಲ. ಅವರು ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮಾವೇಶ ಮಾಡುತ್ತಿರುವ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದರು. ಕೃಷ್ಣ, ಗಣಪತಿ ಮತ್ತು ನಿಮ್ಮ ಮಾದ್ಯಮದವರ ಆಶೀರ್ವಾದ ಬೇಕು. ಎಲ್ಲರ ಆಶೀರ್ವಾದ ಬೇಕಲ್ವಾ? ಎಂದು ಮಾರ್ಮಿಕವಾಗಿ ನುಡಿದರು. ಸೆಪ್ಟೆಂಬರ್ ಅದೆನಿಲ್ಲ, ಇದು ನನ್ನ ರುಟೀನ್ ಪದ್ಧತಿ. ಕೃಷ್ಣಮಠದಿಂದ ಈ […]
ಉಡುಪಿ ಜಿಲ್ಲಾ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ಸಂಸ್ಥೆಯ ನೂತನ ಗೌರವಾಧ್ಯಕ್ಷರಾಗಿ ಸಂದೇಶ್ ಬಲ್ಲಾಳ್, ಅಧ್ಯಕ್ಷರಾಗಿ ವಿವೇಕ್ ಸುವರ್ಣ ಆಯ್ಕೆ

ಉಡುಪಿ:ಉಡುಪಿಯ ಜಿಲ್ಲಾ ಮೊಬೈಲ್ ರಿಟೈಲರ್ಸ್ ಅಸೋಯೇಷನ್ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸೆಪ್ಟಂಬರ್ 3 ರಂದು ಉಡುಪಿಯ ಟೌನ್ ಹಾಲ್ ನಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾ ಮೊಬೈಲ್ ರಿಟೈಲರ್ಸ್ ಅಸೋಯೇಷನ್ ಇದರ ನೂತನ ಗೌರವಾಧ್ಯಕ್ಷರಾಗಿ ಉಡುಪಿ ಬಲ್ಲಾಲ್ ಮೊಬೈಲ್ಸ್ ಮಾಲಕರಾದ ಶ್ರೀ ಸಂದೇಶ್ ಬಲ್ಲಾಳ್ ಆಯ್ಕೆಯಾಗಿದ್ದಾರೆ. ಗೌರವ ಸಲಹೆಗಾರರಾಗಿ ರಾಜೇಶ್ ಮೆಬಿಯನ್, ಸಲೀಂ, ಪ್ರಶಾಂತ್ ಕಿಣಿ ಆಯ್ಕೆಯಾಗಿದ್ದಾರೆ. ಅಸೋಸಿಯೇಷನ್ನಿನ ನೂತನ ಅಧ್ಯಕ್ಷರಾಗಿ ವಿವೇಕ್ ಜಿ ಸುವರ್ಣ, ಕಾರ್ಯದರ್ಶಿಯಾಗಿ ಖಾದರ್,ಖಜಾಂಚಿಯಾಗಿ ಇಮ್ರಾನ್, ಜೊತೆ ಕಾರ್ಯದರ್ಶಿಯಾಗಿ ಸುದರ್ಶನ್ ಆಯ್ಕೆಯಾಗಿದ್ದಾರೆ. […]
ಉಡುಪಿ:ವಿಜ್ಞಾನ ವಿದ್ಯಾರ್ಥಿಗಳಿಗೆ ಕೆಸಿಇಟಿ/ನೀಟ್/ಜೆಇಇ ಮಾಹಿತಿ ಕಾರ್ಯಗಾರ.

ಕಟಪಾಡಿ: ತ್ರಿಶಾ ವಿದ್ಯಾ ಪಿ ಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಆಗಸ್ಟ್ 23 ರಂದು ಕೆಸಿಇಟಿ/ನೀಟ್/ಜೆಇಇ ಮಾಹಿತಿ ಕಾರ್ಯಗಾರವು ತ್ರಿಶಾ ವಿದ್ಯಾ ಪಿಯು ಕಾಲೇಜಿನ ಕವಿರತ್ನ ಕಾಳಿದಾಸ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ ತ್ರಿಶಾ ಸಂಸ್ಥೆಯ ಅಧ್ಯಕ್ಷರು ಸಿ ಎ ಗೋಪಾಲಕೃಷ್ಣ ಭಟ್ ಅವರು ಕಾರ್ಯಕ್ರಮ ಉದ್ಘಾಟಿಸಿ ಸತತ ಪರಿಶ್ರಮ ಮಾತ್ರ ನಮ್ಮನ್ನು ಗುರಿಯ ಕಡೆಗೆ ಕೊಂಡುಯ್ಯುತ್ತವೆ ಎಂದರು ಹಾಗು ಅತಿಥಿಯಾಗಿ ಆಗಮಿಸಿದ ಡಾ ಸಿ.ಕೆ ಮಂಜುನಾಥರವರು ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯು ವಿದ್ಯಾರ್ಥಿಗೆ ಎಷ್ಟು ಮುಖ್ಯ […]
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣ; ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ.

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಹಾಲಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದೆ. ಫ್ರಾಂಚೈಸಿ ತನ್ನ ಹೊಸ ಉಪಕ್ರಮ `ಆರ್‌ಸಿಬಿ ಕೇರ್ಸ್’ ಅಡಿಯಲ್ಲಿ ಆರ್ಥಿಕ ಸಹಾಯವನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದೆ. ಆರ್‌ಸಿಬಿ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದೆ. ಜೂ.4 2025ರ ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ. ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ, ಅವರು ನಮ್ಮ ಕುಟುಂಬದ ಸದಸ್ಯರಾಗಿದ್ದರು. ನಮ್ಮ ಹೃದಯದ […]