ಜನತಾ ಪಿಯು ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ.

ಹೆಮ್ಮಾಡಿ: ಶಿಕ್ಷಣ ಎಂಬುದು ಬೆಳಕು ಆ ಬೆಳಕು ಹಂಚಿದಷ್ಟು ಅದು ಬೆಳೆಗುತ್ತದೆ ಆ ಕೆಲಸವನ್ನು ಈ ಸಂಸ್ಥೆ ನಿರಂತರವಾಗಿ ಮಾಡುತ್ತಾ ಬಂದಿದೆ. ಗೆದ್ದರೆ ಖುಷಿ ಪಡಿ ಸೋತರೆ ಅನುಭವದ ಕಿಡಿ ಪ್ರಜ್ವಲಿಸಲಿ ಎಂದು ರಾಷ್ಟ್ರೀಯ ಈಜುಪಟು ಗಿನ್ನಿಸ್ ದಾಖಲೆ ಖ್ಯಾತಿಯ ನಾಗರಾಜ್ ಖಾರ್ವಿ ಕಂಚಗೋಡು ಹೇಳಿದರು. ಅವರು ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ, ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ಉಡುಪಿ ಇವರ ಆಸರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಬಾಲಕಿಯರ […]
ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ‘ಜಿಲ್ಲಾ ಬ್ಯಾಂಕಿನ ತೃತೀಯ ಪ್ರಶಸ್ತಿ’

ಮಂಗಳೂರು: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇವರು 2024- 2025 ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆಗೈದು ಕಾರ್ಯನಿರ್ವಹಿಸುತ್ತಿರುವ ಸಹಕಾರಿ ಸಂಘಗಳಿಗೆ ನೀಡುತ್ತಿರುವ “ಅ” ವರ್ಗದ ಸಹಕಾರಿ ಸಂಘಗಳಲ್ಲಿ ‘ಜಿಲ್ಲಾ ಬ್ಯಾಂಕಿನ ತೃತೀಯ ಪ್ರಶಸ್ತಿಗೆ ‘ ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘವು ಪ್ರಸ್ತುತ ಸಾಲಿನಲ್ಲಿ ಆಯ್ಕೆಯಾಗಿರುತ್ತದೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಆಗಸ್ಟ್ 30ರಂದು ಜರುಗಿದ ಮಹಾಸಭೆಯಲ್ಲಿ ಅಧ್ಯಕ್ಷರಾದ ಡಾ| ಎಂ.ಎನ್.ರಾಜೇಂದ್ರ ಕುಮಾರ್ ರವರು ಸಂಘವು ಅಭಿವೃದ್ಧಿಯಲ್ಲಿ ಉತ್ತುಂಗಕ್ಕೇರಲಿ ಎಂದು ಪ್ರಶಂಸಿಸಿ ಸಂಘದ […]
ಉಡುಪಿ: ಸಿಎಸ್‌ಐ ಲೊಂಬಾರ್ಡ್ ಸ್ಮಾರಕ ಆಸ್ಪತ್ರೆ (ಮಿಷನ್)ಯ ಸ್ತನ ಕ್ಯಾನ್ಸರ್ ಪರೀಕ್ಷಾ ಘಟಕ ಉದ್ಘಾಟನೆ

ಉಡುಪಿ: ಇಂದು ಮಹಿಳೆಯರಲ್ಲಿ ಬೇರೆ ಎಲ್ಲ ಕ್ಯಾನ್ಸರ್‌ಗಿಂತ ಸ್ತನ ಕ್ಯಾನ್ಸರ್‌ಗಳೇ ಹೆಚ್ಚಾಗಿ ಕಂಡುಬರುತ್ತಿದೆ. ಹಾಗಾಗಿ ಮಹಿಳೆಯರು ಇದರ ಬಗ್ಗೆ ನಿರ್ಲಕ್ಷ್ಯ ಮಾಡದೇ ಒಂದು ಅಥವಾ ಎರಡು ವರ್ಷಗಳಿಗೊಮ್ಮೆ ತಪಾಸಣೆಗೆ ಒಳಪಡಿಸಿಕೊಳ್ಳಬೇಕು ಎಂದು ಸಿಎಸ್‌ಐ ಲೊಂಬಾರ್ಡ್ ಸ್ಮಾರಕ ಆಸ್ಪತ್ರೆಯ ನಿರ್ದೇಶಕ ಡಾ.ಸುಶೀಲ್ ಜತ್ತನ್ನ ಹೇಳಿದರು. ಉಡುಪಿಯ ಸಿಎಸ್‌ಐ ಲೊಂಬಾರ್ಡ್ ಸ್ಮಾರಕ ಆಸ್ಪತ್ರೆ (ಮಿಷನ್ ಆಸ್ಪತ್ರೆ)ಯಲ್ಲಿ ಸಭಾಂಗಣದಲ್ಲಿ ಶನಿವಾರ ನಡೆದ ಸ್ತನ ಕ್ಯಾನ್ಸರ್ ಪರೀಕ್ಷಾ ಘಟಕದ (ಮ್ಯಾಮೋಗ್ರಫಿ ಯುನಿಟ್) ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಕೇಂದ್ರವನ್ನು […]
ಬೇರೆ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಸುಟ್ಟು ಹಾಕಿದ ಅಪ್ಪ!

ಕಲಬುರಗಿ: ಅನ್ಯಜಾತಿ ಯುವಕನನ್ನು ಲವ್ ಮಾಡಿದ್ದಕ್ಕೆ ತಂದೆ ತನ್ನ ಸ್ವಂತ 18 ವರ್ಷದ ಮಗಳನ್ನು ಕೊಂದು ಸುಟ್ಟು ಹಾಕಿರುವಂತಹ ಘಟನೆ ಕಲಬುರಗಿ ತಾಲೂಕಿನ ಮೇಳಕುಂದಾ ಗ್ರಾಮದಲ್ಲಿ ನಡೆದಿದೆ. ಕವಿತಾ ಕೊಲೆಯಾದ ಮಗಳು. ಸದ್ಯ ಫರಹತಬಾದ್ ಠಾಣೆ ಪೊಲೀಸರು ತಂದೆ ಶಂಕರ್ ಕೊಳ್ಳುರು ಬಂಧಿಸಿದ್ದಾರೆ. ಕೊಲೆಗೆ ಸಾಥ್ ನೀಡಿದ್ದ ಶರಣು ಮತ್ತು ದತ್ತಪ್ಪ ಬಂಧನಕ್ಕೆ ಬಲೆ ಬಿಸಿದ್ದಾರೆ. ಲಿಂಗಾಯತ ಸಮಾಜದ ಯುವತಿ ಅದೇ ಗ್ರಾಮದ ಕುರುಬ ಸಮಾಜದ ಯುವಕ ಮಾಳಪ್ಪ ಪೂಜಾರಿಯನ್ನು ಪ್ರೀತಿಸುತ್ತಿದ್ದಳು. ಕಲಬುರಗಿ ನಗರಕ್ಕೆ ಪಿಯುಸಿ ಅಧ್ಯಯನಕ್ಕೆ […]
ತೆಕ್ಕಟ್ಟೆ ಸರಕಾರಿ ಪ.ಪೂ ಕಾಲೇಜು: ಹಳೆ ವಿದ್ಯಾರ್ಥಿಗಳಿಂದ ಶಾಲೆಗೆ ವಿವಿಧ ಪರಿಕರಗಳ ಹಸ್ತಾಂತರ

ತೆಕ್ಕಟ್ಟೆ: ಸರಕಾರಿ ಪದವಿ ಪೂರ್ವ ಕಾಲೇಜು ತೆಕ್ಕಟ್ಟೆ ಇಲ್ಲಿನ ಪ್ರೌಢಶಾಲಾ ವಿಭಾಗದಲ್ಲಿ 2009 ಮತ್ತು 10ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಂದ ಪ್ರೌಢ ಶಾಲೆಗೆ ಪ್ರೊಜೆಕ್ಟರ್,ಟ್ರ್ಯಾಕ್ ಸೂಟ್,ಕಂಪ್ಯೂಟರ್ ಮೌಸ್ ಮತ್ತು ಕೀಪ್ಯಾಡ್ ಗಳ ವಿತರಣಾ ಸಮಾರಂಭ ನಡೆಯಿತು. ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಿವರಾಮ ಶೆಟ್ಟಿ ವಿದ್ಯಾರ್ಥಿಗಳ ಕೊಡುಗೆಯನ್ನು ಶ್ಲಾಘಿಸಿದರು. ವಿಜಯ ಭಂಡಾರಿ ಪೂರ್ವ ವಿದ್ಯಾರ್ಥಿಗಳಿಂದ ನಿರಂತರವಾಗಿ ಶಾಲೆಗೆ ಸಹಾಯವಾಗಲಿ ಎಂದು ಹಾರೈಸಿದರು. ಕಾಲೇಜಿನ ಪ್ರಾಂಶುಪಾಲೆ ಶಾರದಾ ಹೊಳ್ಳ,ಸಂಸ್ಥೆಯ ಉಪ ಪ್ರಾಂಶುಪಾಲೆ […]