ಮಂಗಳೂರು: ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿ ತಂದೆಗೆ 5 ವರ್ಷ ಕಠಿಣ ಜೈಲು ಶಿಕ್ಷೆ – ನ್ಯಾಯಾಲಯ ತೀರ್ಪು

ಮಂಗಳೂರು: ಮೂರೂವರೆ ವರ್ಷ ಪ್ರಾಯದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ತಂದೆಯ ಮೇಲಿನ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಫ್‌ಸಿ-2 (ಪೊಕ್ಕೊ)ನ ನ್ಯಾಯಾಧೀಶಕರು 5 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಮೂಲತಃ ರಾಣೆಬೆನ್ನೂರು ಬೈಲೂರಿನ ಪ್ರಸಕ್ತ ಬಜ್ಜೆಯ ನಿವಾಸಿಯಾಗಿರುವ 34 ವರ್ಷ ಪ್ರಾಯದ ವ್ಯಕ್ತಿ ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ. 2024ರ ಡಿ.18ರಂದು ಆರೋಪಿ ತಂದೆಯು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ […]
ಅತೀಯಾದ ವಾಯುಮಾಲಿನ್ಯದಿಂದ ನಮ್ಮ ಜೀವಿತಾವಧಿಯ 3.5 ವರ್ಷ ಇಳಿಕೆ: ಅಧ್ಯಯನ ಬಿಚ್ಚಿಟ್ಟ ಭಯಾನಕ ಸತ್ಯ!

ನವದೆಹಲಿ: ನಗರ ಪ್ರದೇಶಗಳಲ್ಲಿ ವಾಯುಮಾಲಿನ್ಯ ಬಹುದೊಡ್ಡ ಸಮಸ್ಯೆ ವಾಯು ಮಾಲಿನ್ಯವು ಭಾರತದಲ್ಲಿ ಮನುಷ್ಯರ ಸರಾಸರಿ ಜೀವಿತಾವಧಿಯನ್ನು ಮೂರೂವರೆ ವರ್ಷಗಳಷ್ಟು ಕಡಿಮೆ ಮಾಡುತ್ತಿದೆ, ವಾಯುಮಾಲಿನ್ಯದಿಂದ ಉಂಟಾಗುವ ತೊಂದರೆ ಮಕ್ಕಳು ಮತ್ತು ತಾಯಿಯ ಅಪೌಷ್ಟಿಕತೆಯ ಪರಿಣಾಮಕ್ಕಿಂತ ಸುಮಾರು ಎರಡು ಪಟ್ಟು ಮತ್ತು ಅಸುರಕ್ಷಿತ ನೀರು, ನೈರ್ಮಲ್ಯ ಸಮಸ್ಯೆಯಿಂದ ಐದು ಪಟ್ಟು ಹೆಚ್ಚು ಎಂದು ಚಿಕಾಗೋ ವಿಶ್ವವಿದ್ಯಾಲಯದ (EPIC) ಎನರ್ಜಿ ಪಾಲಿಸಿ ಇನ್ಸಿಟ್ಯೂಟ್ ನಡೆಸಿದ ಅಧ್ಯಯನದಿಂದ ತಿಳಿದುಬಂದಿದೆ. ಮಕ್ಕಳು ಮತ್ತು ತಾಯಿಯ ಅಪೌಷ್ಟಿಕತೆಯಿಂದ ಮನುಷ್ಯ ಜೀವನದ ಸರಾಸರಿ ಜೀವಿತಾವಧಿಯಲ್ಲಿ 1.6 ವರ್ಷಗಳ […]
ಉಡುಪಿ:ಸಂಗೀತದಿಂದ ಆರೋಗ್ಯವಂತ ಸಮಾಜ ನಿರ್ಮಾಣ : ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ

ಉಡುಪಿ: ಸಂಗೀತವು ಭಾರತೀಯ ಸಂಸ್ಕೃತಿಯನ್ನು ಬೆಳೆಸುವುದರ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುತ್ತದೆ ಎಂದು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಗುರುವಾರ ಕುಂದಾಪುರದ ಭಂಡಾರ್‌ಕರ‍್ಸ್ ಕಾಲೇಜಿನ ಆರ್.ಎನ್ ಶೆಟ್ಟಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಂಡಾರ್‌ಕರ‍್ಸ್ ಕಾಲೇಜು ಐ.ಕ್ಯೂ.ಎ.ಸಿ ವಿಭಾಗದ ಸಹಯೋಗದಿಂದ ನಡೆದ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ “ಹಾಡಿರೇ ರಾಗಗಳ ತೂಗಿರೇ ದೀಪಗಳ” ಸಂಗೀತ ಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ನಮ್ಮ ದೇಶಿಯ ಕಲೆ ಉಳಿವಿಗೆ ಹಾಗೂ ನಮ್ಮ ಸಂಸ್ಕೃತಿಯನ್ನು […]
ಉಡುಪಿ:ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಮ್ಯಾರಥಾನ್

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಡಾ.ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು (ಎನ್.ಎಸ್.ಎಸ್) ಅಜ್ಜರಕಾಡು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಹಾಗೂ ಉಡುಪಿ ಜಿಲ್ಲಾ ಅಮೆಚುರ್ ಅಥ್ಲೆಟಿಕ್ಸ್ ಅಸೋಶಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಹೆಚ್.ಐ.ವಿ /ಏಡ್ಸ್ ಕುರಿತು ಜನ ಜಾಗೃತಿ ಮೂಡಿಸುವ ಪ್ರಯುಕ್ತ ಜಿಲ್ಲಾ […]
ಉಡುಪಿ:ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಜಿಲ್ಲೆಯ ಪ್ರವಾಸಿ ತಾಣಗಳ ಸೌಂದರ್ಯವನ್ನು ಸವಿಯಲು ಅನುಕೂಲವಾಗುವಂತೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಈಗಾಗಲೇ ಜಾಗಗಳನ್ನು ಗುರುತಿಸಿರುವ ಕೋಡಿ ಕುಂದಾಪುರ ಬೀಚ್, ಕೋಡಿ ಕನ್ಯಾಣ ಬೀಚ್ ಹಾಗೂ ತ್ರಾಸಿ-ಮರವಂತೆ ಬೀಚ್ […]