ಉಡುಪಿ: ಬಳಕೆದಾರರ ವೇದಿಕೆಯ ಹಿರಿಯ ವಿಶ್ವಸ್ಥ ಎ.ಪಿ.ಕೊಡಂಚ ನಿಧನ

ಉಡುಪಿ: ಉಡುಪಿ ಬಳಕೆದಾರರ ವೇದಿಕೆಯ ಹಿರಿಯ ವಿಶ್ವಸ್ಥ ಅಲೆವೂರು ಪದ್ಮನಾಭ ಕೊಡಂಚ(89) ಅಗಸ್ಟ್ 31ರಂದು ತಡರಾತ್ರಿ ಕೊಳ್ಳೇಗಾಲದ ತಮ್ಮ ಪುತ್ರಿಯ ಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಈರ್ವರು ಪುತ್ರರು, ಈರ್ವರು ಪುತ್ರಿಯರನ್ನು ಅಗಲಿದ್ದಾರೆ. ಕಾರ್ಪೋರೇಶನ್ ಬ್ಯಾಂಕ್‌ನಲ್ಲಿ ಸುಮಾರು 39 ವರ್ಷಗಳ ಸೇವೆ ಸಲ್ಲಿಸಿ, ಜನರಲ್ ಮೇನೇಜರ್ ಹುದ್ದೆಯಿಂದ ನಿವೃತ್ತಿ ಹೊಂದಿದ ನಂತರ ಉಡುಪಿ ಬಳಕೆದಾರರ ವೇದಿಕೆಯಲ್ಲಿ ಸುಮಾರು 29 ವರ್ಷಗಳ ಕಾಲ ವಿಶ್ವಸ್ಥರಾಗಿ ಸೇವೆ ಸಲ್ಲಿಸಿ ಸಾವಿರಾರು ಮಂದಿ ಸಂತ್ರಸ್ತ ಗ್ರಾಹಕರಿಗೆ ಮಾರ್ಗದರ್ಶನ ನೀಡಿದ್ದರು. ಗ್ರಾಹಕರಿಗಾಗಿ ಅನೇಕ […]

ಬೊಮ್ಮರಬೆಟ್ಟು ಗ್ರಾಪಂ ಉಪಾಧ್ಯಕ್ಷರ ಭ್ರಷ್ಟಾಚಾರ, ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಬೊಮ್ಮರಬೆಟ್ಟು ಗ್ರಾಪಂ ಉಪಾಧ್ಯಕ್ಷರು ಹಾಗೂ ಅವರ ಸಹಚರರು ಭ್ರಷ್ಟಾಚಾರ ಹಾಗೂ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ಉತ್ತರ) ಬೊಮ್ಮರಬೆಟ್ಟು ಗ್ರಾಮೀಣ ಕಾಂಗ್ರೆಸ್ ಸಮಿತಿ, ಹಿರಿಯಡಕ ಇದರ ವತಿಯಿಂದ ಹಿರಿಯಡಕದ ಗ್ರಾಪಂ ವಠಾರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಉಡುಪಿ ತಾಲೂಕು ಅಧ್ಯಕ್ಷ ರಮೇಶ್ ಕಾಂಚನ್ ಅವರು, ಬೊಮ್ಮರಬೆಟ್ಟು ಗ್ರಾಪಂ ವ್ಯಾಪ್ತಿಯಲ್ಲಿ ಉದ್ಯಮ, ಫ್ಯಾಕ್ಟರಿ ಆರಂಭಿಸಲು ಹೊರ ಊರಿಗಳಿಂದ […]

ಉಡುಪಿ: ಅಂಬಲಪಾಡಿಯಲ್ಲಿ ಭೀಕರ ಅಪಘಾತ; ಬೃಹತ್ ಗಾತ್ರದ ಟ್ರಕ್ ಹರಿದು ಬೈಕ್ ಸವಾರ ಮೃತ್ಯು.

ಉಡುಪಿ: ಟ್ರಕ್ ನ ಚಕ್ರದಡಿಗೆ ಸಿಲುಕಿ ಬೈಕ್ ಸವಾರನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ ಸೋಮವಾರ ಸಂಜೆ ಸಂಭವಿಸಿದೆ.ಅಪಘಾತದ ರಭಸಕ್ಕೆ ಮೃತ ಸವಾರನ ತಲೆ ಭಾಗವು ಛಿದ್ರಗೊಂಡಿದೆ. ಅಪಘಾತ ಸ್ಥಳದಿಂದ ಸುಮಾರು ನೂರು ಮೀಟರ್ ದೂರ ಸಾವರನನ್ನು ಟ್ರಕ್ ಎಳೆದುಕೊಂಡು ಹೋಗಿದೆ.ಮೃತನನ್ನು ದೆಂದೂರುಕಟ್ಟೆಯ ಪ್ರದೀಪ (38) ಎಂದು ಗುರುತಿಸಲಾಗಿದೆ. ಈತ ಅಂಬಲಪಾಡಿ ಸುರಭಿ ಅಟೋಮೊಬೈಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕೆಲಸ‌ ಮುಗಿಸಿ ಮನೆಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳದಲ್ಲಿದ್ದು ಸಂಚಾರಿ ಪೋಲಿಸ್ […]

ಈ ನಟಿ ನೋಡೋಕೆ ಸಿಂಪಲ್, ಆದ್ರೆ ಈಕೆ ಬಳಸೋ ಬ್ಯಾಗ್ ಬೆಲೆಗೆ ದುಬಾರಿ ಮನೆಯನ್ನೇ ಕೊಳ್ಳಬಹುದು!

ಖ್ಯಾತ ನಟಿ ನಯನತಾರಾ  ಐಷಾರಾಮಿ ಜೀನವಶೈಲಿಯ ಜೊತೆ ಆಗಾಗ ಸುದ್ದಿಯಾಗುತ್ತಾರೆ. ನಟಿ ಐಷಾರಾಮಿ ಕಾರುಗಳ ಸಂಗ್ರಹದ ಜೊತೆಗೆ ಅವರು ಖಾಸಗಿ ಜೆಟ್ ಕೂಡ ಹೊಂದಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ. ಈಗ ಅವರು ಬಳಸುವ ಹ್ಯಾಂಡ್ ಬ್ಯಾಗ್ ಅತ್ಯಂತ ಬೆಳೆಬಾಳುತ್ತೆ ಎನ್ನುವ ವರದಿಯಾಗಿದೆ. ದುಬಾರಿ ಬೆಲೆಯ ಹ್ಯಾಂಡ್‌ಬ್ಯಾಗ್‌ಗಳ ಸಂಗ್ರಹ ಕೂಡ ಅವರಲ್ಲಿದೆಯಂತೆ. ನಯನತಾರಾ ಬಳಿ ಪ್ರಾಡಾ ಎಂಬ ಅಂತರರಾಷ್ಟ್ರೀಯ ಬ್ರ್ಯಾಂಡ್‌ನ ಬ್ಯಾಗ್ ಕೂಡ ಇದ್ದು, ಈ ಸಣ್ಣ ಹ್ಯಾಂಡ್‌ಬ್ಯಾಗ್‌ನ ಬೆಲೆ ಬರೋಬ್ಬರಿ ಎರಡು ಲಕ್ಷ ರೂಪಾಯಿ.  ಪುಟ್ಟದ್ದೊಂದು […]