ಲಿವ್ ಇನ್ ರಿಲೇಷನ್ ನಲ್ಲಿ ಬಿರುಕು, ಪ್ರೇಯಸಿಯ ಹತ್ಯೆಗೈದ ಕ್ಯಾಬ್ ಚಾಲಕ!

ಬೆಂಗಳೂರಿನಲ್ಲಿ ಲಿವ್-ಇನ್ ಸಂಬಂಧಕ್ಕೆ ಒಪ್ಪಿಕೊಂಡು, ಜೊತೆಗಿದ್ದ ಪ್ರೇಯಸಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವ್ಯಕ್ತಿಯೊಬ್ಬ, ಇದೀಗ ಆಕೆಯ ಸಾವಿಗೆ ಕಾರಣವಾದ ಘಟನೆ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ವನಜಾಕ್ಷಿ (35) ಎಂದು ಗುರುತಿಸಲಾಗಿದೆ. ತನ್ನ ಲಿವ್-ಇನ್ ಪಾರ್ಟ್ನರ್ನಿಂದ ಮೃತಪಟ್ಟ ದುರ್ದೈವಿ. ಬೆಂಕಿಯಲ್ಲಿ ಬೆಂದು ಹೋಗಿದ್ದ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ತುರ್ತು ಚಿಕಿತ್ಸೆ ಕೊಡಿಸಲಾಯಿತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಬೇರೆ ವ್ಯಕ್ತಿಯೊಂದಿಗೆ ಸ್ನೇಹವೇ ಕಾರಣ:ಆರೋಪಿ ವಿಠಲ್, ವೃತ್ತಿಯಲ್ಲಿ ಓರ್ವ ಕ್ಯಾಬ್ ಚಾಲಕ. ಈತನಿಗೆ […]
ಉಡುಪಿ:ಶ್ರೀಕೃಷ್ಣ ಮಠದಲ್ಲಿ ಮನ್ಯು- ಮಧ್ವ ಇವರಿಂದ ವೇಣುವಾದನ ಕಾರ್ಯಕ್ರಮ

ಉಡುಪಿ:ದಿನಾಂಕ 29.08.2025 ರಂದು ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ, ಉಡುಪಿ, ವಿಶ್ವಗೀತಾ ಪರ್ಯಾಯ 2024-2025 ಶ್ರೀ ಕೃಷ್ಣ ಮಠದ ಸೂರ್ಯಶಾಲೆಯಲ್ಲಿ ವಿಶೇಷ ವೇಣುವಾದನ ಮಂಡಲೋತ್ಸವದ ಅಂಗವಾಗಿ ಮನ್ಯು ಮಧ್ವ ಇವರಿಂದ ವೇಣುವಾದನ ಕಾರ್ಯಕ್ರಮ ನೆರವೇರಿತು.
ಕಾರ್ಕಳ ಕ್ರೈಸ್ಟ್ಕಿಂಗ್ : ಕ್ರಿಕೆಟ್ ಪಂದ್ಯಾಟದಲ್ಲಿ ಪ್ರಾಥಮಿಕ ಶಾಲಾಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ.

ಕಾರ್ಕಳ : ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕಾರ್ಕಳ ಇವರಸಹಯೋಗದಲ್ಲಿ ಶ್ರೀಮದ್ ಭುವನೇಂದ್ರ ಪ್ರೌಢಶಾಲೆಕಾರ್ಕಳ ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕಶಾಲಾ ವಿಭಾಗದ ಬಾಲಕರ ಕ್ರಿಕೆಟ್ ಪಂದ್ಯಾಟದಲ್ಲಿ ಕಾರ್ಕಳಕ್ರೆöÊಸ್ಟ್ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟದಕ್ರಿಕೆಟ್ ಪಂದ್ಯಾಟಕ್ಕೆ ಆಯ್ಕೆಗೊಂಡಿದೆ. ದೈಹಿಕ ಶಿಕ್ಷಣ ಶಿಕ್ಷಕಪ್ರಕಾಶ್ ನಾಯ್ಕ್ ತಂಡವನ್ನು ತರಬೇತುಗೊಳಿಸಿದ್ದರು.
ಕುಂದಾಪುರ ವೆಂಕಟರಮಣ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸನ್ವಿತ್ ಕುಸ್ತಿ ಪಂದ್ಯಾಟದಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ.

ಕುಂದಾಪುರ : ಅಜ್ಜರಕಾಡಿನಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸನ್ವಿತ್. G. ಖಾರ್ವಿ 60 ಕೆಜಿ ವಿಭಾಗದ ಗ್ರೀಕೋ ರೋಮನ್ ಕುಸ್ತಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪುರ. ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿನಿಯರು ಕುಸ್ತಿ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.

ಕುಂದಾಪುರ : ಆಗಸ್ಟ್ 30 ರಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಆಶ್ರಯದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಪ್ರತಿನಿಧಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೆ.ಶ್ರೀನಿತಾ. ಎಸ್ ಕಾಮತ್ 53 ಕೆಜಿ ವಿಭಾಗದಲ್ಲಿ ಚಿನ್ನದ ಪದಕ , ಅಧಿತಿ 65 ಕೆ ಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಯರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, […]