ಉಡುಪಿ:ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯ ಸದೃಢ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯನು ಆರೋಗ್ಯವಾಗಿರುತ್ತಾನೆ. ಪ್ರಸ್ತುತ ದಿನಮಾನಗಳಲ್ಲಿ ಯುವಜನರು ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಇದರಿಂದ ಹೊರಬರಲು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ರಿಟ್ ಅರ್ಜಿ (ಸಿವಿಲ್) ಪ್ರಕರಣದಲ್ಲಿ ನೀಡಿರುವ ನಿರ್ದೇಶನದನ್ವಯ “ಏಕರೂಪದ ಮಾನಸಿಕ ಆರೋಗ್ಯ ನೀತಿ”ಯನ್ನು ರೂಪಿಸುವ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯ […]

ಉಚಿತ ಉಪಕರಣ ಪಡೆಯಲು ಅರ್ಜಿ ಆಹ್ವಾನ

ಉಡುಪಿ: ಗ್ರಾಮಾಂತರ ಕೈಗಾರಿಕೆ ವತಿಯಿಂದ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ ಕುಶಲ ಕರ್ಮಿಗಳಿಗೆ ಜಿಲ್ಲಾ ಔದ್ಯಮಿಕ ಕೇಂದ್ರ / ವೃತ್ತಿಪರ ಯೋಜನೆಯಡಿ ವಿವಿಧ ಕಸುಬುಗಳಾದ ಗಾರೆ ಕೆಲಸ, ಮರಗೆಲಸ, ದೋಬಿ, ಕಮ್ಮಾರಿಕೆ, ಪ್ಲಂಬರ್, ಎಲೆಕ್ಟ್ರಿಷಿಯನ್, ಕ್ಷೌರಿಕ, ಬ್ಯೂಟಿಪಾರ್ಲರ್ ಹಾಗೂ ಟೈಲರಿಂಗ್ ವೃತ್ತಿಯ ಗರಿಷ್ಠ 8000 ರೂ. ಮೊತ್ತದ ಉಪಕರಣಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಉಪಕರಣಗಳನ್ನು ಪಡೆಯಲಿಚ್ಛಿಸುವ ಗ್ರಾಮೀಣ ಪ್ರದೇಶದ ಅರ್ಹರು ವೆಬ್‌ಸೈಟ್ udupi.nic.in ಲಿಂಕ್ ಮೂಲಕ ಅರ್ಜಿಗಳನ್ನು ಭರ್ತಿ ಮಾಡಿ, ಗ್ರಾಮ ಪಂಚಾxxxಯತ್ ಅಭಿವೃದ್ಧಿ ಅಧಿಕಾರಿಗಳ ದೃಢೀಕರಣಗೊಂದಿಗೆ ಸೆಪ್ಟಂಬರ್ 15 […]