ರಾಜ್ಯ ಸರ್ಕಾರದಿಂದ ಉಚಿತ ಡ್ರೋನ್ ತರಬೇತಿ; ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ!

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಡ್ರೋನ್ ಉಪಕರಣವನ್ನು ಉಪಯೋಗಿಸುವ ಸಂಬಂಧ 15 ದಿನಗಳ ವಸತಿಯುತ ತರಬೇತಿ ನೀಡಲಿದೆ. ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ 2025-26ನೇ ಸಾಲಿನ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಡೋನ್ ಉಪಕರಣವನ್ನು ಲಾಜಿಸ್ಟಿಕ್ ಸರ್ವೇಲೆನ್ಸ್ (Logistics Surveillance), ಕೃಷಿ ಮತ್ತು ವಿವಿಧ ಕ್ಷೇತ್ರಗಳಲ್ಲಿ ಉಪಯೋಗಿಸುವ ಸಂಬಂಧ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗಗಳು, ಬೆಂಗಳೂರು ಮತ್ತು ಮೈಸೂರು ಕಂದಾಯ ವಿಭಾಗಗಳಿಗೆ ಪ್ರತ್ಯೇಕವಾಗಿ […]
ಮಣಿಪಾಲ: ಅಂಗಾಂಗ ದಾನದ ಜಾಗೃತಿಗಾಗಿ ವಾಕಥಾನ್

ಮಣಿಪಾಲ: ಅಂಗಾಂಗದಾನ, ಚರ್ಮದಾನ ಮತ್ತು HPV ಚುಚ್ಚುಮದ್ದು ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಣಿಪಾಲದಲ್ಲಿ ವಾಕಥಾನ್ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವನ್ನು ರೋಟರಿ ಜಿಲ್ಲೆ 3182, ರೋಟರಿ ಕ್ಲಬ್ ಮಣಿಪಾಲ ಟೌನ್ ಮತ್ತು ಕಸ್ತೂರ್ಬ ಆಸ್ಪತ್ರೆ ಮಣಿಪಾಲ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದರು. ಕೆಎಂಸಿ ಕಾಲೇಜು ಆವರಣದಲ್ಲಿ ಬೆಳಗ್ಗೆ 8 ಗಂಟೆಗೆ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ರೋಟರಿ ಕ್ಲಬ್ ಮಣಿಪಾಲ ಟೌನ್‌ನ ಅಧ್ಯಕ್ಷ ಡಾ. ದೀಪಕ್ ರಾಮ್ ಬಾಯಿರಿ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಜಿಲ್ಲೆ 3182ರ ಜಿಲ್ಲಾ ಗವರ್ನರ್ […]
ಸೌಜನ್ಯ ಹೆಸರು ಬಳಸಿಕೊಂಡು ನಾವು ಹಣ ಮಾಡಿದ್ದೇವೆ ಎಂದು ನಿಮ್ಮ ಪಕ್ಷದವರೇ ಟೀಕಿಸಿದರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಸೌಜನ್ಯ ತಾಯಿ ತರಾಟೆ

ಮಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಕೊಲೆಯಾದ ಸೌಜನ್ಯ ಮನೆಗೆ ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೇಟಿ ನೀಡಿ, ನ್ಯಾಯಕ್ಕಾಗಿ ಕುಟುಂಬ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಸೆ.1 ರಂದು ಧರ್ಮಸ್ಥಳದಲ್ಲಿ ನಡೆದ ಬಿಜೆಪಿ ಸಮಾವೇಶದ ಬಳಿಕ ವಿಜಯೇಂದ್ರ ಅವರು ನೇರವಾಗಿ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿರುವ ಸೌಜನ್ಯ ಮನೆಗೆ ತೆರಳಿದರು. ಅಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರೊಂದಿಗೆ ಮಾತುಕತೆ ನಡೆಸಿದರು. “ನ್ಯಾಯ ಕೋರಿದ್ದಕ್ಕಾಗಿಯೇ ನಮ್ಮ ಮೇಲೆ ದಬ್ಬಾಳಿಕೆ ಮಾಡಲಾಗುತ್ತಿದೆ. ನಿಮ್ಮ ಪಕ್ಷದವರೇ ನಾವು ದೊಡ್ಡ […]
ಸೆ.3ರಂದು ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಅವರ ಪಟ್ಟಾಭಿಷೇಕದ 17ನೇ ವರ್ಧಂತ್ಯುತ್ಸವ

ಉಡುಪಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಅವರ ಪಟ್ಟಾಭಿಷೇಕದ 17ನೇ ವರ್ಧಂತ್ಯುತ್ಸವ ವೈದಿಕ ವಿಧಿ ವಿಧಾನಗಳೊಂದಿಗೆ ಸೆ.3ರಂದು ಬೆಳಿಗ್ಗೆ 11ಗಂಟೆಗೆ ಧರ್ಮಸ್ಥಳದ ಶ್ರೀರಾಮಕ್ಷೇತ್ರ ಮಹಾಸಂಸ್ಥಾನದಲ್ಲಿ ನಡೆಯಲಿದೆ ಎಂದು ಶ್ರೀರಾಮಕ್ಷೇತ್ರ ಮಹಾಸಂಸ್ಥಾನ ಟ್ರಸ್ಟ್ ನ ಗೌರವಾಧ್ಯಕ್ಷರು, ಮಾಜಿ ಶಾಸಕ ಕೆ. ರಘುಪತಿ ಭಟ್ ತಿಳಿಸಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಾಭಿಷೇಕದ 17ನೇ ವರ್ಧಂತ್ಯುತ್ಸವ ಸಮಾರಂಭದಲ್ಲಿ ರಾಜ್ಯದ ವಿವಿಧ ಸಚಿವರು, ಶಾಸಕರು, ಸಂಸದರು, […]
ಕುಂದಾಪುರ:ಸುಜ್ಞಾನ ಪಿಯು ಕಾಲೇಜು:’ತೃಪ್ತಿ’ ಎಂಬ ಮೌಲ್ಯ ವ್ಯಕ್ತಿತ್ವದ ಭಾಗವಾಗಲಿ; ನ್ಯಾ. ಸಂತೋಷ್ ಹೆಗ್ಡೆ

ಕುಂದಾಪುರ: ವ್ಯಕ್ತಿತ್ವದಲ್ಲಿ ತೃಪ್ತಿ ಎನ್ನುವ ಮೌಲ್ಯವನ್ನು ಅಳವಡಿಸಿಕೊಂಡರೆ ನೆಮ್ಮದಿಯ ಬದುಕು ನಡೆಸಲು ಸಾಧ್ಯವಾಗುತ್ತದೆ ಎಂದು ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಸೋಮವಾರ ನುಡಿದರು. ಕುಂದಾಪುರದ ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕಾನೂನು ಬರುವ ಮೊದಲೇ ಸಮಾಜದಲ್ಲಿ ಕೆಲವು ಮೌಲ್ಯಗಳಿದ್ದವು. ಜನರು ಅದಕ್ಕೆ ಗೌರವ ನೀಡುತ್ತಿದ್ದರು. ಆದರೆ ಈಗ ಆ ಸಮಾಜ ಬದಲಾಗಿದೆ. ಶ್ರೀಮಂತರಿಗೆ ಮಣೆ ಹಾಕುವ ಪ್ರವೃತ್ತಿ ತಾಂಡವವಾಡುತ್ತಿದೆ. ಪ್ರಾಮಾಣಿಕತೆಗೆ, ಪ್ರಾಮಾಣಿಕರಿಗೆ ಬೆಲೆ ಇಲ್ಲದ ಹಾಗೇ ಆಗಿದೆ. ದುರಾಸೆ ಎಂಬ […]