ವಾಹನ ನೀಡಲು ನಿರಾಕರಿಸಿದ ಆಸ್ಪತ್ರೆ, ಮಂಚದ ಮೇಲೆಯೇ ಶವ ಹೊತೊಯ್ದರು; ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್!

ಗರಿಯಾಬಂದ್‌: ಆಸ್ಪತ್ರೆಯವರು ವಾಹನ ನೀಡಲು ನಿರಾಕರಿಸಿದ್ದರಿಂದ ಮೃತದೇಹವನ್ನು ಮಂಚದ ಮೇಲೆಯೇ ಹೊತ್ತೊಯ್ದಿರುವ ಘಟನೆ ಛತ್ತೀಸಗಢದ ಗರಿಯಾಬಂದ್‌ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿಯ ಅಮ್ಲಿಪಡರ್‌ನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಚ್ಚಾಬಾಯಿ ಪಟೇಲ್‌ ಎಂಬ 60 ವರ್ಷದ ವೃದ್ಧೆಯು ಸೋಮವಾರ ಮೃತಪಟ್ಟಿದ್ದಾರೆ. ಮೃತದೇಹವನ್ನು ಕೊಂಡೊಯ್ಯಲು ವಾಹನವನ್ನು ಕಳುಹಿಸುವಂತೆ ಮೃತರ ಕುಟುಂಬಸ್ಥರು ಕೇಳಿಕೊಂಡಿದ್ದಾರೆ. ಆದರೆ, ಇದಕ್ಕೆ ಆಸ್ಪತ್ರೆಯವರು ನಿರಾಕರಿಸಿದ್ದಾರೆ. ಹೀಗಾಗಿ ಕುಟುಂಬಸ್ಥರು ಮೃತದೇಹವನ್ನು ಇರಿಸಿದ್ದ ಆಸ್ಪತ್ರೆಯ ಮಂಚವನ್ನೇ 2.5 ಕಿ.ಮೀ. ದೂರ ಹೆಗಲ ಮೇಲೆ ಹೊತ್ತು ಸಾಗಿದ್ದಾರೆ. ಈ ವಿಡಿಯೊ […]

2024-25ನೇ ಸಾಲಿನಲ್ಲಿ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್’ಗೆ 21.40 ಕೋಟಿ ರೂ. ಲಾಭ: ಯಶ್‌ಪಾಲ್ ಎ. ಸುವರ್ಣ

ಉಡುಪಿ: ಕರಾವಳಿ ಭಾಗದ ಪ್ರತಿಷ್ಠಿತ ಪಟ್ಟಣ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ 2024-25ನೇ ಸಾಲಿನಲ್ಲಿ ರೂ. 1063 ಕೋಟಿ ವ್ಯವಹಾರ ನಡೆಸಿ ರೂ. 21.40 ಕೋಟಿ ಲಾಭ ದಾಖಲಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ ತಿಳಿಸಿದ್ದಾರೆ. ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಸಹಕಾರಿ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕಿನ ಪರಿವೀಕ್ಷಣೆಗೆ ಒಳಪಟ್ಟು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳನ್ನು ಹೊಂದಿದ್ದು 50,000 ಗ್ರಾಹಕರ ಮೂಲಕ ವ್ಯವಹಾರ […]

ಕಾರ್ಕಳ ಕ್ರೈಸ್ಟ್ಕಿಂಗ್: ಉಡುಪಿ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳ ಫುಟ್ಬಾಲ್ ಪಂದ್ಯಾಟ

ಕಾರ್ಕಳ: ಉಡುಪಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಉಪನಿರ್ದೇಶಕರ ಕಛೇರಿ, ಉಡುಪಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇವರ ಸಹಯೋಗದಲ್ಲಿ ಉಡುಪಿ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ವಿಭಾಗಗಳ ಫುಟ್ಬಾಲ್ ಪಂದ್ಯಾಟವು ಕಾರ್ಕಳ ಕ್ರೈಸ್ಟ್ಕಿಂಗ್ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಸ್ಥಳೀಯ ಗಾಂಧಿ ಮೈದಾನದಲ್ಲಿ ನಡೆಯಿತು. ಕಾರ್ಕಳದ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷರಾದ ಅವಿನಾಶ್ ಶೆಟ್ಟಿ ಅವರು ದೀಪಬೆಳಗುವುದರ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ […]

MBBS ಓದುವ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸರಕಾರ: ಹೆಚ್ಚುವರಿ 400 ವೈದ್ಯಕೀಯ ಸೀಟುಗಳು ಲಭ್ಯ!

ಬೆಂಗಳೂರು: ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಎಂಬಿಬಿಎಸ್ ವ್ಯಾಸಂಗ ಮಾಡಲು ಬಯಸುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕರ್ನಾಟಕಕ್ಕೆ ಹೆಚ್ಚುವರಿ 400 ವೈದ್ಯಕೀಯ ಸೀಟುಗಳು ಲಭ್ಯವಾಗಿದ್ದು, ಎರಡನೇ ಸುತ್ತಿನ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಗಣಿಸಿದೆ. ನೀಟ್‌ ಫಲಿತಾಂಶದ ನಂತರ ಪ್ರಕಟಿಸಿದ್ದ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ 9,263 ಸೀಟುಗಳು ಲಭ್ಯವಿದ್ದವು. ರಾಜ್ಯದಲ್ಲಿ ಲಭ್ಯವಿರುವ ವೈದ್ಯಕೀಯ ಸೀಟುಗಳ ಸಂಖ್ಯೆ 9,663ಕ್ಕೆ ಏರಿಕೆಯಾಗಿದ್ದು, ರಾಜ್ಯದ ಎಂಟು ವೈದ್ಯಕೀಯ ಕಾಲೇಜುಗಳಲ್ಲಿ ತಲಾ 50 ಸೀಟುಗಳ ಹೆಚ್ಚಳಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) […]

ಮಣಿಪಾಲದ ನಳಂದಾ ಎಕ್ಸೆಲೆನ್ಸ್ ಸಂಸ್ಥೆಯಲ್ಲಿ ಆನ್ ಲೈನ್ JEE & NEET Early Edge ತರಗತಿಗಳ ಉದ್ಘಾಟನೆ: ವಿದ್ಯಾರ್ಥಿಗಳ ಕಲಿಯುವ ಕನಸಿಗೆ ಜೊತೆಯಾಗಲು ನಳಂದಾ ರೆಡಿ

ಮಣಿಪಾಲ: ಮಣಿಪಾಲದ ನಳಂದಾ ಎಕ್ಸೆಲೆನ್ಸ್ ಸಂಸ್ಥೆಯಲ್ಲಿ 8 ಮತ್ತು 9 ನೇ ತರಗತಿ ವಿದ್ಯಾರ್ಥಿಗಳಿಗೆ  Early Edge  JEE &NEET ಆನ್ಲೈನ್ ತರಗತಿಗಳ ಉದ್ಘಾಟನೆ ಅದ್ದೂರಿಯಾಗಿ ನಡೆಯಿತು. ಭರತನಾಟ್ಯದಲ್ಲಿ ವಿಶ್ವದಾಖಲೆ ಬರೆದ ವಿದೂಷಿ ದೀಕ್ಷಾ ಅವರು ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ತರಬೇತಿಗಳು ಬಹಳ ಮುಖ್ಯವಾಗಿದೆ ನಳಂದಾ ಎಕ್ಸೆಲೆನ್ಸ್ ತರಗತಿಗಳು ಯಶಸ್ವಿಯಾಗಿ ನಡೆಯಲಿ ಎಂದು ಸಂಸ್ಥೆಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ವಿದೂಷಿ ದೀಕ್ಷಾ ಅವರ ಪತಿ ರಾಹುಲ್, ನಳಂದಾ ಎಕ್ಸೆಲೆನ್ಸ್ ನ ವ್ಯವಸ್ಥಾಪಕ ನಿರ್ದೇಶಕರಾದ ವಿನಯ್ ಕುಮಾರ್ ಎಂ, […]