ಕೊಲ್ಲೂರು ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ “ಅತ್ಯುತ್ತಮ ಕಾರ್ಯ ನಿರ್ವಹಿಸುತ್ತಿರುವ ಸಹಕಾರಿ ಸಂಘ” ಪ್ರಶಸ್ತಿ

ಉಡುಪಿ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಮಹಾಸಭೆಯಲ್ಲಿ ಶನಿವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ “ಅತ್ಯುತ್ತಮ ಕಾರ್ಯ ನಿರ್ವಹಿಸುತ್ತಿರುವ ಸಹಕಾರಿ ಸಂಘ” ಪ್ರಶಸ್ತಿ ಪಡೆಯಿತು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಅಡಿಗ ಕೆ.ಎನ್ ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಗಣೇಶ್ ಶ್ಯಾನುಭೋಗ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರು ಉಪಸ್ಥಿತರಿದ್ದರು.

ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಅಕ್ಷಯ್ ಕುಮಾರ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ.

ಕುಂದಾಪುರ : ಆಗಸ್ಟ್ 31 ರಂದು ದಕ್ಷಿಣ ಭಾರತದ ಕರಾಟೆ ಚಾಂಪಿಯನ್ ಶಿಪ್ ಕೋರ ಮಂಗಲದ ಒಳಾಂಗಣ ಕ್ರೀಡಾಂಗಣ ಬೆಂಗಳೂರಿನಲ್ಲಿ ಆಯೋಜನೆ ಗೊಂಡಿತ್ತು.ಸೌತ್ ಝೋನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಕ್ಷಯ್ ಕುಮಾರ್ ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಸಾಧನೆಯು ಅನವರತವಾಗಿರಲಿ ಎಂದು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.

ಉಡುಪಿ: ಮೂವರು ಮುಸುಕುಧಾರಿ ಕಳ್ಳರಿಂದ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ

ಉಡುಪಿ: ಮೂವರು ಮುಸುಕುಧಾರಿ ಕಳ್ಳರು ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಘಟನೆ ಉಡುಪಿಯ ಕುಕ್ಕಿಕಟ್ಟೆಯ ಕಲ್ಯಾಣನಗರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಮೂವರು ಮುಸುಕುಧಾರಿ ಕಳ್ಳರು ಕುಕ್ಕಿಕಟ್ಟೆ ಭಾಗದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೂವರ ತಂಡವು ಕಲ್ಯಾಣನಗರದ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದೆ. ಈ ವೇಳೆ ಇನ್ನೊಂದು ಮನೆಯವರು ಎಚ್ಚರಗೊಳ್ಳುತ್ತಿದ್ದಂತೆ ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕಳ್ಳರ ತಂಡ ಬೇರೆ ಕಡೆಯೂ ಕಳ್ಳತನ ಮಾಡಿರುವ ಶಂಕೆ […]

ಮೂಡುಬಿದಿರೆ:ತಂದೆ-ತಾಯಿಯ ಕಣ್ಣುಗಳಲ್ಲಿ ಹೆಮ್ಮೆ ಮೂಡಿಸುವ ಕ್ಷಣ, ಪ್ರತಿಯೊಬ್ಬರ ಜೀವನದ ಶ್ರೇಷ್ಠ ಕ್ಷಣ: ಸಿಎ ತಬಿಶ್ ಹಸನ್

ಮೂಡುಬಿದಿರೆ: ಜೀವನದಲ್ಲಿ ಯಶಸ್ಸು ಕೇವಲ ಪ್ರತಿಭೆಯಿಂದ ನಿರ್ಧಾರವಾಗುವುದಿಲ್ಲ. ಶ್ರೇಷ್ಠ ಸಾಧನೆಯೆಡೆಗಿನ ತುಡಿತ, ಆತ್ಮವಿಶ್ವಾಸ, ನಿರಂತರ ಪರಿಶ್ರಮ ಹಾಗೂ ಗುರಿಯತ್ತ ಸರಿಯಾದ ಮಾರ್ಗದಲ್ಲಿ ಸಾಗುವ ಪ್ರಾಮಾಣಿಕ ಪ್ರಯತ್ನ ಸಾಧನೆಯನ್ನು ಸಹಕಾರಗೊಳಿಸುತ್ತದೆ ಎಂದು 2021ರ ಅಖಿಲ ಭಾರತ ಸಿಎ ಅಂತಿಮ ಪರೀಕ್ಷೆಯಲ್ಲಿ 10ನೇ ರ‍್ಯಾಂಕ್ ಪಡೆದ ಆಳ್ವಾಸ್‌ನ ಹಿರಿಯ ವಿದ್ಯಾರ್ಥಿ ಸಿಎ ತಬಿಶ್ ಹಸನ್ ಅಭಿಪ್ರಾಯಪಟ್ಟರು. ಶನಿವಾರ ಆಳ್ವಾಸ್ ಪಿಯು ಕಾಲೇಜಿನ ವಾಣಿಜ್ಯ ಸಂಘದ ಆಶ್ರಯದಲ್ಲಿ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿಯಲ್ಲಿ ಟಾಪ್ 10ರ […]

ಸಣ್ಣ ವ್ಯಾಪಾರಿಗಳ ಮೇಲಿನ ತೆರಿಗೆ ಹೊರೆ ತಗ್ಗಿಸಲಿದ್ದೇವೆ: ನಿರ್ಮಲಾ ಸೀತಾರಾಮನ್

ಚೆನ್ನೈ: ‘ಮುಂದಿನ ತಲೆಮಾರಿನ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆ’ಯು ಆರ್ಥಿಕತೆಯನ್ನು ಮುಕ್ತ ಮತ್ತು ಪಾರದರ್ಶಕವಾಗಿಸುತ್ತದೆ. ಮುಖ್ಯವಾಗಿ ಸಣ್ಣ ವ್ಯಾಪಾರಿಗಳ ಮೇಲಿನ ಹೊರೆಯನ್ನು ತಗ್ಗಿಸುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಜಿಎಸ್‌ಟಿ ಮಂಡಳಿ ಸಭೆಯ ಮುನ್ನಾದಿನವಾದ ಮಂಗಳವಾರ ಹೇಳಿದರು. ಕುಂಭಕೋಣಂನ ಸಿಟಿ ಯೂನಿಯನ್‌ ಬ್ಯಾಂಕ್‌ನ 120ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘2047ರ ವಿಕಸಿತ ಭಾರತದ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಬ್ಯಾಂಕ್‌ಗಳು ಸಾಲ ಸೌಕರ್ಯ ವಿಸ್ತರಣೆಯಷ್ಟೇ ಅಲ್ಲದೆ, ಮೂಲಸೌಕರ್ಯ ಅಭಿವೃದ್ಧಿಗೂ ಆದ್ಯತೆ ನೀಡಬೇಕು. ಅತಿ […]