ಕಾರ್ಕಳ ಕ್ರೈಸ್ಟ್ಕಿಂಗ್ :ಕ್ರಿಕೆಟ್ ಪಂದ್ಯಾಟದಲ್ಲಿ ಪ್ರೌಢ ಶಾಲಾಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ.

ಕಾರ್ಕಳ : ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕಾರ್ಕಳ ಇವರ ಸಹಯೋಗದಲ್ಲಿ ಶ್ರೀಮದ್ ಭುವನೇಂದ್ರ ಪ್ರೌಢಶಾಲೆ ಕಾರ್ಕಳ ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಕ್ರಿಕೆಟ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಆಯ್ಕೆಗೊಂಡಿದೆ. ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಪ್ರಸಾದ್ ತಂಡವನ್ನು ತರಬೇತುಗೊಳಿಸಿದ್ದರು.
ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ಆರ್ ಬಿ ಐ ಗವರ್ನರ್ ಸಂಜಯ್ ಮಲ್ಹೋತ್ರಾ

ಭಾರತ ಶೀಘ್ರದಲ್ಲೇ ವಿಶ್ವದ 3 ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ. ಇಂದೋರ್‌ನ ರಂಗವಾಸ ಗ್ರಾಮದಲ್ಲಿ ಸರ್ಕಾರಿ ಬ್ಯಾಂಕಿನ ಹಣಕಾಸು ಸೇರ್ಪಡೆ ಅಭಿಯಾನ “ಸಂತೃಪ್ತಿ ಶಿವರ್” ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಮಲ್ಹೋತ್ರಾ, 11 ವರ್ಷಗಳ ಹಿಂದೆ ಕೇಂದ್ರ ಸರ್ಕಾರ ಮತ್ತು ಆರ್‌ಬಿಐ ಸಹಯೋಗದೊಂದಿಗೆ ಜನ ಧನ್ ಯೋಜನೆಯನ್ನು ಪ್ರಾರಂಭಿಸಿದ್ದು, ಇದು ದೇಶಾದ್ಯಂತ ಅಭಿವೃದ್ಧಿಗೆ ಕಾರಣವಾಯಿತು ಎಂದು ಹೇಳಿದರು. ಇಂದು, ಭಾರತ ವಿಶ್ವದ 5 ಅತ್ಯಂತ ಅಭಿವೃದ್ಧಿ ಹೊಂದಿದ […]
ದಕ್ಷಿಣ ಭಾರತ ಕರಾಟೆ ಚಾಂಪಿಯನ್ಷಿಪ್ ನಲ್ಲಿ ಚಿನ್ನದ ಪದಕ ಗಳಿಸಿದ ಅರ್ನೋನ್ ಆಲ್ಮೆಡ

ಬೆಂಗಳೂರು: ಬೆಂಗಳೂರಿನ ಕೋರಮಂಗಲ ದಲ್ಲಿ ನಡೆದ 4 ನೇ ಯ ದಕ್ಷಿಣ ಭಾರತ ಕರಾಟೆ ಚಾಂಪಿನ್ಶಿಪ್ ನಲ್ಲಿ ಕುಂದಾಪುರದ ಅರ್ನೋನ್ ಡಿ ಆಲ್ಮೆಡಾ, 11 ರ ವಯೋಮಿತಿಯ ಕಟಾ ವಿಭಾಗದಲ್ಲಿ ಚಿನ್ನದ ಪದಕ ಹಾಗೂ 11 ವಯೋಮಿತಿಯ -40 ಕೆ ಜಿ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ. ಇವರು ಕುಂದಾಪುರದ ವಿಲ್ಸನ್ ಹಾಗೂ ಜ್ಯೋತಿ ಡಿ ಆಲ್ಮೆಡ ಅವರ ಪುತ್ರನಾಗಿದ್ದು, ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಶಾಲೆಯ 6 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾರೆ. ಇವರಿಗೆ […]
ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ: ಸೆ.5ರಂದು ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ಮಂಗಳೂರು: ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ವತಿಯಿಂದ ಸೆ.5ರಂದು ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಶ್ರೀ ಶರವು ಮಹಾಗಣಪತಿ ದೇವಸ್ಥಾನದ ಹತ್ತಿರದ ಶ್ರೀ ರಾಧಾಕೃಷ್ಣ ಹಾಲ್ (ಬಾಳಂಭಟ್ ಹಾಲ್)ನಲ್ಲಿ ನಡೆಯಲಿದೆ. ಬೆಳಗ್ಗೆ 11ಕ್ಕೆ ಬೆಂಗಳೂರಿನ ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರು ಡಾ.ಶ್ರೀ ನಿಶ್ಚಲಾನಂದನಾಥ ಮಹಾಸ್ವಾಮಿಗಳವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ.ನಿಟ್ಟೆ ಎನ್.ಎಂ.ಎ.ಎಂ. […]
ಒಂದೇ ವಾರದಲ್ಲಿ ಕುಸಿತ ಕಂಡ ಟೊಮೆಟೋ ದರ!

ಕೋಲಾರ: ಮಳೆ, ಮೋಡ ಕವಿದ ವಾತಾವರಣ ಮತ್ತು ರೋಗಬಾಧೆಯಿಂದ ಗುಣಮಟ್ಟ ಕಳೆದುಕೊಳ್ಳುತ್ತಿರುವ ಟೊಮೆಟೊ ಧಾರಣೆ ಮಾರುಕಟ್ಟೆಯಲ್ಲಿ ದಿಢೀರ್ ಕುಸಿತ ಕಂಡಿದೆ. ವಾರದ ಹಿಂದೆ ಕೋಲಾರ ಎಪಿಎಂಸಿ ಹರಾಜಿನಲ್ಲಿ ₹750ಕ್ಕೆ ಮಾರಾಟವಾಗಿದ್ದ 15 ಕೆ.ಜಿ ಟೊಮೆಟೊ ಬಾಕ್ಸ್ ಈಗ ₹300ಕ್ಕೆ ಕುಸಿದಿದೆ. ಗುಣಮಟ್ಟದ ಟೊಮೆಟೊ ಬಾಕ್ಸ್‌ಗೆ ಮಾತ್ರ ₹300 ಇದ್ದರೆ, ಇನ್ನುಳಿದ ಟೊಮೆಟೊ ಬಾಕ್ಸ್‌ಗಳು ಕೇವಲ ₹100ಕ್ಕೆ ಮಾರಾಟವಾಗುತ್ತಿವೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಕೆ.ಜಿ ಟೊಮೆಟೊ ಬೆಲೆ ₹15ರಿಂದ ₹20 ಇದೆ. ಹೆಚ್ಚು ಟೊಮೆಟೊ ಬೆಳೆಯುವ ಕೋಲಾರ ಜಿಲ್ಲೆಯಲ್ಲಿ ಸುಗ್ಗಿ […]